Karnataka Covid Death: ರಾಜ್ಯದಲ್ಲಿ ಇಂದು 24,214 ಕೊರೋನಾ ಕೇಸ್ ಪತ್ತೆ, ಬರೋಬ್ಬರಿ 476 ಜನ ಸಾವು!

ಕಳೆದ 24 ಗಂಟೆಗಳ ಅವಧಿ ಯಲ್ಲಿ ರಾಜ್ಯದಲ್ಲಿ 24,214 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ 5,949 ಪ್ರಕರಣಗಳು ಪತ್ತೆ ಯಾಗಿದೆ. ಅಲ್ಲದೆ, ರಾಜ್ಯ ರಾಜಧಾನಿ ಒಂದರಲ್ಲೇ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 273.

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

 • Share this:
  ಬೆಂಗಳೂರು (ಮೇ 27); ಎರಡನೇ ಅಲೆ ಕೊರೋನಾ ಸೋಂಕು ರಾಜ್ಯದಲ್ಲಿ ನಿಯಂತ್ರಣ ಮೀರಿದೆ. ಲಾಕ್​ಡೌನ್ ನಡುವೆಯೋ ಸೋಂಕು ನಿಯಂತ್ರಣ ವಾಗುತ್ತಿಲ್ಲ. ಕಳೆದ ಕೆಲ ವಾರದಿಂದ ದಿನವೊಂದಕ್ಕೆ ಸರಿ ಸುಮಾರು 25 ರಿಂದ 30 ಸಾವಿರ ಪ್ರಕರಣಗಳು ದಾಖಲಾಗುತ್ತಿದೆ. ಈ ನಡುವೆ ಇಂದು ಒಂದೇ ದಿನದಲ್ಲಿ ರಾಜ್ಯದಲ್ಲಿ 476 ಜನ ಕೊರೋನಾದಿಂದಾಗಿ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕು ನಿಯಂತ್ರಣ ಮೀರಿರುವುದು ಸ್ಪಷ್ಟವಾಗಿದೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ದಾಖಲೆಯಲ್ಲಿ ಕಳೆದ 24 ಗಂಟೆಗಳ ಅವಧಿ ಯಲ್ಲಿ ರಾಜ್ಯದಲ್ಲಿ 24,214 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ 5,949 ಪ್ರಕರಣಗಳು ಪತ್ತೆ ಯಾಗಿದೆ. ಅಲ್ಲದೆ, ರಾಜ್ಯ ರಾಜಧಾನಿ ಒಂದರಲ್ಲೇ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 273.

  ರಾಜ್ಯದಲ್ಲಿ ಈ ಮಟ್ಟಿಗೆ ಸೋಂಕು ಹರಡುತ್ತಿದ್ದು, ಹೀಗೆ ಆದರೆ, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಬಿಗಾಡಯಿಸಲಿದೆ. ಇದರ ನಡುವೆ ಬ್ಲಾಕ್ ಫಂಗಸ್​-ವೈಟ್​ ಫಂಗಸ್​ ಈಗಾಗಲೇ ಬೆದರಿಕೆ ಒಡ್ಡಿದ್ದು, ಇದರ ಬೆನ್ನಿಗೆ ಕೊರೋನಾ ಮೂರನೇ ಅಲೆಯೂ ಕಾಡುವ ಭೀತಿ ಎದುರಾಗಿದೆ. ಈ ಹಿನ್ನಲೆ ಸೋಂಕು ನಿಯಂತ್ರಣಕ್ಕೆ ಲಾಕ್​ಡೌನ್​ ಜಾರಿ ಮಾಡಲಾಗಿದೆ. ಮೇ. 10 ರಿಂದ ಮೇ 24ರವರೆಗೆ ಮೊದಲ ಹಂತದ ಲಾಕ್​ಡೌನ್​ ಜಾರಿ ಮಾಡಿದ್ದ ಸರ್ಕಾರ ಇದೀಗ ಈ ಲಾಕ್​ಡೌನ್​ ಅನ್ನು ಜೂನ್​ 07ರ ವರೆಗೆ ಮುಂದುವರೆಸಿದೆ. ಈ ಬಾರಿ ಕೆಲವು ವಿನಾಯಿತಿಗಳ ಹೊರಾತಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಇನ್ನಾದರೂ ಸೋಂಕು ನಿಯಂತ್ರಣಕ್ಕೆ ಬರಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

  ತಜ್ಞರ ಪ್ರಕಾರ, ಮುಂದಿನ ಕನಿಷ್ಠ 10 ರಿಂದ 14 ದಿನ ಬಹಳ ಕಷ್ಟಕರವಾದ ದಿನವಾಗಿದ್ದುಮ, ಸೋಂಕು ಹೆಚ್ಚು ಉಲ್ಬಣಗೊಳ್ಳಲಿದೆ. ಈ ಹಿನ್ನಲೆ ರಾಜ್ಯದಲ್ಲಿ ಲಾಕ್​ಡೌನ್​ ಮಹತ್ವದ ಪಾತ್ರ ನಿರ್ವಹಿಸಲಿದೆ ಎನ್ನಲಾಗುತ್ತಿದೆ. ಈ ಸೋಂಕು ನಿಯಂತ್ರಣಕ್ಕೆ ಇರುವ ಏಕೈಕ ಮಾರ್ಗ ಲಾಕ್​ಡೌನ್ ಆಗಿದ್ದು, ಸೋಂಕಿನ ಸರಪಳಿ ಕತ್ತರಿಸಲು ಜನರು ಮನೆಯಲ್ಲಿರುವುದೇ ಒಳಿತು ಎಂದು ತಜ್ಞರು ತಿಳಿಸಿದ್ದಾರೆ.

  ಭಾರತದಲ್ಲಿ ಕೊರೋನಾ ಕೇಕೆ:

  ಮೇ ತಿಂಗಳ ಮಧ್ಯ ಭಾಗದಲ್ಲಿ ಕೊರೋನಾ ಎರಡನೇ ಅಲೆ ತಾರಕಕ್ಕೇ ಏರುತ್ತದೆ. ತಿಂಗಳ ಕೊನೆಯಲ್ಲಿ ಕಡಿಮೆ ಆಗುತ್ತದೆ ಎಂಬ ದೇಶಿಯ ಮತ್ತು ವಿದೇಶಿ ತಜ್ಞರ ಅಭಿಪ್ರಾಯದಂತೆ ಮೇ 6ರಂದು ದೇಶದಲ್ಲಿ 4,14,188 ಪ್ರಕರಣಗಳು ಕಂಡುಬಂದಿದ್ದು ದಾಖಲೆಯಾಗಿತ್ತು. ನಂತರ ತಳಮುಖಿಯಾಗಿ ಸಾಗಿದ್ದ ಕೊರೋನಾ ಈಗ ಮೇ 25ರಿಂದ ಮತ್ತೆ ಏರುಗತಿಯಲ್ಲಿ ಸಾಗುತ್ತಿದೆ.‌

  ಇದನ್ನೂ ಓದಿ: Baba Ramdev: ಅವರಲ್ಲ ಅವರ ಅಪ್ಪನಿಂದಲೂ ನನ್ನನ್ನು ಬಂಧಿಸಲು ಸಾಧ್ಯವಿಲ್ಲ; ಬಾಬಾ ರಾಮ್​ದೇವ್ ಉದ್ಧಟತನದ ಹೇಳಿಕೆ

  ಮೇ 24ರಂದು ಮೊದಲ ಬಾರಿಗೆ ದೇಶದ ಕೊರೋನಾ ಪೀಡಿತರ ಸಂಖ್ಯೆ ಎರಡು ಲಕ್ಷಕ್ಕಿಂತ ಕಡಿಮೆ ಆಗಿತ್ತು. ಇದರಿಂದ ಇಡೀ ದೇಶವನ್ನೇ ಕಾಡಿ ಕಂಗೆಡಿಸಿದ್ದ ಎರಡನೇ ಸುತ್ತಿನ ಕೊರೋನಾ ಅಲೆ ಕೊನೆಯಾಗಲಿದೆ ಎಂಬ ನಿಟ್ಟುಸಿರು ಬಿಡುವಷ್ಟರಲ್ಲಿ ಮೇ 25ರಿಂದ ಮತ್ತೆ ದೇಶದಲ್ಲಿ 2 ಲಕ್ಷಕ್ಕೂ ಹೆಚ್ಚು (2,08,921) ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆ ಆಗುತ್ತಿವೆ. ಮೇ 6ರಂದು ದೇಶದಲ್ಲಿ 4,14,188 ಪ್ರಕರಣಗಳು ಕಂಡುಬಂದಿದ್ದವು. ನಂತರ ಕೆಳಮುಖವಾಗಿ ಸಾಗಿದ ಕೊರೋನಾ ಎರಡನೇ ಅಲೆಯಲ್ಲಿ ಮೇ 16ರಂದು ಮೊದಲ ಬಾರಿಗೆ ಮೂರು ಲಕ್ಷಕ್ಕೂ ಕಡಿಮೆ ಪ್ರಕರಣಗಳು (2,81,386) ಕಂಡು ಬಂದಿದ್ದವು. ಮೇ 24ರಂದು ಮೊದಲ ಬಾರಿಗೆ ಎರಡು ಲಕ್ಷಕ್ಕಿಂತ ಕಡಿಮೆ (1,96,427) ಆಗಿದ್ದವು.

  ಇದನ್ನೂ ಓದಿ: Priyanka Gandhi: ವಿಶ್ವದಲ್ಲೇ ಅತಿಹೆಚ್ಚು ಕೋವಿಡ್ ಲಸಿಕೆ ತಯಾರಿಸುವ ಭಾರತದಲ್ಲೇ ಕೊರತೆ ಏಕೆ?ಪ್ರಿಯಾಂಕಾ ಗಾಂಧಿ ಪ್ರಶ್ನೆ

  ಬುಧವಾರ 2,11,298 ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,73,69,093ಕ್ಕೆ ಏರಿಕೆ ಆಗಿದೆ.‌ ಬುಧವಾರ 3,847 ಜನರು ಬಲಿ ಆಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 3,15,235ಕ್ಕೆ ಏರಿಕೆ ಆಗಿದೆ. ಈವರೆಗೆ 2,46,33,951 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಇನ್ನೂ 24,19,907 ಆಕ್ಟಿವ್ ಕೇಸುಗಳಿವೆ. ದೇಶದಲ್ಲಿ ಕೊರೋನಾ ಲಸಿಕೆ ಪಡೆದುಕೊಂಡವರ ಸಂಖ್ಯೆ 20 ಕೋಟಿ ದಾಟಿದೆ.‌ ಈವರೆಗೆ 20,26,95,874 ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ‌.

  ದೇಶದಲ್ಲಿ ಈಗ ಅತಿ ಹೆಚ್ಚು ಕೊರೋನಾ ಪ್ರಕರಣಗಳು ಕಂಡುಬಂದಿರುವುದು ತಮಿಳುನಾಡಿನಲ್ಲಿ. ಮಂಗಳವಾರ ತಮಿಳುನಾಡಿನಲ್ಲಿ 33.76 ಸಾವಿರ ಹೊಸ ಪ್ರಕರಣಗಳು ಕಂಡುಬಂದಿದ್ದರೆ ಕೇರಳ ಎರಡನೇ‌ ಸ್ಥಾನದಲ್ಲಿದೆ. ಕೇರಳದಲ್ಲಿ ನಿನ್ನೆ 28.8 ಸಾವಿರ ಪ್ರಕರಣಗಳು ಕಂಡುಬಂದಿವೆ. ಎರಡನೇ ಸ್ಥಾನದಲ್ಲಿದ್ದ ಕರ್ನಾಟಕ ಈಗ ಮೂರನೇ ಸ್ಥಾನಕ್ಕೆ ಬಂದಿದ್ದು ನಿನ್ನೆ ಕರ್ನಾಟಕದಲ್ಲಿ 26.81 ಸಾವಿರ ಪ್ರಕರಣಗಳು ಗೋಚರಿಸಿವೆ.‌ ಸಂಪೂರ್ಣ ನಿಯಂತ್ರಣದ ಹಾದಿಯಲ್ಲಿರುವ ಮಹಾರಾಷ್ಟ್ರ ಈಗ ನಾಲ್ಕನೇ ಸ್ಥಾನದಲ್ಲಿದ್ದು ನಿನ್ನೆ 24.75 ಸಾವಿರ ಪ್ರಕರಣಗಳು ಪತ್ತೆಯಾಗಿವೆ.‌
  Published by:MAshok Kumar
  First published: