HOME » NEWS » Coronavirus-latest-news » 265 PEOPLE INFECTED FROM CORONA VIRUS IN KERALA GNR

ಕೇರಳದಲ್ಲಿಂದು 24 ಮಂದಿಗೆ ಕೊರೋನಾ; ಸೋಂಕಿತರ ಸಂಖ್ಯೆ 265ಕ್ಕೇರಿಕೆ

ಪ್ರಧಾನಿ ನರೇಂದ್ರ ಮೋದಿ ನೀಡಿದ ಕರೆಯಂತೆ ಏ.14ರವರೆಗೂ ಕೇರಳ ಲಾಕ್​ಡೌನ್​ ಮಾಡಲಾಗಿದೆ. ಅಗತ್ಯ ಮತ್ತು ತುರ್ತು ಸೇವೆಗಳನ್ನು ಹೊರತುಪಡಿಸಿ ಕೇರಳದಲ್ಲಿ ಮತ್ಯಾವ ಸೇವೆಯೂ ಲಭ್ಯವಿರುವುದಿಲ್ಲ. ರಾಜ್ಯದ ಗಡಿಭಾಗಗಳಲ್ಲಿ ನಿರ್ಬಂಧ ಹಾಕಲಾಗಿದೆ. ಸಾರ್ವಜನಿಕ ಸಾರಿಗೆ ಲಭ್ಯವಿಲ್ಲ, ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಪೆಟ್ರೋಲ್,​ ಎಲ್​ಪಿಜಿ ಗ್ಯಾಸ್​ ದೊರೆಯುತ್ತದೆ.


Updated:April 1, 2020, 8:03 PM IST
ಕೇರಳದಲ್ಲಿಂದು 24 ಮಂದಿಗೆ ಕೊರೋನಾ; ಸೋಂಕಿತರ ಸಂಖ್ಯೆ 265ಕ್ಕೇರಿಕೆ
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್
  • Share this:
ನವದೆಹಲಿ(ಏ.01): ಇಂದು ಕೇರಳದಲ್ಲಿ 24 ಹೊಸ ಕೊರೋನಾ ಪಾಸಿಟಿವ್​ ಪ್ರಕರಣಗಳು ಪತ್ತೆಯಾಗಿವೆ ಎಂದು ಸಿಎಂ ಪಿಣರಾಯ್​​ ವಿಜಯನ್​ ಹೇಳಿದ್ದಾರೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 265ಕ್ಕೆ ಏರಿಯಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೀಡಿದ ಕರೆಯಂತೆ ಏ.14ರವರೆಗೂ ಕೇರಳ ಲಾಕ್​ಡೌನ್​ ಮಾಡಲಾಗಿದೆ. ಅಗತ್ಯ ಮತ್ತು ತುರ್ತು ಸೇವೆಗಳನ್ನು ಹೊರತುಪಡಿಸಿ ಕೇರಳದಲ್ಲಿ ಮತ್ಯಾವ ಸೇವೆಯೂ ಲಭ್ಯವಿರುವುದಿಲ್ಲ. ರಾಜ್ಯದ ಗಡಿಭಾಗಗಳಲ್ಲಿ ನಿರ್ಬಂಧ ಹಾಕಲಾಗಿದೆ. ಸಾರ್ವಜನಿಕ ಸಾರಿಗೆ ಲಭ್ಯವಿಲ್ಲ, ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಪೆಟ್ರೋಲ್,​ ಎಲ್​ಪಿಜಿ ಗ್ಯಾಸ್​ ದೊರೆಯುತ್ತದೆ.

ರಾಜ್ಯದ ಎಲ್ಲಾ ರೆಸ್ಟೋರೆಂಟ್​ಗಳನ್ನು ಮುಚ್ಚಲಾಗಿದೆ. ಆದರೆ ಹೋಮ್ ಡೆಲಿವರಿ ಸೌಲಭ್ಯ ಇರುತ್ತದೆ. ಅಗತ್ಯ ವಸ್ತುಗಳ ವಿತರಣೆ ಲಭ್ಯವಿರುತ್ತದೆ. ಸಾರ್ವಜನಿಕರು ಆದಷ್ಟು ಮನೆಯೊಳಗೆ ಇರುವಂತೆ ಕೇರಳ ಸಿಎಂ ಮನವಿ ಮಾಡಿದ್ದಾರೆ. ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಿದ್ದಾರೆ. ಬೇರೆ ರಾಜ್ಯಗಳಿಂದ ಕೇರಳಕ್ಕೆ ಆಗಮಿಸುವವರನ್ನು 14 ದಿನ ಕಡ್ಡಾಯವಾಗಿ ನಿಗಾ ಘಟಕದಲ್ಲಿ ಇರಿಸಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರೆದ ಕೊರೋನಾ ಆರ್ಭಟ: ಇಂದು 4 ಹೊಸ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 105ಕ್ಕೇರಿಕೆ

ಭಾರತದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಎಂದಿನಂತೆಯೇ ಮುಂದುವರೆದಿದೆ. ಇಂದು ಮಹಾರಾಷ್ಟ್ರದಲ್ಲಿ ಮತ್ತೋರ್ವ ವ್ಯಕ್ತಿ ಸೋಂಕಿಗೆ ಬಲಿಯಾದ ಕಾರಣ ಮೃತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ಸುಮಾರು 242 ಮಂದಿಗೆ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಕೊರೋನಾ ಪೀಡಿತರ ಸಂಖ್ಯೆ 1,637ಕ್ಕೆ ಏರಿಕೆಯಾಗಿದೆ. ಈ ಪೈಕಿ 133 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ.

 
First published: April 1, 2020, 8:03 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories