ಕೊರೋನಾ ಭೀತಿ: ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ

ಈ ಮುನ್ನ ರಾಜ್ಯಾದ್ಯಂತ ಕೊರೋನಾ ವೈರಸ್​ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಮಾ. 27ರಂದು ನಡೆಯಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದರು.

ಶಿಕ್ಷಣ ಸಚಿವ ಸುರೇಶ್ ಕುಮಾರ್.

ಶಿಕ್ಷಣ ಸಚಿವ ಸುರೇಶ್ ಕುಮಾರ್.

  • Share this:
    ಬೆಂಗಳೂರು(ಮಾ.22): ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ಆದೇಶ ಹೊರಡಿಸಿದ್ಧಾರೆ. ಕೊರೋನಾ ಭೀತಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂದೂಡಲಾಗಿದೆ. ಸದ್ಯದಲ್ಲೇ ದ್ವಿತೀಯ ಪಿಯು ಅಂತಿಮ ವಿಷಯದ ಪರೀಕ್ಷೆ ಯಾವಾಗ ನಡೆಯಲಿದೆ ಎಂದು ದಿನಾಂಕವನ್ನು ಪ್ರಕಟಿಸಲಾಗುವುದು. ಆಗ ವಿದ್ಯಾರ್ಥಿಗಳು ಯಾವುದೇ ಚಿಂತೆಯಿಲ್ಲದೇ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬಹುದು ಎನ್ನಲಾಗಿದೆ.

    ಈ ಮುನ್ನ ರಾಜ್ಯಾದ್ಯಂತ ಕೊರೋನಾ ವೈರಸ್​ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಮಾ. 27ರಂದು ನಡೆಯಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದರು.

    ಈಗಾಗಲೇ ಸಿಬಿಎಸ್​ಇ, ಐಸಿಎಸ್​ಇ ಪರೀಕ್ಷೆಗಳನ್ನು ಮುಂದೂಡಲಾಗಿದೆ. 6ನೇ ತರಗತಿಯವರೆಗಿನ ಮಕ್ಕಳಿಗೆ ಪರೀಕ್ಷೆಯನ್ನೇ ರದ್ದು ಮಾಡಿ, ರಜೆ ಘೋಷಿಸಲಾಗಿದೆ. ಇದೇ ತಿಂಗಳ 27ರಿಂದ ಏಪ್ರಿಲ್ 9ರವರೆಗೆ ಕರ್ನಾಟಕದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಬೇಕಾಗಿತ್ತು. ಇದೀಗ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ದೃಷ್ಟಿಯಿಂದ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ.

    ಇದನ್ನೂ ಓದಿ: ಮಾ. 27ರಂದು ನಡೆಯಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ ಮುಂದೂಡಿಕೆ; ಸಿಎಂ ಘೋಷಣೆ

    ಎಸ್​ಎಸ್​ಎಲ್​ಸಿ ಪರೀಕ್ಷೆ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಹಾಗೇ, ಎಲ್ಲ ಚುನಾವಣೆಗಳನ್ನು ಕೂಡ ಮುಂದೂಡಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದು ಕಷ್ಟ. ಕೊರೋನಾ ಸೋಂಕು ಹರಡುವುದನ್ನು ತಡೆಯುವುದೇ ನಮ್ಮ ಮುಂದಿರುವ ದೊಡ್ಡ ಸವಾಲಾಗಿದೆ. ಈ ನಿಟ್ಟಿನಲ್ಲಿ ಈ ತಿಂಗಳ 27ರಿಂದ ನಡೆಯಬೇಕಿದ್ದ 10ನೇ ತರಗತಿ ಪರೀಕ್ಷೆ ಸೇರಿ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದರು.

    !function(e,i,n,s){var t="InfogramEmbeds",d=e.getElementsByTagName("script")[0];if(window[t]&&window[t].initialized)window[t].process&&window[t].process();else if(!e.getElementById(n)){var o=e.createElement("script");o.async=1,o.id=n,o.src="https://e.infogram.com/js/dist/embed-loader-min.js",d.parentNode.insertBefore(o,d)}}(document,0,"infogram-async");
    First published: