HOME » NEWS » Coronavirus-latest-news » 39510 CORONA CASES DETECTED TODAY 480 DEATHS IN KARNATAKA MAK

Karnataka Covid Death: ರಾಜ್ಯದಲ್ಲಿ ಇಂದು 39,510 ಕೊರೋನಾ ಕೇಸ್ ಪತ್ತೆ, 480 ಜನ ಸಾವು!

ಮೇ.10 ರಿಂದ ಮೇ 24ರವರೆಗೆ ಲಾಕ್​ಡೌನ್​ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಈ ಬಾರಿ ಕೆಲವು ವಿನಾಯಿತಿಗಳ ಹೊರಾತಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಇನ್ನಾದರೂ ಸೋಂಕು ನಿಯಂತ್ರಣಕ್ಕೆ ಬರಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

news18-kannada
Updated:May 11, 2021, 7:52 PM IST
Karnataka Covid Death: ರಾಜ್ಯದಲ್ಲಿ ಇಂದು 39,510 ಕೊರೋನಾ ಕೇಸ್ ಪತ್ತೆ, 480 ಜನ ಸಾವು!
ಸೋಂಕಿತರ ಅಂತ್ಯಕ್ರಿಯೆ.
  • Share this:
ಬೆಂಗಳೂರು (ಮೇ 11); ಎರಡನೇ ಅಲೆ ಕೊರೋನಾ ಸೋಂಕು ರಾಜ್ಯದಲ್ಲಿ ನಿಯಂತ್ರಣ ಮೀರಿದೆ. ಲಾಕ್​ಡೌನ್ ನಡುವೆಯೋ ಸೋಂಕು ನಿಯಂತ್ರಣ ವಾಗುತ್ತಿಲ್ಲ. ಕಳೆದ ಒಂದು ವಾರದಿಂದ ದಿನವೊಂದಕ್ಕೆ ಸರಿ ಸುಮಾರು 50 ಸಾವಿರ ಪ್ರಕರಣಗಳು ದಾಖಲಾಗುತ್ತಿದೆ. ಈ ನಡುವೆ ಇಂದು ಒಂದೇ ದಿನದಲ್ಲಿ ರಾಜ್ಯದಲ್ಲಿ 480 ಜನ ಕೊರೋನಾದಿಂದಾಗಿ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕು ನಿಯಂತ್ರಣ ಮೀರಿರುವುದು ಸ್ಪಷ್ಟವಾಗಿದೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ದಾಖಲೆಯಲ್ಲಿ ಕಳೆದ 24 ಗಂಟೆಗಳ ಅವಧಿ ಯಲ್ಲಿ ರಾಜ್ಯದಲ್ಲಿ 39,510 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ 20, 897 ಪ್ರಕರಣಗಳು ಪತ್ತೆ ಯಾಗಿದೆ. ರಾಜ್ಯದಲ್ಲಿ 7 ಲಕ್ಷಕ್ಕೂ ಅಧಿಕ ಸಕ್ರೀಯ ಪ್ರಕರಣಗಳಿವೆ. ಇನ್ನೂ ಬೆಂಗಳೂರು ಒಂದರಲ್ಲೇ 15,879 ಹೊಸ ಕೇಸ್ ಹಾಗೂ 259 ಸಾವು ಸಂಭವಿಸಿದ್ದು, 4.2 ಲಕ್ಷ ಸಕ್ರೀಯ ಸೋಂಕಿತರು ಬೆಂಗಳೂರಲ್ಲೆ ಇದ್ದಾರೆ.

ರಾಜ್ಯದಲ್ಲಿ ಈ ಮಟ್ಟಿಗೆ ಸೋಂಕು ಹರಡುತ್ತಿದ್ದು, ಹೀಗೆ ಆದರೆ, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಬಿಗಾಡಯಿಸಲಿದೆ. ಈ ಹಿನ್ನಲೆ ಸೋಂಕು ನಿಯಂತ್ರಣಕ್ಕೆ ಲಾಕ್​ಡೌನ್​ ಜಾರಿ ಮಾಡಲಾಗಿದೆ. ಮೇ. 10 ರಿಂದ ಮೇ 24ರವರೆಗೆ ಲಾಕ್​ಡೌನ್​ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಈ ಬಾರಿ ಕೆಲವು ವಿನಾಯಿತಿಗಳ ಹೊರಾತಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಇನ್ನಾದರೂ ಸೋಂಕು ನಿಯಂತ್ರಣಕ್ಕೆ ಬರಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

ತಜ್ಞರ ಪ್ರಕಾರ, ಮುಂದಿನ ಕನಿಷ್ಠ 10 ರಿಂದ 14 ದಿನ ಬಹಳ ಕಷ್ಟಕರವಾದ ದಿನವಾಗಿದ್ದುಮ, ಸೋಂಕು ಹೆಚ್ಚು ಉಲ್ಬಣಗೊಳ್ಳಲಿದೆ. ಈ ಹಿನ್ನಲೆ ರಾಜ್ಯದಲ್ಲಿ ಲಾಕ್​ಡೌನ್​ ಮಹತ್ವದ ಪಾತ್ರ ನಿರ್ವಹಿಸಲಿದೆ ಎನ್ನಲಾಗುತ್ತಿದೆ. ಈ ಸೋಂಕು ನಿಯಂತ್ರಣಕ್ಕೆ ಇರುವ ಏಕೈಕ ಮಾರ್ಗ ಲಾಕ್​ಡೌನ್ ಆಗಿದ್ದು, ಸೋಂಕಿನ ಸರಪಳಿ ಕತ್ತರಿಸಲು ಜನರು ಮನೆಯಲ್ಲಿರುವುದೇ ಒಳಿತು ಎಂದು ತಜ್ಞರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದ್ದಂತೆ ಮತ್ತಷ್ಟು ಆಕ್ಸಿಜನ್​ ಮತ್ತು ಬೆಡ್​ ಸಮಸ್ಯೆ ಹೆಚ್ಚಲಿದೆ. ಈ ಹಿನ್ನಲೆ ಮತ್ತಷ್ಟು ಆಕ್ಸಿಜನ್​ ಪೂರೈಕೆಗೆ ಮತ್ತು ಕೊರೋನಾ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸುವ ಅವಶ್ಯಕತೆ ಇದೆ.ಭಾರತದಲ್ಲಿ ಕೊರೋನಾ ಆರ್ಭಟ:

ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ‌.‌ ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು, ಏಪ್ರಿಲ್ 14ರಿಂದ ದಿನ ಒಂದರಲ್ಲಿ ಎರಡು ಲಕ್ಷಕ್ಕೂ ‌ಹೆಚ್ಚು‌, ಏಪ್ರಿಲ್ 21ರಿಂದ ದಿನ‌ ಒಂದರಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಹಾಗೂ ಏಪ್ರಿಲ್ 30ರಿಂದ ದಿನ‌ ಒಂದರಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕು ಪೀಡಿತರಾಗುತ್ತಿದ್ದರು. ಈಗ ತುಸು ಕಡಿಮೆಯಾಗಿ ಮೂರು ಲಕ್ಷಕ್ಕೂ ಹೆಚ್ಚು ಜನ ಸೋಂಕು ಪೀಡಿತರಾಗುತ್ತಿದ್ದಾರೆ.

ಇದನ್ನೂ ಓದಿ: Covid Vaccine: ವ್ಯಾಕ್ಸಿನ್​ ಫಾರ್ಮುಲಾವನ್ನು ಇತರೆ ಕಂಪನಿಗಳಿಗೂ ನೀಡಿ, ಲಸಿಕೆ ಕೊರತೆ ನೀಗಿಸಿ; ಕೇಂದ್ರಕ್ಕೆ ದೆಹಲಿ ಸಿಎಂ ಸಲಹೆಸೋಮವಾರ 3,29,942 ಪ್ರಕರಣಗಳು ಪತ್ತೆಯಾಗಿವೆ ಮತ್ತು ಡಿಸ್ಚಾರ್ಜ್ ಆದವರು 3,56,082 ಜನ. ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,29,92,517ಕ್ಕೆ ಏರಿಕೆ ಆಗಿದೆ.‌ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ‌ ಹೆಚ್ಚಾಗಿದೆ. ಸೋಮವಾರ 3,876 ಜನರು ಬಲಿ ಆಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆದವರ ಸಂಖ್ಯೆ 2,49,992ಕ್ಕೆ ಏರಿಕೆ ಆಗಿದೆ.
Youtube Video

ದೇಶದಲ್ಲಿ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ. ಅದಾದ ಬಳಿಕ ಅದು ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಅತಿಹೆಚ್ಚಾಗಿತ್ತು.
Published by: MAshok Kumar
First published: May 11, 2021, 7:51 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories