ಕೊರೋನಾ ವೈರಸ್ (Coronavirus) ಈಗಾಗಲೇ ಭಾರತದಲ್ಲಿ ಮಾರಣಾಂತಿಕವಾಗಿದೆ. ಮೊದಲ ಮತ್ತು ಎರಡನೇ ಅಲೆ ಸಾಲು ಸಾಲಾಗಿ ಲಕ್ಷಾಂತರ ಜನರ ಜೀವವನ್ನು ಬಲಿ ಪಡೆದಿದೆ. ಈ ನಡುವೆ ಮೂರನೇ ಕೊರೋನಾ ಅಲೆ ಉಂಟುಮಾಡಬಹುದಾದ ಅನಾಹುತಕ್ಕೆ ಇಡೀ ದೇಶ ಹೆದರಿರುವುದು ಸುಳ್ಳಲ್ಲ. ತಜ್ಞರು ಸಹ ಈ ಬಗ್ಗೆ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ದೇಶದ ಆರೋಗ್ಯ ವ್ಯವಸ್ಥೆ ಯನ್ನು ಮತ್ತಷ್ಟು ಸುಧಾರಿಸುವಂತೆ ಸೂಚನೆಯನ್ನೂ ನೀಡಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಇದೀಗ ಫಿರೋಜಾಬಾದ್‌ನಲ್ಲಿ (Firozabad) ಮಂಗಳವಾರ 33ಮಕ್ಕಳೂ ಸೇರಿದಂತೆ 40 ಮಂದಿ ನಿಗೂಢ ರೋಗಕ್ಕೆ (Mysterious Fever) ತುತ್ತಾಗಿ ಪ್ರಾಣ ಕಳೆದುಕೊಂಡಿದ್ದರು. ಇದು ಯಾವ ರೋಗ ಎಂದೂ ಗುರುತಿಸುವುದು ಸಹ ಸಾಧ್ಯವಾಗಿರಲಿಲ್ಲ. ಆದರೆ, ಇಂದು ಸಾವಿನ ಸಂಖ್ಯೆ 53 ಕ್ಕೆ ಏರಿಕೆ ಕಂಡಿದ್ದು, ಶಂಕಿತ ಢೆಂಗ್ಯೂ ಎಂದು ಅಂದಾಜಿಸಲಾಗಿದೆ. ಅಲ್ಲದೆ, ಈ ಬಗ್ಗೆ ಉತ್ತರ ಪ್ರದೇಶ ಸರ್ಕಾರವನ್ನು ವಿಚಾರಣೆ ನಡೆಸಲು ಕೇಂದ್ರ ಸರ್ಕಾರ ಸೂಚಿಸಿದೆ ಎನ್ನಲಾಗಿದೆ.
ಫಿರೋಜಾಬಾದ್ ವೈದ್ಯಕೀಯ ಕಾಲೇಜಿನಲ್ಲಿ ರೋಗಕ್ಕೆ ತುತ್ತಾದವರು ಮತ್ತು ಮಕ್ಕಳ ಪೋಷಕರ ದೃಶ್ಯಗಳು ಕರುಣಾಜನಕವಾಗಿದ್ದು, ಜ್ವರದಿಂದ ಬಳಲುತ್ತಿರುವ ಮಕ್ಕಳ ಚೇತರಿಕೆಗೆ ಪೋಷಕರು ಪ್ರಾರ್ಥಿಸುತ್ತಿದ್ದಾರೆ. ಆರು ವರ್ಷದ ಲಕ್ಕಿ ಎಂಬ ಬಾಲಕ ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಆತನ ಕುಟುಂಬದವರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ, ಆಗ್ರಾಗೆ ಕರೆದೊಯ್ಯುವಂತೆ ವೈದ್ಯರು ಹೇಳಿದ್ದರು. ಆಗ್ರಾ ತಲುಪಲು ಹತ್ತು ನಿಮಿಷಗಖು ಇರುವಾಗ ಆತ ಕೊನೆಯುಸಿರೆಳೆದರು ಎಂದು ಮಗುವಿನ ಚಿಕ್ಕಪ್ಪ ಪ್ರಕಾಶ್ ಹೇಳಿದ್ದಾರೆ.
ಆರು ದಿನಗಳ ಹಿಂದೆ ಮಗ ಮತ್ತು ಮಗಳನ್ನು ಆಸ್ಪತ್ರೆಗೆ ಸೇರಿಸಿದ್ದ ಸುನೀಲ್ ಎಂಬುವರ ಮಗಳು ಅಂಜಲಿ ತೀವ್ರ ಜ್ವರದಿಂದ ಮೃತಪಟ್ಟಿದ್ದಾರೆ. ಈಗ ಮಗ ಅಭಿಜಿತ್ ಚೇತರಿಕೆಗಾಗಿ ಆಸ್ಪತ್ರೆಯಲ್ಲಿ ಕುಳಿತು ಪ್ರಾರ್ಥಿಸುತ್ತಿದ್ದಾರೆ.
ಫಿರೋಜಾಬಾದ್ ವೈದ್ಯಕೀಯ ಕಾಲೇಜಿನ ಮಕ್ಕಳ ತಜ್ಞ ಡಾ ಎಲ್.ಕೆ ಗುಪ್ತಾ ಅವರು, "ಹೆಚ್ಚಿನ ಮಕ್ಕಳು ವೈರಲ್ ಜ್ವರದಿಂದ ಬಳಲುತ್ತಿದ್ದಾರೆ. ಅದರಲ್ಲಿ ಡೆಂಗ್ಯೂ ಸೋಂಕಿಗೆ ಒಳಗಾಗಿದ್ದಾರೆ. ಪ್ರಸ್ತುತ 186 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿದ್ದಾರೆ" ಎಂದು ಹೇಳಿದ್ದಾರೆ.
ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ವಿಜಯ್ ಸಿಂಗ್, 1 ರಿಂದ 8ನೇ ತರಗತಿಯ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಸೆಪ್ಟೆಂಬರ್ 6 ರವರೆಗೆ ಮುಚ್ಚುವಂತೆ ಆದೇಶಿಸಿದ್ದಾರೆ. ಮಂಗಳವಾರ ಫಿರೋಜಾಬಾದ್‌ಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, "ಇದುವರೆಗೆ 32 ಮಕ್ಕಳು ಮತ್ತು 7 ವಯಸ್ಕರು ಸಾವನ್ನಪ್ಪಿದ್ದಾರೆ" ಎಂದು ಸ್ಪಷ್ಟಪಡಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತಿಯೊಬ್ಬ ರೋಗಿಗೂ ಸರಿಯಾದ ಚಿಕಿತ್ಸೆ ಸಿಗುವ ಬಗ್ಗೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.
ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸದಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದ ಆದಿತ್ಯನಾಥ್, ಇಷ್ಟು ಜನರ ಸಾವಿನ ಕಾರಣವಾದ ನಿಗೂಢ ರೋಗದ ಬಗ್ಗೆ ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ಕಾಲೇಜಿನ ವೈದ್ಯರ ತಂಡವು ತನಿಖೆ ಮಾಡಲಿದೆ ಎಂದು ಮಾಹಿತಿ ನೀಡಿದ್ದರು.
ಇದನ್ನೂ ಓದಿ: Koramangala Accident| ಕಾರು ಅಪಘಾತದ ಬಗ್ಗೆ ಸಂಪೂರ್ಣ ವರದಿ ತಯಾರಿಸುತ್ತಿರುವ ಪೊಲೀಸರು
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ