ಇಂದೋರ್​ನಲ್ಲಿ ಮೃತಪಟ್ಟ 47 ವರ್ಷದ ಕೊರೋನಾ ವೈರಸ್ ಶಂಕಿತ ವ್ಯಕ್ತಿ

ಈ ವ್ಯಕ್ತಿಗೆ ಈ ಹಿಂದೆ ಉಜ್ಜಯಿನಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಇಂದೋರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಪರೀಕ್ಷೆಯ ವರದಿ ಇನ್ನು ಬರಬೇಕಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ

news18-kannada
Updated:March 26, 2020, 1:08 PM IST
ಇಂದೋರ್​ನಲ್ಲಿ ಮೃತಪಟ್ಟ 47 ವರ್ಷದ ಕೊರೋನಾ ವೈರಸ್ ಶಂಕಿತ ವ್ಯಕ್ತಿ
ಸಾಂದರ್ಭಿಕ ಚಿತ್ರ
  • Share this:
ಇಂದೋರ್: ಕೊರೋನಾ ವೈರಸ್ ತಗುಲಿರಬಹುದು ಎಂದು ಶಂಕಿಸಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾದ 47 ವರ್ಷದ ವ್ಯಕ್ತಿ ಗುರುವಾರ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅವರ ಪರೀಕ್ಷೆ ವರದಿಗಳು ಇನ್ನು ಬರಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವ್ಯಕ್ತಿಗೆ ಈ ಹಿಂದೆ ಉಜ್ಜಯಿನಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಇಂದೋರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಅಲ್ಲದೇ ಈ ರೋಗಿ ಬೇರೆ ದೇಶಗಳಿಗೆ ಪ್ರಯಾಣಿಸಿದ ಇತಿಹಾಸ ಇಲ್ಲ ಎಂದು ಅವರು ಹೇಳಿದ್ದಾರೆ.

ಕೊರೋನಾ ವೈರಸ್ ಅಟ್ಟಹಾಸಕ್ಕೆ ಭಾರತದಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ. ಇಲ್ಲಿಯವರೆಗೆ ಭಾರತದಲ್ಲಿ ಮೃತರ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದರೆ, ಕೊರೋನಾ ಸೋಂಕಿತರ ಸಂಖ್ಯೆ 649 ಏರಿದೆ.

ಇದನ್ನೂ ಓದಿ: ಕೊರೋನಾ ವೈರಸ್​ಗೆ ಕರ್ನಾಟಕದಲ್ಲಿ ಎರಡನೇ ಬಲಿ!; ಆರೋಗ್ಯ ಸಚಿವ ಶ್ರೀರಾಮುಲು ಹೇಳಿಕೆ

ಈವರೆಗೆ ಜಗತ್ತಿನಲ್ಲಿ ಒಟ್ಟು 21,363 ಜನರು ಮೃತಪಟ್ಟಿದ್ದಾರೆ. ಈ ಪೈಕಿ ಯುರೋಪ್ ರಾಷ್ಟ್ರವೊಂದರಲ್ಲೇ 14 ಸಾವಿರಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ.(ವರದಿ: ಸಂಧ್ಯಾ ಎಂ)
First published: March 26, 2020, 1:08 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading