ಕೊರೋನಾ ವೈರಸ್​: ಮುಂಬೈವೊಂದರಲ್ಲೇ 53 ಪತ್ರಕರ್ತರಿಗೆ ಸೋಂಕು

ಇನ್ನು, ಮತ್ತಷ್ಟು ಪತ್ರಕರ್ತರಿಗೆ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಸೋಂಕಿತರಲ್ಲಿ ಹೆಚ್ಚಿನವರು ಎಲೆಕ್ಟ್ರಾನಿಕ್​ ಮಾಧ್ಯಮಗಳ ವರದಿಗಾರರು ಹಾಗೂ ಕ್ಯಾಮರಾಮನ್​ಗಳು ಹಾಗೂ ಫೋಟೋಗ್ರಾಫರ್​ಗಳು ಸೇರಿದ್ದಾರೆ ತಿಳಿಸಲಾಗಿದೆ.

 ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ನವದೆಹಲಿ(ಏ.20): ಭಾರತದಲ್ಲಿ ಕೊರೋನಾ ವೈರಸ್​ ದಾಳಿಗೆ ಜನರು ತತ್ತರಿಸಿದ್ದಾರೆ. ದೇಶದ ಇದುವರೆಗಿನ ಸೋಂಕಿತರ ಪ್ರಮಾಣ ಹೆಚ್ಚಾಗಿರುವ ರಾಜ್ಯಗಳಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಕಳೆದ 24 ಗಂಟೆಗಳಲ್ಲಿ 36 ಮಂದಿ ಸಾವನ್ನಪ್ಪಿದ್ದು, ಇದರ ಪರಿಣಾಮ ದೇಶದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 559ಕ್ಕೆ ಏರಿಕೆಯಾಗಿದೆ. ಕೊರೋನಾ ಸೋಂಕಿತರ ಸಂಖ್ಯೆ 17,656ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

  ಈ ಮಧ್ಯೆಯೇ ದೇಶದಲ್ಲಿ ಅತೀ ಹೆಚ್ಚು ಕೋವಿಡ್​​-19 ಪ್ರಕರಣಗಳು ದಾಖಲಾಗಿರುವ ಮಹಾರಾಷ್ಟ್ರದ ಮುಂಬೈವೊಂದರಲ್ಲೇ ವಿವಿಧ ಮಾಧ್ಯಮ ಸಂಸ್ಥೆಗಳ 53 ಪತ್ರಕರ್ತರಿಗೆ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 4,203ಕ್ಕೆ ತಲುಪಿದೆ. ಈಗಾಗಲೇ 223 ಜನರು ಮೃತಪಟ್ಟಿದ್ದಾರೆ.

  ಪತ್ರಕರ್ತರಿಗಾಗಿಯೇ ಮಹಾರಾಷ್ಟ್ರ ಸರ್ಕಾರದಿಂದ ವಿಶೇಷ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು. ಇದರಲ್ಲಿ 167ಕ್ಕೂ ಅಧಿಕ ಜನರನ್ನು ತಪಾಸಣೆಗೆ ಒಳಪಡಿಸಿ ರಕ್ತ ಹಾಗೂ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ಪೈಕಿ 53 ಜನರಿಗೆ ಸೋಂಕು ತಗುಲಿರುವುದು ಧೃಡಪಟ್ಟಿದೆ ಎಂದು ಮುಂಬೈ ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಸದಸ್ಯ ಆಮೇ ಘೋಲೆ ಮಾಹಿತಿ ನೀಡಿದ್ದಾರೆ.

  ಇದನ್ನೂ ಓದಿ: ರಾಜ್ಯದಲ್ಲಿ ಇಂದು 18 ಕೊರೋನಾ ಪಾಸಿಟಿವ್​​ ಪ್ರಕರಣ ಪತ್ತೆ: ಸೊಂಕಿತರ ಸಂಖ್ಯೆ 408ಕ್ಕೇರಿಕೆ

  ಇನ್ನು, ಮತ್ತಷ್ಟು ಪತ್ರಕರ್ತರಿಗೆ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಸೋಂಕಿತರಲ್ಲಿ ಹೆಚ್ಚಿನವರು ಎಲೆಕ್ಟ್ರಾನಿಕ್​ ಮಾಧ್ಯಮಗಳ ವರದಿಗಾರರು ಹಾಗೂ ಕ್ಯಾಮರಾಮನ್​ಗಳು ಹಾಗೂ ಫೋಟೋಗ್ರಾಫರ್​ಗಳು ಸೇರಿದ್ದಾರೆ ತಿಳಿಸಲಾಗಿದೆ.
  First published: