ಪ್ಯಾರಿಸ್, ಅಮೇರಿಕಾದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ 632 ಪ್ರಯಾಣಿಕರು

ಕಳೆದ ಒಂದು ವಾರದಿಂದ ವಿದೇಶದಲ್ಲಿ ಸಿಲುಕಿರುವ ಭಾರತಿಯವರನ್ನ ಏರ್ ಲಿಫ್ಟ್ ಮಾಡುತ್ತಿದ್ದು ಇದುವರೆಗೂ 21 ವಿಮಾನಗಳು ಭಾರತಕ್ಕೆ ಆಗಮಿಸಿವೆ. ಈ ಪೈಕಿ ಕೆಲವರಿಗೆ ಕೊರೋನಾ ಸೋಂಕು ದೃಡಪಟ್ಟಿರುವ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲರನ್ನೂ ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆ ನಡೆಸಿ, 14 ದಿನ ಕ್ವಾರೆಂಟೈನ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

news18-kannada
Updated:May 29, 2020, 6:51 AM IST
ಪ್ಯಾರಿಸ್, ಅಮೇರಿಕಾದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ 632 ಪ್ರಯಾಣಿಕರು
ಪ್ರಯಾಣಿಕರಿಗೆ ವಿಮಾನ ನಿಲ್ದಾಣದಿಂದ ಹೋಟೆಲ್‌ಗೆ ಬಸ್‌ ವ್ಯವಸ್ಥೆ ಮಾಡಿರುವುದು.
  • Share this:
ಬೆಂಗಳೂರು: ಕೋವಿಡ್-19 ಲಾಕ್‌ಡೌನ್‌ ಕಾರಣಕ್ಕೆ ಕಳೆದ ಎರಡು ತಿಂಗಳಿನಿಂದ ಅಮೇರಿಕಾ, ಪ್ಯಾರಿಸ್ ಮತ್ತು ಐರ್ಲೆಂಡ್​ನ ದುಬ್ಲಿನ್ ಪ್ರದೇಶದಲ್ಲಿ ಸಿಲುಕಿದ್ದ ಸುಮಾರು  632ಕ್ಕೂ ಅಧಿಕ ಅನಿವಾಸಿ ಭಾರತೀಯರು ಗುರುವಾರ ಒಂದೇ ದಿನ ಏರ್‌ ಇಂಡಿಯಾ ವಿಮಾನದ ಮೂಲಕ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿದಿದ್ದಾರೆ.

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 632 ಮಂದಿ ಪ್ರಯಾಣಿಕರಲ್ಲಿ 22 ಮಕ್ಕಳು ಸೇರಿದಂತೆ 422 ಪುರುಷರು ಮತ್ತು 188 ಮಹಿಳೆಯರು ಬಂದಿಳಿದಿದ್ದಾರೆ. ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 632 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಹೀಗಾಗಿ ಎಲ್ಲರನ್ನೂ 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಗಿದೆ.

ಕಳೆದ ಒಂದು ವಾರದಿಂದ ವಿದೇಶದಲ್ಲಿ ಸಿಲುಕಿರುವ ಭಾರತಿಯವರನ್ನ ಏರ್ ಲಿಫ್ಟ್ ಮಾಡುತ್ತಿದ್ದು ಇದುವರೆಗೂ 21 ವಿಮಾನಗಳು ಭಾರತಕ್ಕೆ ಆಗಮಿಸಿವೆ. ಈ ಪೈಕಿ ಕೆಲವರಿಗೆ ಕೊರೋನಾ ಸೋಂಕು ದೃಡಪಟ್ಟಿರುವ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲರನ್ನೂ ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆ ನಡೆಸಿ, 14 ದಿನ ಕ್ವಾರೆಂಟೈನ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಅನಿವಾಸಿ ಭಾರತೀಯರಿಗಾಗಿ ತ್ರೀ ಸ್ಟಾರ್, ಫೈ-ಸ್ಟಾರ್ ಹೋಟೆಲ್ ಹಾಗೂ ಬಜೆಟ್ ಹೋಟೆಲ್ ಗಳಲ್ಲಿ ಕ್ವಾರೆಂಟೈನ್ ಮಾಡಲಾಗುತ್ತಿದ್ದು, ಬರುವ ಪ್ರಯಾಣಿಕರ ಸಂಪೂರ್ಣ ಖರ್ಚು ವೆಚ್ಚ ಖುದ್ದು ಪ್ರಯಾಣಿಕರೆ ಬರಿಸುತ್ತಿದ್ದಾರೆ.

ಇದನ್ನೂ ಓದಿ : ಬಿಜೆಪಿಯಲ್ಲಿ ಮತ್ತೆ ಭಿನ್ನಮತೀಯರ ಕಹಳೆ; ಕೊರೋನಾ ಸಂಕಷ್ಟದಲ್ಲೂ ಬಿಎಸ್‌ವೈ ಸ್ಥಾನಕ್ಕೆ ಸಂಚಕಾರ?
First published: May 29, 2020, 6:47 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading