ಧಾರವಾಡ : ಇಡೀ ದೇಶ ಇದೀಗ ಕೊರೊನಾ ಮೂರನೇ ಅಲೆ (COVID Third Wave) ಬರಬಹುದು ಅನ್ನೋ ಆತಂಕದಲ್ಲಿದೆ. ಇದೇ ವೇಳೆ ತಜ್ಞರು ಮೂರನೇ ಅಲೆಯ ಆತಂಕ ಅಷ್ಟೇನೂ ಇಲ್ಲ ಅಂತಾನೂ ಹೇಳುತ್ತಿದ್ದಾರೆ. ಆದರೆ ಇದೀಗ ಧಾರವಾಡದಲ್ಲಿ (Dharwad) ನಡೆದಿರೋ ಘಟನೆಯೊಂದು ಆತಂಕವನ್ನು ಸೃಷ್ಟಿಸಿದೆ. ಹೌದು ಧಾರವಾಡದ (Dharwad) ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನಲ್ಲಿ (SDM Medical College) ಇದೀಗ ಕೊರೊನಾ (Corona Virus) ಸ್ಫೋಟವಾಗಿದೆ. ಇದರಿಂದಾಗಿ ಇಡೀ ಜಿಲ್ಲೆಯ ಜನರು ಆತಂಕಕ್ಕೆ ಸಿಲುಕಿದ್ದಾರೆ. ಧಾರವಾಡದ ಎಸ್.ಡಿ.ಎಂ. ವೈದ್ಯಕೀಯ ಕಾಲೇಜು. ನಗರದ ಸತ್ತೂರು ಬಡಾವಣೆಯಲ್ಲಿರೋ ಈ ಆಸ್ಪತ್ರೆಯಲ್ಲಿ ಇದೀಗ ಕೊರೊನಾ ಸ್ಪೋಟವಾಗಿದೆ.
ಇತ್ತೀಚಿಗೆ ವೈದ್ಯಕೀಯ ವಿದ್ಯಾರ್ಥಿಗಳು ಗೆಟ್ ಟು ಗೆದರ್ ಕಾರ್ಯಕ್ರಮ ಮಾಡಿದ್ದರು. ಇದಾಗಿ ಕೆಲ ದಿನಗಳ ಬಳಿಕ ಕೆಲವು ವಿದ್ಯಾರ್ಥಿಗಳಿಗೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಅವರಿಗೆ ಕೊರೊನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿದ್ದರಿಂದ ಅವರಿಗೆ ಪರೀಕ್ಷೆ ಮಾಡಿಸಿದಾಗ, ಕೊರೊನಾ ಇರೋದು ಖಚಿತವಾಗಿದೆ.
66 ವಿದ್ಯಾರ್ಥಿಗಳಿಗೆ ಸೋಂಕು ದೃಢ
ಕೂಡಲೇ ಅವರನ್ನು ಕ್ವಾರಂಟೈನ್ ಮಾಡಿ, ಮತ್ತೆ 300 ವಿದ್ಯಾರ್ಥಿಗಳಿಗೆ ಟೆಸ್ಟ್ (Corona Test) ಮಾಡಿಸಿದಾಗ 66 ವಿದ್ಯಾರ್ಥಿಗಳಲ್ಲಿ ಕೊರೊನಾ ಇರೋದು ಖಚಿತವಾಗಿದೆ. ಇದರಿಂದಾಗಿ ಕೊರೊನಾ ಸೋಂಕು ತಗುಲಿದ ಎಲ್ಲ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಿ, ಪಾರಿಜಾತ ಮತ್ತು ಅಶೋಕ ಹಾಸ್ಟೆಲ್ ಗಳನ್ನು ಸೀಲ್ ಡೌನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಇದನ್ನೂ ಓದಿ: 40% Commission Govt ಆರೋಪ: ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ Congress ನಿಯೋಗ
3 ಸಾವಿರ ಸಿಬ್ಬಂದಿಗೆ ಟೆಸ್ಟ್ ನಡೆಸಲು ಸೂಚನೆ
ಇದೇ ವೇಳೆ ಎಲ್ಲ ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಎಲ್ಲ ವಿದ್ಯಾರ್ಥಿಗಳು ಬಂದು ಪರೀಕ್ಷೆ ಮಾಡಿಸಿಕೊಳ್ಳುತ್ತಿದ್ದಾರೆ. ಇನ್ನು ಇದೇ ವೇಳೆ ಆಸ್ಪತ್ರೆಯಲ್ಲಿ ಒಟ್ಟು 3000 ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಅವರಿಗೂ ಟೆಸ್ಟ್ ಮಾಡಿಸಲು ಸೂಚನೆ ನೀಡಲಾಗಿದೆ.
ಇನ್ನು ಕ್ವಾರಂಟೈನ್ ನಲ್ಲಿರೋ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಹಾಗೂ ಊಟದ ವ್ಯವಸ್ಥೆಯನ್ನು ಆಸ್ಪತ್ರೆ ವತಿಯಿಂದಲೇ ಮಾಡಲಾಗುತ್ತಿದೆ. ಇದೇ ವೇಳೆ ಕಾಲೇಜಿನ ಪ್ರಾಚಾರ್ಯರಾದ ಡಾ. ರತ್ನಮಾಲಾ ದೇಸಾಯಿ ಅವರೊಂದಿಗೆ ಜಿಲ್ಲಾಧಿಕಾರಿ ಈ ಬಗ್ಗೆ ಚರ್ಚೆ ನಡೆಸಿ, ಆರೋಗ್ಯ ಇಲಾಖೆಯ ಸಿಬ್ಬಂದಿಯ ಸೂಚನೆಯನ್ವಯ ಕೆಲಸ ಮಾಡುವಂತೆ ಸೂಚಿಸಿದ್ದಾರೆ.
ಹಾಸ್ಟೆಲ್ ಸೀಲ್ ಡೌನ್
ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಎಸ್.ಡಿ.ಎಂ ಕಾಲೇಜಿನ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳಿಗೆ ಕೊರೊನಾ ಟೆಸ್ಟ್ ಮಾಡಿಲು ಸೂಚನೆ ನೀಡಲಾಗುದೆ. ಅಲ್ಲದೇ ಹಾಸ್ಟೆಲ್ ಸೀಲ್ ಡೌನ್ ಮಾಡಲಾಗಿದ್ದು ಯಾರು ಒಳಗಡೆ ಹಾಗೂ ಹೊರಗಡೆ ಬರಂದತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: Explained: ಕೋವಿಡ್ ಲಸಿಕೆ ಪಡೆದ ನಂತರ ಏನು ಮಾಡಬೇಕು? ಯಾವುದು ನಿಷಿದ್ಧ? ಇಲ್ಲಿದೆ ಫುಲ್ ಡೀಟೆಲ್ಸ್
ಸೋಂಕಿತ ವಿದ್ಯಾರ್ಥಿಗಳು ಆರಾಮಾಗಿದ್ದಾರೆ ಅವರಿಗೆ ಬೇಕಾದ ಊಟ, ಔಷಧಿ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಸೋಂಕು ಉಲ್ಬಣಗೋಳ್ಳದಂತೆ ಕಟ್ಟುನಿಟ್ಟಿನ ಕ್ರಮಜರುಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದ್ದಾರೆ.
ಯೂರೋಪ್ ದೇಶಗಳು, ಚೀನಾ ಸೇರಿದಂತೆ ಅನೇಕ ದೇಶಗಳಲ್ಲಿ ಮೂರನೇ ಅಲೆ ಸಾಕಷ್ಟು ಹಾನಿಯುಂಟು ಮಾಡಿದೆ. ಆದರೆ ನಮ್ಮ ದೇಶದಲ್ಲಿ ಅಷ್ಟೊಂದು ತೀವ್ರವಾಗಿ ಕಾಡೋದಿಲ್ಲ ಅಂತಾ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಕೊರೊನಾ ನಿಯಮಗಳನ್ನು ಮರೆತ ಜನರು
ಇದೇ ವೇಳೆ ಜನರು ಕೂಡ ಮುಖಕ್ಕೆ ಮಾಸ್ಕ್ ಧರಿಸೋದು ಹಾಗೂ ಸಾಮಾಜಿಕ ಅಂತರ ಕಾಯ್ದುಕೋಳ್ಳುವುದನ್ನು ಬಿಟ್ಟಿದ್ದಾರೆ. ಇದೀಗ ಧಾರವಾಡದ ಎಸ್.ಡಿ.ಎಂ ಕಾಲೇಜಿನಲ್ಲಿ ಕೊರೊನಾ ಸ್ಪೋಟವಾದ ಬಳಿಕ ಜನರು ಕೋವಿಡ್ ನ ತೀವ್ರತೆಯನ್ನು ಅರ್ಥ ಮಾಡಿಕೊಂಡು, ನಿಯಮಗಳನ್ನು ಪಾಲಿಸಬೇಕಿದೆ.
ವರದಿ: ಮಂಜುನಾಥ್ ಯಡಳ್ಳಿ, ಧಾರವಾಡ ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ