ನವದೆಹಲಿ (ಜೂ.10): ಕೊರೋನಾ ಸೋಂಕು ಹರಡುವಿಕೆ ಬಹಳ ಕಡಿಮೆ ಇದ್ದಾಗ ಲಾಕ್ಡೌನ್ ಜಾರಿ ಮಾಡಿ, ಸೋಂಕು ಹರಡುವಿಕೆ ಹೆಚ್ಚಾದಾಗ ನಾಮಕಾವಸ್ತೆಗೆ ಮಾತ್ರ ಲಾಕ್ಡೌನ್ ಜಾರಿಗೊಳಿಸಿದ ಪರಿಣಾಮ ಭಾರತದಲ್ಲಿ ಕೊರೊನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಿದೆ. ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅತಿಹೆಚ್ಚು ಕೊರೊನಾ ಇರುವ ದೇಶಗಳ ಪಟ್ಟಿಯಲ್ಲಿ ಇಟಲಿಯನ್ನು ಹಿಂದಿಕ್ಕೆ 6ನೇ ಸ್ಥಾನಕ್ಕೇರಿದ್ದ ಭಾರತದ ಕೊರೊನಾ ಪೀಡಿತರ ಸಂಖ್ಯೆ ಎರಡೂ ಮುಕ್ಕಾಲು ಲಕ್ಷದ ದಾಟಿದೆ.
ಮೇ 30ರಿಂದ ಭಾರತದಲ್ಲಿ ಪ್ರತಿನಿತ್ಯ 8 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಲು ಆರಂಭಿಸಿದವು. ಜೂನ್ 3ರಿಂದ ದಿನವೊಂದರಲ್ಲಿ 9 ಸಾವಿರಕ್ಕೂ ಅಧಿಕ ಪ್ರಕರಣಗಳು ಗೋಚರಿಸಲು ಆರಂಭವಾದವು. ಈ ವಾರವೂ ಅದೇ ಟ್ರೆಂಡ್ ಮುಂದುವರೆದಿದ್ದು ಮಂಗಳವಾರ ಮತ್ತೆ 9,985 ಪ್ರಕರಣಗಳು ಕಂಡುಬಂದಿವೆ. ಇದರಿಂದ ದೇಶದ ಕೊರೋನಾ ವೈರಸ್ ಪೀಡಿತರ ಸಂಖ್ಯೆ 2,76,583ಕ್ಕೆ ಏರಿಕೆಯಾಗಿದೆ.
ಮಂಗಳವಾರ ಒಂದೇ ದಿನ ಕೊರೊನಾದಿಂದ 279 ಜನ ಮೃತಪಟ್ಟಿದ್ದು, ಸದ್ಯ ದೇಶದಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ 7,745ಕ್ಕೆ ಏರಿಕೆಯಾಗಿದೆ. ಕೊರೋನಾದಿಂದ ಈವರೆಗೆ 1,35,205 ಜನ ಮಾತ್ರ ಗುಣಮುಖ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿಗಳು ತಿಳಿಸಿವೆ.
ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಮೇ 10ರಿಂದ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಪ್ರತಿನಿತ್ಯ ನಾಲ್ಕು ಸಾವಿರಕ್ಕಿಂತ ಹೆಚ್ಚಾಗುತ್ತಲೇ ಇದೆ. ಮೇ 10ರಂದು 4,213 ಜನರಿಗೆ, ಮೇ 11ರಂದು 3,064 ಮಂದಿಗೆ, ಮೇ 12 ರಂದು 3,525 ಜನರಿಗೆ, ಮೇ13ರಂದು 3,722 ಮಂದಿಗೆ ಹಾಗೂ ಮೇ 14ರಂದು 3,967 ಜನರಿಗೆ, ಮೇ 15ರಂದು 3,970 ಮಂದಿಗೆ, ಮೇ 16ರಂದು 4,987 ಜನರಿಗೆ, ಮೇ 17ರಂದು 5,242, ಮೇ 18ರಂದು 4,970, ಮೇ 19ರಂದು 5,611, ಮೇ 20ರಂದು 5,609, ಮೇ 21ರಂದು 6,088, ಮೇ 22ರಂದು 6,654, ಮೇ 23ರಂದು 6,767, ಮೇ 24ರಂದು 6,977, ಮೇ 25ರಂದು 6,535 ಪ್ರಕರಣ ದಾಖಲಾಗಿದ್ದವು.
ಇದನ್ನೂ ಓದಿ: ಮೊದಲ ದಿನದಿಂದ ಕೇಜ್ರಿವಾಲ್ ದೆಹಲಿ ಜನತೆಗೆ ಸುಳ್ಳನ್ನೇ ಹೇಳುತ್ತಿದ್ದಾರೆ-ಸಂಸದ ಗೌತಮ್ ಗಂಭೀರ್
ಮೇ 26ರಂದು 6,387, ಮೇ 27ರಂದು 6,566, ಮೇ 28ರಂದು 7,466, ಮೇ 29ರಂದು 7,964, ಮೇ 30ರಂದು 8,380, ಮೇ 31ರಂದು 8,392, ಜೂನ್ 1ರಂದು 8,171, ಜೂನ್ 2ರಂದು 8,909, ಜೂನ್ 3ರಂದು 9,304, ಜೂನ್ 4ರಂದು 9,851, ಜೂನ್ 5ರಂದು 9,887, ಜೂನ್ 6ರಂದು 9,971, ಜೂ 7ರಂದು 9,983, ಜೂನ್ 8ರಂದು 9987 ಹಾಗು ಜೂನ್ 9ರಂದು 9,985 ಹೊಸ ಪ್ರಕರಣಗಳು ಕಂಡುಬಂದಿವೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ