ವಿಜಯಪುರದಲ್ಲಿ ಹೃದಯಾಘಾತದಿಂದ ಸಾವಿಗೀಡಾದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಪತ್ತೆ

ಆಸ್ಪತ್ರೆಗೆ ಬರುವ ಮುನ್ನವೇ ಆ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈಗ ಆ ವ್ಯಕ್ತಿಗೆ ಸೋಂಕು ಇರುವುದು ಪತ್ತೆಯಾಗಿದೆ. ಅಷ್ಟೇ ಅಲ್ಲ, ಈ ವ್ಯಕ್ತಿಗೆ ಲೀವರ್, ಮೆದುಳು ಮತ್ತು ಹೃದಯ ಸಂಬಂಧಿ ಸಮಸ್ಯೆಗಳಿದ್ದವು. ವಿವರವಾದ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಈ ವ್ಯಕ್ತಿಯ ಪತ್ನಿಯನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ವಿಜಯಪುರ (ಮೇ 19); ವಿಜಯಪುರದಲ್ಲಿ ಕಂಟೈನ್ಮೆಂಟ್ ವಲಯದ ವ್ಯಕ್ತಿ ಹೃದಯಾಘಾತದಿಂದ ಸಾವಿಗೀಡಾಗಿದ್ದು, ಈ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕಂಟೈನ್ಮೆಂಟ್ ವಲಯದಲ್ಲಿರುವ 60 ವರ್ಷ ಮೇಲ್ಪಟ್ಟ ಎಲ್ಲ ಜನರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ವಿಜಯಪುರ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ತಿಳಿಸಿದ್ದಾರೆ.

ವಿಜಯಪುದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಬೇರೆ ಬೇರೆ ರಾಜ್ಯಗಳಿಂದ ಈವರೆಗೆ 12 ರಿಂದ 15 ಸಾವಿರ ವಲಸೆ ಕಾರ್ಮಿಕರು ವಿಜಯಪುರ ಜಿಲ್ಲೆಗೆ ಮರಳಿದ್ದು, ಅವರಲ್ಲಿ ಮಹಾರಾಷ್ಟ್ರದಿಂದ ಬಂದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.  ಸರಕಾರದ ಸೂಚನೆ ಹಿನ್ನೆಲೆಯಲ್ಲಿ ಇಂದಿನಿಂದ ಪ್ರತಿದಿನ 1500 ಜನರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.

ನಿನ್ನೆ ಕಂಟೈನ್ಮೆಂಟ್ ಏರಿಯಾದ ವ್ಯಕ್ತಿಯ ಸಾವಿಗೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸಲಾಗಿದೆ. ಮೊದಲ ಕೊರೋನಾ ಕೇಸ್ ಪತ್ತೆಯಾದ ಕಂಟೈನ್ಮೆಂಟ್ ಜೋನ್​ನಲ್ಲೇ ಈ ವ್ಯಕ್ತಿ ವಾಸಿಸುತ್ತಿದ್ದರು. ಮೇ 18ರವರೆಗೂ ಅವರ ಮನೆಗೆ ನಮ್ಮ ತಂಡ ಭೇಟಿ ನೀಡಿ ಪರೀಕ್ಷೆ ನಡೆಸಿದೆ. ದೇಹದ ಉಷ್ಣಾಂಶ ಸಾಮಾನ್ಯವಾಗಿತ್ತು. ನಿನ್ನೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಎಕ್ಸರೇ ಮಾಡಿದಾಗ ನ್ಯೂಮೊನಿಯಾ ಇರುವುದು ಪತ್ತೆಯಾಗಿತ್ತು. ಕಂಟೈನ್ಮೆಂಟ್ ಜೋನ್​ನಿಂದ ಬಂದ ಕಾರಣ ಅವರನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿತ್ತು. ಆದರೆ ಆಸ್ಪತ್ರೆಗೆ ಬರುವ ಮುನ್ನವೇ ಆ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈಗ ಆ ವ್ಯಕ್ತಿಗೆ ಸೋಂಕು ಇರುವುದು ಪತ್ತೆಯಾಗಿದೆ. ಅಷ್ಟೇ ಅಲ್ಲ, ಈ ವ್ಯಕ್ತಿಗೆ ಲೀವರ್, ಮೆದುಳು ಮತ್ತು ಹೃದಯ ಸಂಬಂಧಿ ಸಮಸ್ಯೆಗಳಿದ್ದವು. ವಿವರವಾದ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಈ ವ್ಯಕ್ತಿಯ ಪತ್ನಿಯನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಇದನ್ನು ಓದಿ: ಕರ್ನಾಟಕದಲ್ಲಿ ಒಂದೇ ದಿನ ಕೊರೋನಾಗೆ 3 ಬಲಿ, 127 ಕೇಸ್​​ ಪತ್ತೆ; ಸೋಂಕಿತರ ಸಂಖ್ಯೆ 1,373ಕ್ಕೆ ಏರಿಕೆ

ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಉಪಸ್ಥಿತರಿದ್ದರು.
First published: