news18-kannada Updated:July 17, 2020, 3:03 PM IST
ಸಿಎಂ ಬಿ.ಎಸ್.ಯಡಿಯೂರಪ್ಪ.
ಬೆಂಗಳೂರು; ಬೆಂಗಳೂರು ಮತ್ತೆ ಮತ್ತೆ ಲಾಕ್ ಡೌನ್ ಬಗ್ಗೆ ಪ್ರಸ್ತಾಪ ಮಾಡಬೇಡಿ ಎಂದು ಲಾಕ್ಡೌನ್ ಜಪ ಮಾಡುವ ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ.
ಕೋವಿಡ್ ನಿಯಂತ್ರಣ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ಉಸ್ತುವಾರಿಗಳ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ವಲಯ ಉಸ್ತುವಾರಿ ಸಚಿವರಿಗೆ ನೀಡಿದ ಸೂಚನೆಗಳು
ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ. ಲಾಕ್ ಡೌನ್ ಮುಂದುವರೆಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ ಸಿಎಂ ಬಿಎಸ್ವೈ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ದಾಖಲಾಗಲು ಆಗುತ್ತಿರುವ ಸಮಸ್ಯೆಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಹಾಗೆಯೇ ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಲು ಸೂಚನೆ ನೀಡಿದರು. ಕೋವಿಡ್ ಹಾಗೂ ನಾನ್ ಕೋವಿಡ್ ರೋಗಿಗಳಿಗೆ ಚಿಕಿತ್ಸಾ ನೀಡುವುದನ್ನು ಖಾತರಿ ಪಡಿಸಿಕೊಳ್ಳಬೇಕು. ರೋಗ ಲಕ್ಷಣ ಇಲ್ಲದ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ಗಳಿಗೆ ಅಥವಾ ಹೋಮ್ ಕ್ವಾರಂಟೈನ್ ಹಾಕುವಂತೆ ಹಾಗೂ ರೋಗ ಲಕ್ಷಣದಿಂದ ಬಳಲುತ್ತಿರುವ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.
ಆಸ್ಪತ್ರೆ ಯಲ್ಲಿ ಮೃತರಾದವರಿಗೆ ರ್ಯಾಪಿಡ್ ಆಂಟಿಜೆನ್ ಪರೀಕ್ಷೆ ನಡೆಸಿ ಶವವನ್ನು ಕೂಡಲೇ ಹಸ್ತಾಂತರಿಸಲು ಅಥವಾ ನಿಯಮಾನುಸಾರ ಅಂತ್ಯಕ್ರಿಯೆ ನಡೆಸಲು ಕ್ರಮ ವಹಿಸಬೇಕು. ಮನೆಯಲ್ಲಿ ಮೃತರಾದವರಿಗೂ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ನಡೆಸಿ, ಮೃತದೇಹವನ್ನು ತುರ್ತಾಗಿ ಅಂತ್ಯಕ್ರಿಯೆ ನಡೆಸಲು ಕ್ರಮ ವಹಿಸಬೇಕು ಎಂದು ಸಿಎಂ ತಿಳಿಸಿದರು.
ವೈದ್ಯರ ಕೊರತೆ ನಿವಾರಿಸಲು, ಹುದ್ದೆ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಪ್ರತಿ ವಾರ್ಡಿನಲ್ಲೂ ಸ್ವಯಂ ಸೇವಕರನ್ನು ಗುರುತಿಸಲಾಗಿದೆ ಹಾಗೂ ಅಂಬ್ಯುಲೆನ್ಸ್ ನಿಗದಿಪಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಬೆಡ್ ನೀಡದೆ ಇದ್ದರೆ ಕಠಿಣ ಕ್ರಮ ಕೈಗೊಳ್ಳಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ದಾಖಲಾತಿ ಮತ್ತು ಹಾಸಿಗೆಗಳ ಲಭ್ಯತೆ ಕುರಿತು ಮಾಹಿತಿ ಪಡೆಯಲು ಸೂಚನೆ ನೀಡಿದರು.ಪ್ರತಿ ವಾರ್ಡ್ ಗಳಲ್ಲಿ ಸ್ವಯಂ ಸೇವಕರು ಹಾಗು ನೋಡಲ್ ಅಧಿಕಾರಗಳ ನೇಮಿಸಲಾಗಿದೆ. ಪ್ರತಿ ವಾರ್ಡುಗಳಲ್ಲಿ ಕಲ್ಯಾಣ ಮಂಟಪಗಳನ್ನು ಹಾಗೂ ವಸತಿ ಗೃಹಗಳನ್ನು ಗುರುತಿಸಲಾಗಿದೆ. ಪ್ರತ್ಯೇಕವಾಗಿ ವಾಸಿಸಲು ಕೊಠಡಿಗಳು ಇಲ್ಲದವರಿಗೆ ಕಲ್ಯಾಣ ಮಂಟಪಗಳನ್ನು ಬಳಸಲು ಸೂಚಿಸಿದರು.
ಇದನ್ನು ಓದಿ: ಕೋವಿಡ್ ನಿಯಮ ಉಲ್ಲಂಘಿಸುವ ರಾಜಕಾರಣಿಗಳ ವಿರುದ್ಧ ಕಠಿಣ ಕ್ರಮಕ್ಕೆ ಹೈಕೋರ್ಟ್ ಆದೇಶ
ರಾಜ್ಯದಲ್ಲಿ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಬೇಕು. ಪರೀಕ್ಷೆಯ ಫಲಿತಾಂಶ ದೊರೆತ ಎರಡು ಗಂಟೆಗಳೊಳಗೆ ಹಾಸಿಗೆ ಹಂಚಿಕೆ ಮಾಡಬೇಕು.
ರೋಗ ಲಕ್ಷಣ ಇರುವ, 65 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಮೊದಲ ಆದ್ಯತೆಯ ಮೇರೆಗೆ ಚಿಕಿತ್ಸೆ ನೀಡಬೇಕು. ರೋಗ ಲಕ್ಷಣ ಇಲ್ಲದವರನ್ನು ಕೋವಿಡ್ ಕೇರ್ ಸೆಂಟರ್ಗೆ ದಾಖಲಿಸಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಸೂಚನೆ ನೀಡಿದರು.
Published by:
HR Ramesh
First published:
July 17, 2020, 3:03 PM IST