BC Patil: ಕೃಷಿ ಸಚಿವ ಬಿ.ಸಿ.ಪಾಟೀಲ್​ಗೆ ಕೊರೋನಾ ಪಾಸಿಟಿವ್; ಈವರೆಗೆ ರಾಜ್ಯದ ಮೂರು ಮಂತ್ರಿಗಳಿಗೆ ಸೋಂಕು ದೃಢ

ಜೊತೆಗೆ ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ, ಕೋವಿಡ್ ವಿರುದ್ಧ ಗೆಲ್ಲುವ ವಿಶ್ವಾಸವಿದೆ, ಜೊತೆಗೆ ನಿಮ್ಮೆಲ್ಲರ ಆಶೀರ್ವಾದ ಮತ್ತು ಹಾರೈಕೆ ಇರಲಿ ಎಂದು ತಮ್ಮ ಟ್ವಿಟರ್​ ಖಾತೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

news18-kannada
Updated:July 31, 2020, 11:30 PM IST
BC Patil: ಕೃಷಿ ಸಚಿವ ಬಿ.ಸಿ.ಪಾಟೀಲ್​ಗೆ ಕೊರೋನಾ ಪಾಸಿಟಿವ್; ಈವರೆಗೆ ರಾಜ್ಯದ ಮೂರು ಮಂತ್ರಿಗಳಿಗೆ ಸೋಂಕು ದೃಢ
ಬಿ.ಸಿ. ಪಾಟೀಲ್
  • Share this:
ಬೆಂಗಳೂರು(ಜು.31): ಈ ಮಹಾಮಾರಿ ಕೊರೋನಾ ರಾಜ್ಯದಲ್ಲಿ ತನ್ನ ರಣಕೇಕೆ ಮುಂದುವರೆಸಿದೆ. ಬಡವ-ಬಲ್ಲಿದ ಎನ್ನದೇ ಯಾರನ್ನೂ ಬೆಂಬಿಡದೆ ಈ ಕೊರೋನಾ ಕಾಡುತ್ತಿದೆ. ರಾಜ್ಯದ ಸಚಿವರೂ ಸಹ ಈ ಕೊರೋನಾದಿಂದ ಹೊರತಾಗಿಲ್ಲ. ಈಗ ಕೃಷಿ ಸಚಿವ ಬಿ.ಸಿ.ಪಾಟೀಲ್​ಗೂ ಕೂಡ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. 

ಇಲ್ಲಿಯವರೆಗೆ ರಾಜ್ಯದ ಮೂವರು ಸಚಿವರಿಗೆ ಕೊರೋನಾ ಸೋಂಕು ತಗುಲಿದೆ. ಪ್ರವಾಸೋದ್ಯಮ ಸಚಿವ ಸಿಟಿ ರವಿ, ಅರಣ್ಯ ಸಚಿವ ಆನಂದ್ ಸಿಂಗ್ ಇದೀಗ ಕೃಷಿ ಸಚಿವ ಬಿ ಸಿ ಪಾಟೀಲ್​ಗೂ ಕೊರೋನಾ ಇರುವುದು ದೃಢಪಟ್ಟಿದೆ.

ತನಗೆ ಪಾಸಿಟಿವ್​ ಇರುವ ಬಗ್ಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ತಮ್ಮ ಟ್ವಿಟರ್ ಖಾತೆಯಲ್ಲಿ ದೃಢಪಡಿಸಿದ್ದಾರೆ. ಇದೀಗ ಬಂದ ವರದಿಯ ಪ್ರಕಾರ ನನಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ.  ಬೆಂಗಳೂರಿನ ನನ್ನ ನಿವಾಸದಲ್ಲಿ ಹೋಂ ಕ್ವಾರಂಟೈನ್ ಆಗುತ್ತಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.




ಕೊಪ್ಪಳ ಜಿಲ್ಲೆಗೆ ಇತ್ತೀಚೆಗೆ ಭೇಟಿ ನೀಡಿದ ಸಂದರ್ಭದಲ್ಲಿ, ನನ್ನ ಜೊತೆ ಆಗಮಿಸಿದ ಐದು ಜನ ಸಿಬ್ಬಂದಿಗಳಿಗೂ ಕೊರೋನಾ ಪಾಸಿಟಿವ್ ಎಂದು ವರದಿ ಬಂದಿದೆ. ಅಲ್ಲದೇ ಇತ್ತೀಚೆಗೆ ನನ್ನನ್ನು ಹಿರೇಕೆರೂರು ಹಾಗೂ ಕೊಪ್ಪಳ ಭಾಗದಲ್ಲಿ ಭೇಟಿಯಾದ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರು, ಯಾರಿಗಾದರೂ ಕೋವಿಡ್ ಲಕ್ಷಣ ಕಂಡುಬಂದಲ್ಲಿ ಕೂಡಲೇ ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.

ಜೊತೆಗೆ ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ, ಕೋವಿಡ್ ವಿರುದ್ಧ ಗೆಲ್ಲುವ ವಿಶ್ವಾಸವಿದೆ, ಜೊತೆಗೆ ನಿಮ್ಮೆಲ್ಲರ ಆಶೀರ್ವಾದ ಮತ್ತು ಹಾರೈಕೆ ಇರಲಿ ಎಂದು ತಮ್ಮ ಟ್ವಿಟರ್​ ಖಾತೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
Published by: Latha CG
First published: July 31, 2020, 11:30 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading