• Home
 • »
 • News
 • »
 • coronavirus-latest-news
 • »
 • CoronaVirus: ಮಾರ್ಚ್ 31ರವರೆಗೆ ದೆಹಲಿಯ ಎಲ್ಲ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿದ ಸರ್ಕಾರ

CoronaVirus: ಮಾರ್ಚ್ 31ರವರೆಗೆ ದೆಹಲಿಯ ಎಲ್ಲ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿದ ಸರ್ಕಾರ

ಮೆಟ್ರೋದಲ್ಲಿ ಮಾಸ್ಕ್​ ಧರಿಸಿ ಪ್ರಯಾಣಿಸುತ್ತಿರುವ ಜನರು.

ಮೆಟ್ರೋದಲ್ಲಿ ಮಾಸ್ಕ್​ ಧರಿಸಿ ಪ್ರಯಾಣಿಸುತ್ತಿರುವ ಜನರು.

ಈ ಹಿಂದೆ ದೆಹಲಿಯ ಎರಡು ಶಾಲೆಯ ವಿದ್ಯಾರ್ಥಿಗಳ ಪೋಷಕರಲ್ಲಿ ಕೊರೋನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಆ ಬಳಿಕ ಆ ಶಾಲೆಯ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಿ, ಎಲ್ಲರನ್ನು ಪ್ರತ್ಯೇಕವಾಗಿ ಇರಿಸಲಾಗಿತ್ತು. ಆ ನಿರ್ದಿಷ್ಟ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿತ್ತು.

ಮುಂದೆ ಓದಿ ...
 • Share this:

  ನವದೆಹಲಿ: ಮಾರಕು ಕೊರೋನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚು ಕಾಡಲು ಆರಂಭಿಸಿದೆ. ಈಗಾಗಲೇ ದೆಹಲಿ ಹಲವು ನಿವಾಸಿಗಳಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ.


  ದೆಹಲಿಯ ಎಲ್ಲ ಪ್ರಾಥಮಿಕ ಶಾಲೆಗಳನ್ನು ಮಾರ್ಚ್​ 31ರವರೆಗೆ ಮುಚ್ಚಲು ನಿರ್ಧರಿಸಲಾಗಿದೆ ಎಂದು ದೆಹಲಿ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಗುರುವಾರ ತಿಳಿಸಿದ್ದಾರೆ. ಕೊರೋನಾ ವೈರಸ್ ಹರಡುವಿಕೆ ಭೀತಿ ಹೆಚ್ಚಾಗಿದ್ದು, ಅದಕ್ಕಾಗಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ತಕ್ಷಣದಿಂದಲೇ ಎಲ್ಲ ಪ್ರಾಥಮಿಕ ಶಾಲೆಗಳನ್ನು ಮಾರ್ಚ್ 31ರವರೆಗೆ ಮುಚ್ಚುವಂತೆ ನಿರ್ದೇಶನ ನೀಡಲಾಗಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.


  ಈ ಹಿಂದೆ ದೆಹಲಿಯ ಎರಡು ಶಾಲೆಯ ವಿದ್ಯಾರ್ಥಿಗಳ ಪೋಷಕರಲ್ಲಿ ಕೊರೋನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಆ ಬಳಿಕ ಆ ಶಾಲೆಯ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಿ, ಎಲ್ಲರನ್ನು ಪ್ರತ್ಯೇಕವಾಗಿ ಇರಿಸಲಾಗಿತ್ತು. ಆ ನಿರ್ದಿಷ್ಟ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿತ್ತು. ಈ ಸಂಬಂಧ ನೆನ್ನೆ ಮಾತನಾಡಿದ್ದ ಸಿಎಂ ಅರವಿಂದ್ ಕೇಜ್ರಿವಾಲ್, ಕೊರೋನಾ ವೈರಸ್ ತಡೆಗೆ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಎಲ್ಲ ಶಾಲೆಗಳಿಗೂ ರಜೆ ನೀಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದರು. ಆದರೆ, ವೈರಸ್ ಹರಡುವಿಕೆ ಭಯದಿಂದ ಇದೀಗ ದೆಹಲಿಯ ಎಲ್ಲಾ ಶಾಲೆಗಳಿಗೆ ಮಾರ್ಚ್ 31ರವರೆಗೆ ರಜೆ ಘೋಷಣೆ ಮಾಡಲಾಗಿದೆ.


  ಇದನ್ನು ಓದಿ: ಕೊರೋನಾ ವೈರಸ್​ ಭಯವೇ? ಇಲ್ಲಿದೆ 20 ಲಕ್ಷದವರೆಗಿನ ಇನ್ಶೂರೆನ್ಸ್​ ಆಫರ್​ ಕೇವಲ 253 ರೂಪಾಯಿಗಳಿಗೆ

  Published by:HR Ramesh
  First published: