ಕೊರೋನಾ ವೈರಸ್​ಗೆ ಅಮೆರಿಕದಲ್ಲಿ 61 ಸಾವಿರ ಮಂದಿ ಬಲಿ; ವಿಶ್ವಾದ್ಯಂತ 32 ಲಕ್ಷ ಮಂದಿಗೆ ಸೋಂಕು

24 ಗಂಟೆಯಲ್ಲಿ ಅಮೆರಿಕದಲ್ಲಿ ಕೊರೋನಾ ವೈರಸ್​ಗೆ 2,209 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 61,668ಕ್ಕೆ ಏರಿಕೆ ಆಗಿದೆ. 10.64 ಲಕ್ಷ ಮಂದಿಯಲ್ಲಿ ಸೋಂಕಿರುವುದು ದೃಢಪಟ್ಟಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ನವದೆಹಲಿ (ಏ.30):  ಪೆಂಡಂಭೂತದಂತೆ ಕಾಡುತ್ತಿರುವ ಕೊರೋನಾ ವೈರಸ್​ಗೆ ಅಮೆರಿಕದಲ್ಲಿ ಮೃತಪಟ್ಟವರ ಸಂಖ್ಯೆ 61 ಸಾವಿರಕ್ಕೆ ಏರಿಕೆ ಆಗಿದೆ. ನಿತ್ಯ ಸರಾಸರಿ 2 ಸಾವಿರ ಜನರು ಸಾಯುತ್ತಿದ್ದಾರೆ. ಇದು ಅಮೆರಿಕಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

  24 ಗಂಟೆಯಲ್ಲಿ ಅಮೆರಿಕದಲ್ಲಿ ಕೊರೋನಾ ವೈರಸ್​ಗೆ 2,209 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 61,668ಕ್ಕೆ ಏರಿಕೆ ಆಗಿದೆ. 10.64 ಲಕ್ಷ ಮಂದಿಯಲ್ಲಿ ಸೋಂಕಿರುವುದು ದೃಢಪಟ್ಟಿದೆ.

  ಇನ್ನು, ವಿಶ್ವದಲ್ಲೂ ಕೊರೋನಾ ಹಾವಳಿ ಮುಂದುವರಿದಿದೆ. ಇಡೀ ವಿಶ್ವದಲ್ಲಿ 32.19 ಲಕ್ಷ ಜನರಿಗೆ ಕೊರೋನಾ ಅಂಟಿದೆ. ಈ ಮಹಾಮಾರಿ ವೈರಸ್​ನಿಂದ 2.28 ಲಕ್ಷ ಮಂದಿ ಅಸುನೀಗಿದ್ದಾರೆ. ಈ ವೈರಸ್​ನಿಂದ ಗುಣಮುಖರಾದವರ ಸಂಖ್ಯೆ 10 ಲಕ್ಷ ಮಂದಿ.

  ಇದನ್ನೂ ಓದಿ: ಕೊರೋನಾ ಸೋಂಕಿತನೊಂದಿಗೆ ಸಂಪರ್ಕ; ರಾಜ್ಯದ ಡಿಸಿಎಂ ಸೇರಿ ನಾಲ್ವರು ಸಚಿವರು ಕ್ವಾರಂಟೈನ್​

  ಅತಿ ಹೆಚ್ಚು ಕೊರೋನಾ ಸೋಂಕಿತರಿರುವ ಎರಡನೇ ದೇಶ ಎಂಬ ಪಟ್ಟ ಸ್ಪೇನ್​ಗೆ ಸಿಕ್ಕಿದೆ. ಈ ದೇಶದಲ್ಲಿ ಸೋಂಕಿತರ ಸಂಖ್ಯೆ 2.36 ಲಕ್ಷದ ಗಡಿ ತಲುಪಿದೆ. 24 ಸಾವಿರ ಮಂದಿ ಮೃತಪಟ್ಟಿದ್ದಾರೆ. ಇಟಲಿಯಲ್ಲಿ 2 ಲಕ್ಷ ಜನರಿಗೆ ಸೋಂಕು ಅಂಟಿದ್ದು, ಸಾವಿನ ಸಂಖ್ಯೆ 28 ಸಾವಿರದ ಗಡಿ ತಲುಪಿದೆ. ಈ ಮೊದಲ ವಾರಗಳಿಗೆ ಹೋಲಿಸಿದರೆ ಇಟಲಿಯಲ್ಲಿ ಕೊರೋನಾ ಕೊಂಚ ನಿಯಂತ್ರಣಕ್ಕೆ ಬಂದಿದೆ ಎನ್ನಬಹುದು.

  ಫ್ರಾನ್ಸ್​, ಜರ್ಮನಿ, ಇಂಗ್ಲೆಂಡ್​ನಲ್ಲೂ ಪರಿಸ್ಥಿತಿ ಕೈ ಮೀರಿದೆ. ಫ್ರಾನ್ಸ್​ನಲ್ಲಿ 1.67 ಲಕ್ಷ ಮಂದಿಗೆ ಕೊರೋನಾ ದೃಢಪಟ್ಟಿದೆ. 24 ಸಾವಿರ ಮಂದಿ ಮೃತಪಟ್ಟಿದ್ದಾರೆ. ಜರ್ಮನಿಯಲ್ಲಿ 1.61 ಲಕ್ಷ ಜನರಿಗೆ ಕೊರೋನಾ ಸೋಂಕಿದೆ. 6 ಸಾವಿರ ಜನರು ಮೃತಪಟ್ಟಿದ್ದಾರೆ.
  First published: