HOME » NEWS » Coronavirus-latest-news » AMID COVID CRISIS SSLC EXAM POSTPONED SAYS EDUCATION MINISTER SURESH KUMAR SESR

SSLC Exam 2021: ಎಸ್​ಎಸ್​ಎಲ್​ಸಿ ಪರೀಕ್ಷೆ ಮುಂದೂಡಿಕೆ: ಸಚಿವ ಸುರೇಶ್​ ಕುಮಾರ್​ ಆದೇಶ

ಸೋಂಕು ಹೆಚ್ಚುತ್ತಿರುವ ಹಿನ್ನಲೆ ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ

news18-kannada
Updated:May 13, 2021, 5:05 PM IST
SSLC Exam 2021: ಎಸ್​ಎಸ್​ಎಲ್​ಸಿ ಪರೀಕ್ಷೆ ಮುಂದೂಡಿಕೆ: ಸಚಿವ ಸುರೇಶ್​ ಕುಮಾರ್​ ಆದೇಶ
ಸಾಂದರ್ಭಿಕ ಚಿತ್ರ.
  • Share this:
ಬೆಂಗಳೂರು (ಮೇ. 13): ರಾಜ್ಯದಲ್ಲಿ ಎರಡನೇ ಅಲೆ ಸೋಂಕು ತೀವ್ರ ಸ್ವರೂಪವಾಗಿರುವ ಹಿನ್ನಲೆ ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್ 19ರ ಎರಡನೇ‌ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಪರೀಕ್ಷೆ ಮುಂದೂಡಿದ ಹಿನ್ನಲೆ  ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ‌ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು.  ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.

ಜೂನ್ 14ರಿಂದ ಜೂನ್​ 25ರವರೆಗೂ ಹತ್ತನೇ ತರಗತಿ ಪರೀಕ್ಷೆಗಳು ನಿಗದಿ ಪಡಿಸಿ, ದಿನಾಂಕವನ್ನು ಈಗಾಗಲೇ ಪ್ರಕಟಿಸಲಾಗಿತ್ತು. ಆದರೆ, ಸೋಂಕು ಹೆಚ್ಚುತ್ತಿರುವ ಹಿನ್ನಲೆ ಪರೀಕ್ಷೆಗೆ ಸಹಕಾರ ನೀಡಬೇಕಿದ್ದ ಇಲಾಖೆಗಳು ಕೋವಿಡ್ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವುದು ಹಾಗೆಯೇ ಪರೀಕ್ಷೆ ತೆಗೆದುಕೊಳ್ಳಬೇಕಿದ್ದ ವಿದ್ಯಾರ್ಥಿಗಳು ತಮ್ಮ ತಮ್ಮ ಊರಿನಲ್ಲಿ ವಾಸ್ತವ್ಯ ಹೂಡಿರುವ ಹಿನ್ನಲೆ ಈ ಕ್ರಮಕ್ಕೆ ಬರಲಾಗಿದೆ ಎಂದು ತಿಳಿಸಿದ್ದಾರೆ.

CET 2021: ಸಿಇಟಿ ಪರೀಕ್ಷೆ ಮುಂದೂಡಿಕೆ; ಆಗಸ್ಟ್​ನಲ್ಲಿ ಪರೀಕ್ಷೆ ಮರು ನಿಗದಿ

ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಸೋಂಕಿನ ಹಿನ್ನಲೆ ಈಗಾಗಲೇ ದ್ವೀತಿಯ ಪಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ.  ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದುಮ  ಮುಂದಿನ ದಿನಗಳಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ. ಇದರ ಬೆನ್ನಲ್ಲೇ ನಿನ್ನೆ ಸಿಇಟಿ ಪರೀಕ್ಷೆಯನ್ನು ಕೂಡ ಮುಂದೂಡಲಾಗಿದೆ. ಈ ಮೊದಲು ಜುಲೈ 7 ಮತ್ತು 8 ರಂದು ಸಿಇಟಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಇದೀಗ ಈ ಪರೀಕ್ಷೆಯನ್ನು ಮುಂದೂಡಲಾಗಿದ್ದು,  ಹೊಸ ವೇಳಾಪಟ್ಟಿಯಂತೆ ಆಗಸ್ಟ್​ 28 ಮತ್ತು 29ರಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.
Published by: Seema R
First published: May 13, 2021, 5:05 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories