ನವದೆಹಲಿ(ಜೂ.01): ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿಯೂ ಹಲವು ವರ್ಷಗಳ ಬೇಡಿಕೆಯಾಗಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ನೆಟ್ವರ್ಕ್ 18 ಗ್ರೂಪ್ನ ಮುಖ್ಯ ಸಂಪಾದಕ ರಾಹುಲ್ ಜೋಷಿಯವರಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅಮಿತ್ ಶಾ ಅವರು, 370ನೇ ವಿಧಿ ರದ್ದು ಎಷ್ಟು ವರ್ಷಗಳ ಬೇಡಿಕೆ ಎಂಬ ಬಗ್ಗೆ ಮಾಹಿತಿ ನೀಡಿದರು.
370ನೇ ವಿಧಿ ರದ್ದು ಮಾಡಬೇಕು ಎಂದು ಹಲವು ವರ್ಷಗಳಿಂದ ಬೇಡಿಕೆ ಇತ್ತು. ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡುವುದಾಗಿ ಭರವಸೆ ನೀಡಿದ್ದೆವು. ಅದರಂತೆಯೇ ಮೋದಿ ಸರ್ಕಾರ 370ನೇ ವಿಧಿ ರದ್ದು ಮಾಡಿದ ಕಾರಣ ಕಾಶ್ಮೀರ ಭಾರತದ್ದೇ ಎಂಬುದನ್ನು ಸಾಬೀತು ಮಾಡಿದೆವು ಎಂದರು ಅಮಿತ್ ಶಾ.
ಇನ್ನು, ಈ ವಿಶೇಷ ಇಂಟರ್ವ್ಯೂನಲ್ಲಿ ಅಮಿತ್ ಶಾ ಅವರು ಸರ್ಕಾರದ ಅಭಿವೃದ್ಧಿ ಸಾಧನೆಗಳ ವಿವರ ನೀಡಿದ್ಧಾರೆ. ಹಾಗೆಯೇ ಲಾಕ್ ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರ ಸಂಕಷ್ಟ ನಿವಾರಿಸಲು ಸರ್ಕಾರದ ಮಾಡಿದ ಪ್ರಯತ್ನಗಳನ್ನ ತಿಳಿಸಿದ್ದಾರೆ.
ನಾವು ಯಾವುದೇ ಗಡಿ ನಿಯಮವನ್ನು ಉಲ್ಲಂಘನೆ ಮಾಡಿಲ್ಲ. ಹಾಗೇ, ನಮ್ಮ ದೇಶದ ಗಡಿಯಲ್ಲಿ ಗಲಭೆ ಎಬ್ಬಿಸುವವರನ್ನು ಹತ್ತಿಕ್ಕುವುದರಲ್ಲಿಯೂ ನಾವು ಹಿಂದೆ ಬಿದ್ದಿಲ್ಲ. ನಮ್ಮ ದೇಶದ ಗಡಿಯೊಳಗೆ ನುಸುಳಲು ಪ್ರಯತ್ನಿಸುತ್ತಿದ್ದವರಿಗೆ ಸರ್ಜಿಕಲ್ ದಾಳಿಯ ಮೂಲಕ ತಕ್ಕ ಉತ್ತರವನ್ನು ನೀಡಿದ್ದೇವೆ ಎಂದು ಪಾಕಿಸ್ತಾನದ ಮೇಲೆ ನಡೆದ ಸರ್ಜಿಕಲ್ ಸ್ಟ್ರೈಕ್ ಅನ್ನು ಅಮಿತ್ ಶಾ ನೆನಪಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ