Amitabh Bachchan: ಅಮಿತಾಬ್​ ಬಚ್ಚನ್​, ಮಗ ಅಭಿಷೇಕ್​ ಇಬ್ಬರಿಗೂ ಕೊರೋನಾ ಪಾಸಿಟಿವ್​: ಆಸ್ಪತ್ರೆಗೆ ದಾಖಲು

Abhishek Bachchan: ಅಮಿತಾಭ್ ಬಚ್ಚನ್ ಮತ್ತು ಅಭಿಷೇಕ್​ ಬಚ್ಚನ್​ ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

news18
Updated:July 12, 2020, 12:14 AM IST
Amitabh Bachchan: ಅಮಿತಾಬ್​ ಬಚ್ಚನ್​, ಮಗ ಅಭಿಷೇಕ್​ ಇಬ್ಬರಿಗೂ ಕೊರೋನಾ ಪಾಸಿಟಿವ್​: ಆಸ್ಪತ್ರೆಗೆ ದಾಖಲು
ಅಮಿತಾಭ್​ ಬಚ್ಚನ್-ಅಭಿಷೇಕ್​ ಬಚ್ಚನ್
  • News18
  • Last Updated: July 12, 2020, 12:14 AM IST
  • Share this:
ಮುಂಬೈ(ಜುಲೈ 11): ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮತ್ತು ಮಗ ಅಭಿಷೇಕ್​ ಬಚ್ಚನ್​ ಅವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಇವರಿಬ್ಬರ ಸ್ವಾಬ್ ಟೆಸ್ಟ್​ನಲ್ಲಿ ಕೊರೋನಾ ಪಾಸಿಟಿವ್ ಬಂದಿದೆ. ಇಲ್ಲಿಯ ನಾನಾವತಿ ಆಸ್ಪತ್ರೆಗೆ ಅವರನ್ನ ದಾಖಲಿಸಲಾಗಿದೆ. ಅಮಿತಾಭ್ ಬಚ್ಚನ್ ಅವರು ಈ ವಿಚಾರವನ್ನು ಟ್ವೀಟ್ ಮಾಡಿ ಖಚಿತಪಡಿಸಿದ್ಧಾರೆ.

ಹಾಗೆಯೇ, ತನ್ನ ಸಂಪರ್ಕಕ್ಕೆ ಬಂದಿದ್ದ ಯಾವುದೇ ವ್ಯಕ್ತಿಯಾದರೂ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಬಿಗ್ ಬಿ ಮನವಿ ಮಾಡಿದ್ದಾರೆ.

“ನನಗೆ ಕೋವಿಡ್ ಪಾಸಿಟಿವ್ ಬಂದಿದೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬಸದಸ್ಯರು ಮತ್ತು ಸಿಬ್ಬಂದಿವರ್ಗದವರ ಪರೀಕ್ಷೆ ನಡೆಯುತ್ತಿದೆ. ಅದರ ಫಲಿತಾಂಶ ಬರಬೇಕಿದೆ. ಕಳೆದ 10 ದಿನಗಳಿಂದ ನನ್ನ ಸಮೀಪ ಬಂದಿದ್ದ ಯಾರೇ ಆದರೂ ಪರೀಕ್ಷೆ ಮಾಡಿಸಿಕೊಳ್ಳಿ” ಎಂದು ಬಚ್ಚನ್ ಟ್ವೀಟ್ ಮಾಡಿದ್ದಾರೆ.


ಅಭಿಷೇಕ್​​ ಬಚ್ಚನ್​ ಕೂಡ ಟ್ವೀಟ್​ ಮಾಡಿದ್ದು, ಇಂದು ಬೆಳಗ್ಗೆ ನಾನು ನನ್ನ ತಂದೆ ಇಬ್ಬರಿಗೂ ಕೊರೋನಾ ಪಾಸಿಟಿವ್ ಇರೋದು ದೃಢಪಟ್ಟಿದೆ. ರೋಗ ಲಕ್ಷಣಗಳಿರುವ ಕಾರಣ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದೇವೆ. ನಾವು ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಕುರಿತು ಮಾಹಿತಿ ನೀಡಿದ್ದು, ನಮ್ಮ ಕುಟುಂಬದವರು ಮತ್ತು ಮನೆಯಲ್ಲಿರುವ ಸಿಬ್ಬಂದಿಗಳಿಗೆ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ ಎಂದು ಟ್ವೀಟ್​ನನಲ್ಲಿ ಬರೆದುಕೊಂಡಿದ್ದಾರೆ

ಇದನ್ನೂ ಓದಿ: ದೆಹಲಿಯಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ; 1,781 ಹೊಸ ಪ್ರಕರಣಗಳು ಪತ್ತೆ

ಅಮಿತಾಭ್ ಬಚ್ಚನ್ ಅವರ ಕೈಯಲ್ಲಿ ಹಲವು ಪ್ರಾಜೆಕ್ಟ್​ಗಳಿವೆ. ಶೂಜಿತ್ ಸಿರ್ಕಾರ್ ಅವರ ‘ಗುಲಾಬೊ ಸಿಬಾಬೊ’ ಹಾಸ್ಯ ಚಿತ್ರದಲ್ಲಿ ಅಭಿನಯಿಸಿದ್ದು ಅವರ ಸದ್ಯದ ಕೊನೆಯ ಚಿತ್ರ. ‘ಚೆಹರೆ’, ‘ಬ್ರಹ್ಮಾಸ್ತ್ರ’, ‘ಝಂಡ್’ ಅವರ ಮುಂಬರುವ ಸಿನಿಮಾಗಳಾಗಿವೆ. ಇದರ ಜೊತೆಗೆ ಬಿಗ್ ಬಿ ಅವರು ಕೌನ್ ಬನೇಗ ಕರೋಡ್​ಪತಿ ರಿಯಾಲಿಟಿ ಶೋನ 12ನೇ ಸೀಸನ್​ನಲ್ಲೂ ನಿರೂಪಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಅಭಿಷೇಕ್​ ಬಚ್ಚನ್​ ನಟೆನೆಯ ‘ಬ್ರೀತ್​ ಇನ್​ ಟು ದಿ ಶ್ಯಾಡೊ’ ವೆಬ್​ ಸಿರೀಸ್​​ ಜುಲೈ 10ರಂದು ಅಮೆಜಾನ್​ ಪ್ರೈಮ್​ ನಲ್ಲಿ ಬಿಡುಗಡೆಯಾಗಿದೆ.

ಇದೇ ವೇಳೆ, ನಟಿ ರೇಖಾ ಅವರ ಭದ್ರತಾ ಸಿಬ್ಬಂದಿಯೊಬ್ಬರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ರೇಖಾ ಅವರ ಬಂಗಲೆಯನ್ನು ಸೀಲ್ ಡೌನ್ ಮಾಡಲಾಗಿದೆ ಎಂಬ ಸುದ್ದಿ ಕೇಳಿಬಂದಿದೆ.
Published by: Vijayasarthy SN
First published: July 11, 2020, 11:19 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading