CoronaVirus: ಹೆಚ್ಚುತ್ತಿರುವ ಕೊರೋನಾ ಪ್ರಕರಣ; ನಾಳೆಯಿಂದ ಎಲ್ಲಾ ಸರ್ಕಾರಿ-ಖಾಸಗಿ ಕಾಲೇಜುಗಳಿಗೆ 15 ದಿನ ರಜೆ ಘೋಷಣೆ

ನೆರೆಯ ಕೆರಳ ಮತ್ತು ಮಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕವಾಗುತ್ತಲೇ ಇದೆ. ಇದೇ ಕಾರಣಕ್ಕೆ ಗಡಿ ಭಾಗದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿರುವ ಸರ್ಕಾರ ಕೋವಿಡ್​ ನೆಗೆಟಿವ್ ವರದಿ ಇರುವವರಿಗೆ ಮಾತ್ರ ರಾಜ್ಯಕ್ಕೆ ಪ್ರವೇಶ ಎಂದು ತಿಳಿಸಿದೆ.

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

 • Share this:
  ಬೆಂಗಳೂರು (ಮಾರ್ಚ್​ 14); ರಾಜ್ಯದಲ್ಲಿ ಮತ್ತೆ ಕೊರೋನಾ ವೈರಸ್​ ಪ್ರಕರಣಗಳು ಮತ್ತೆ ದಿನದಿಂದ ದಿನಕ್ಕೆ ಏರುತ್ತಿದೆ. ಒಂದು ಹಂತದಲ್ಲಿ ರಾಜ್ಯದಲ್ಲಿ ಸಂಪೂರ್ಣ ತಹಬಂದಿದೆ ಬಂದಿದ್ದ ವೈರಸ್​ ಪ್ರಕರಣಗಳ ಸಂಖ್ಯೆ ಇದೀಗ ಮತ್ತೊಮ್ಮೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದೇ ಕಾರಣಕ್ಕೆ ಇಂದು ಹೊಸ ಆದೇಶವೊಂದನ್ನು ಹೊರಡಿಸಿರುವ ರಾಜ್ಯ ಸರ್ಕಾರ ನಾಳೆಯಿಂದ 15 ದಿನಗಳ ಕಾಲ ರಾಜ್ಯದ ಎಲ್ಲಾ ಸರ್ಕಾರಿ-ಖಾಸಗಿ ಮತ್ತು ಅನುದಾನಿತ ಕಾಲೇಜುಗಳಿಗೆ ರಜೆ ನೀಡಿ ಸುತ್ತೋಲೆ ಹೊರಡಿಸಿದೆ. ಅಲ್ಲದೆ, 15 ದಿನಗಳ ನಂತರ ಕಾಲೇಜುಗಳು ಎಂದಿನಂತೆ ನಡೆಯಲಿವೆ ಎಂದು ತಿಳಿಸಲಾಗಿದೆ. ಕೊರೋನಾ ವೈರಸ್​ ಎರಡನೇ ಹಂತದ ಹರಡುವಿಕೆ ಅಧಿಕವಾಗುತ್ತಿದ್ದು, ಇದೇ ಕಾರಣಕ್ಕೆ ಶಾಲಾ-ಕಾಲೇಜುಗಳಿ್ಗೆ ಮತ್ತೆ ರಜೆ ನೀಡಲಾಗಿದೆ ಎನ್ನಲಾಗುತ್ತಿದೆ.

  corona1
  ಸರ್ಕಾರದ ಸುತ್ತೋಲೆ.


  ನೆರೆಯ ಕೆರಳ ಮತ್ತು ಮಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕವಾಗುತ್ತಲೇ ಇದೆ. ಇದೇ ಕಾರಣಕ್ಕೆ ಗಡಿ ಭಾಗದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿರುವ ಸರ್ಕಾರ ಕೋವಿಡ್​ ನೆಗೆಟಿವ್ ವರದಿ ಇರುವವರಿಗೆ ಮಾತ್ರ ರಾಜ್ಯಕ್ಕೆ ಪ್ರವೇಶ ಎಂದು ತಿಳಿಸಿದೆ. ಹೀಗಾಗಿ ಎಲ್ಲಾ ಜಿಲ್ಲಾಡಳಿತಗಳು ಗಡಿಭಾಗದಲ್ಲಿ ಚೆಕ್​ಪೋಸ್ಟ್​ ನಿರ್ಮಿಸಿದ್ದು, ಜನರನ್ನು ತೀವ್ರ ತಪಾಸಣೆಗೆ ಒಳಪಡಿಸಿ ನಂತರ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡುತ್ತಿದೆ.

  ಇದನ್ನೂ ಓದಿ: HD Kumaraswamy: ಬೆಳಗಾವಿ ನಮ್ಮದು,ಇಲ್ಲಿ ಕನ್ನಡ ಧ್ವಜ ಹಾರಿಸುವುದು ನಮ್ಮ ಹಕ್ಕು, ಶಿವಸೇನೆ ಪುಂಡಾಟ ಬಿಡಿ; ಕುಮಾರಸ್ವಾಮಿ ಆಕ್ರೋಶ

  ಆದರೂ, ಕೇರಳ ಮತ್ತು ಮಹಾರಾಷ್ಟ್ರ ಗಡಿಭಾಗದಲ್ಲಿ ಅನೇಕರು ಕಳ್ಳ ದಾರಿ ಹಿಡಿದು ರಾಜ್ಯವನ್ನು ಪ್ರವೇಶಿಸುತ್ತಿರುವುದೇ ಕರ್ನಾಟಕದಲ್ಲಿ ಮತ್ತೆ ಕೊರೋನಾ ವೈರಸ್​ ಪ್ರಕರಣಗಳು ಹೆಚ್ಚಾಗಲು ಕಾರಣ ಎನ್ನಲಾಗುತ್ತಿದೆ. ಈ ನಡುವೆ ಮಹಾರಾಷ್ಟ್ರ ದೇಶದಲ್ಲೇ ಅತಿಹೆಚ್ಚು ಕೊರೋನಾ ವೈರಸ್​ ಪೀಡಿತರನ್ನು ಹೊಂದಿರುವುದು ಸಹ ಆತಂಕಕ್ಕೆ ಕಾರಣವಾಗಿದೆ.

  ಕೊರೋನಾ ನಿಯಂತ್ರಣಕ್ಕಾಗಿ ಕಳೆದ ವರ್ಷ ಮಾರ್ಚ್​ನಲ್ಲಿ ದೇಶದಾದ್ಯಂತ ಲಾಕ್​ಡೌನ್ ಘೋಷಣೆ ಮಾಡಲಾಗಿತ್ತು. ಆದರೆ, ಅದಕ್ಕೂ ಮುನ್ನವೇ ರಾಜ್ಯದಲ್ಲಿ ಎಲ್ಲಾ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿತ್ತು. ಇತ್ತೀಚೆಗೆ ಕೊರೋನಾ ಪ್ರಕರಣಗಳು ಕಡಿಮೆಯಾದ ಕಾರಣದಿಂದಾಗಿ ಮತ್ತೆ ಶಾಲಾ-ಕಾಲೇಜುಗಳು ಎಂದಿನಂತೆ ಆರಂಭವಾಗಿದ್ದವು. ಆದರೆ, ಇದೀಗ ಸರ್ಕಾರ ಮತ್ತೆ ಶಾಲಾ--ಕಾಲೇಜುಗಳಿಗೆ ರಜೆ ನೀಡಿರುವುದು ವಿದ್ಯಾರ್ಥಿಗಳ ಈ ವರ್ಷದ ಶೈಕ್ಷಣಿಕ ಜೀವನದ ಮೇಲೆ ಸಾಕಷ್ಟು ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ.
  Published by:MAshok Kumar
  First published: