ಕೊರೋನಾ ಲಾಕ್​ಡೌನ್​: 6-9ನೇ ತರಗತಿ ವಿದ್ಯಾರ್ಥಿಗಳನ್ನು ಪಾಸು ಮಾಡಿದ ಆಂಧ್ರ ಸರ್ಕಾರ

ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಂಧ್ರ ಸಿಎಂ ವೈ.ಎಸ್.ಜಗನ್ ಮೋಹನ್ ರೆಡ್ಡಿ ನಿರ್ದೇಶನದ ಮೇರೆಗೆ ಈ ಆದೇಶ ಹೊರಡಿಸಲಾಗಿದೆ.

news18-kannada
Updated:March 27, 2020, 9:00 AM IST
ಕೊರೋನಾ ಲಾಕ್​ಡೌನ್​: 6-9ನೇ ತರಗತಿ ವಿದ್ಯಾರ್ಥಿಗಳನ್ನು ಪಾಸು ಮಾಡಿದ ಆಂಧ್ರ ಸರ್ಕಾರ
ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಂಧ್ರ ಸಿಎಂ ವೈ.ಎಸ್.ಜಗನ್ ಮೋಹನ್ ರೆಡ್ಡಿ ನಿರ್ದೇಶನದ ಮೇರೆಗೆ ಈ ಆದೇಶ ಹೊರಡಿಸಲಾಗಿದೆ.
  • Share this:
ಆಂಧ್ರ ಪ್ರದೇಶ(ಮಾ.27): ಎಲ್ಲೆಡೆ ಕೊರೋನಾ ಭೀತಿ ಹೆಚ್ಚಾಗಿರುವುದರಿಂದ ಏಪ್ರಿಲ್ 14ರವರೆಗೆ ಇಡಿ ದೇಶವನ್ನೇ ಲಾಕ್​ ಡೌನ್​ ಮಾಡಲಾಗಿದೆ. ಲಾಕ್​ ಡೌನ್​ ಆದೇಶದ ಹಿನ್ನೆಲೆ ಆಂಧ್ರ ಪ್ರದೇಶ ಸರ್ಕಾರವು 6ರಿಂದ 9ನೇ ತರಗತಿವರೆಗಿನ ವಾರ್ಷಿಕ ಪರೀಕ್ಷೆಯನ್ನು ರದ್ದು ಮಾಡಿದ್ದು, ಈ ತರಗತಿಗಳ ಎಲ್ಲಾ ವಿದ್ಯಾರ್ಥಿಗಳು ಮುಂದಿನ ತರಗತಿಗೆ ಉತ್ತೀರ್ಣರಾಗಿದ್ದಾರೆ ಎಂದು ಆದೇಶಿಸಿದೆ.

ಕೊರೋನಾ ವೈರಸ್​ ಹರಡುವಿಕೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ 3 ವಾರಗಳ ಕಾಲ ಲಾಕ್​ಡೌನ್​ ಘೋಷಿಸಿದೆ. ಈ ಹಿನ್ನೆಲೆ ಅಗತ್ಯ ಮತ್ತು ತುರ್ತು ಸೇವೆಗಳನ್ನು ಹೊರತುಪಡಿಸಿ, ಉಳಿದೆಲ್ಲಾ ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡಿವೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕೊರೋನಾಗೆ ತತ್ತರಿಸಿದ ವಿಶ್ವದ ದೊಡ್ಡಣ್ಣ; ಒಂದೇ ದಿನ ಅಮೆರಿಕದಲ್ಲಿ 10 ಸಾವಿರ ಹೊಸ ಪ್ರಕರಣ

ಹೀಗಾಗಿ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಅಸಾಧ್ಯವಾಗಿದೆ ಎಂದು ಸ್ಕೂಲ್ ಎಜುಕೇಷನ್ ಕಮೀಷನರ್ ವದ್ರೇವು ಚಿನ ವೀರಭದ್ರುಡು ಹೇಳಿದ್ದಾರೆ. ಆಂಧ್ರ ಪ್ರದೇಶ ಸರ್ಕಾರವು 6ನೇ ತರಗತಿಯಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳನ್ನು ಪಾಸ್​ ಮಾಡಿ ಆದೇಶ ಹೊರಡಿಸಿದೆ.

ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಂಧ್ರ ಸಿಎಂ ವೈ.ಎಸ್.ಜಗನ್ ಮೋಹನ್ ರೆಡ್ಡಿ ನಿರ್ದೇಶನದ ಮೇರೆಗೆ ಈ ಆದೇಶ ಹೊರಡಿಸಲಾಗಿದೆ.

ಲಾಕ್​ಡೌನ್​ ಹಿನ್ನೆಲೆ, ಶಾಲೆಗಳನ್ನು ಮುಚ್ಚಿರುವುದರಿಂದ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಿಗೆ ಅವರ ಮನೆಗಳಿಗೆ ಪಡಿತರ ವಿತರಣೆ ಮಾಡಬೇಕೆಂದು ಜಗನ್​ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
 
First published:March 27, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading