ಬೆಂಗಳೂರು(ಮಾ.22): ಕೊರೋನಾ ವೈರಸ್ ಮಟ್ಟ ಹಾಕಲು ರಾಜ್ಯ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದಾಗ್ಯೂ ವೈರಸ್ ಹರಡುವಿಕೆ ನಿಯಂತ್ರಣಕ್ಕೆ ಬರುತ್ತಿಲ್ಲ. ಭಾನುವಾರ ಒಂದೇ ದಿನ 6 ಹೊಸ ಪ್ರಕರಣ ದಾಖಲಾಗಿದ್ದವು. ಸೋಮವಾರ ಕೂಡ ಕೊರೋನಾ ಅಟ್ಟಹಾಸ ಮುಂದುವರಿದಿದ್ದು, ಕರ್ನಾಟಕದಲ್ಲಿ ಹೊಸ ಪ್ರಕರಣ ದಾಖಲಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆ ಆಗಿದೆ.
ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ ಬೆಂಗಳೂರಿನಲ್ಲಿ 17, ಕಲ್ಬುರ್ಗಿ 3, ಕೊಡಗು 1, ಚಿಕ್ಕಬಳ್ಳಾಪುರ 2, ಮೈಸೂರು 2, ಧಾರವಾಡ 1, ಉತ್ತರ ಕನ್ನಡ 1 ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನ ಕೊರೋನಾ ಸೋಂಕಿತ ಚೇತರಿಕೆ ಕಂಡಿದ್ದು, ಮನೆಗೆ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಉಳಿದವರು ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕೊರೋನಾ ಲಕ್ಷಣಗಳು ಕಂಡುಬಂದಿದ್ದರಿಂದ 6 ಜನರನ್ನು ರಾಜೀವ ಗಾಂಧಿ ಆಸ್ಪತ್ರೆಯಲ್ಲಿ ಐಸೋಲೇಷನ್ನಲ್ಲಿ ಇರಿಸಲಾಗಿದೆ. ಅಲ್ಲಿ ಆ ಆರು ಮಂದಿಗೆ ಚಿಕಿತ್ಸೆ ನೀಡಲಾಗುತ್ತದೆ. ಉಳಿದ 189 ಜನರನ್ನು ಬೆಂಗಳೂರಿನ ಆಕಾಶ್ ವೈದ್ಯಕೀಯ ಸಂಸ್ಥೆಯಲ್ಲಿ ಐಸೋಲೇಷನ್ನಲ್ಲಿ ಇರಿಸಿ, ನಿಗಾ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದರು.
ಇದನ್ನೂ ಓದಿ: ಮಾರ್ಚ್ 31ರವರೆಗೆ ರಾಜ್ಯದ 9 ಜಿಲ್ಲೆಗಳು ಶಟ್ ಡೌನ್; ಕೋವಿಡ್-19 ಎದುರಿಸಲು ಸರ್ಕಾರದಿಂದ ತುರ್ತು ಕ್ರಮಗಳು
ಭಾನುವಾರ ಒಂದೇ ದಿನ ಆರು ಮಂದಿಗೆ ಕೊರೋನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಮೂರನೇ ಹಂತಕ್ಕೆ ಪಸರಿಸಲು ಅಣಿಯಾದಂತಿರುವ ಕೊರೊನಾ ವೈರಸ್ ರೋಗದ ಸೋಂಕು ನಿಗ್ರಹಿಸಲು ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನ ತೆಗೆದುಕೊಂಡಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಬಂದ್ ಮಾಡಲು ಸರ್ಕಾರ ನಿರ್ಧರಿಸಿದೆ. ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇವತ್ತು ನಡೆದ ತುರ್ತು ಸಭೆಯಲ್ಲಿ ಇದೂ ಸೇರಿದಂತೆ ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ