ಮತ್ತೊಬ್ಬರಲ್ಲಿ ಕೊರೋನಾ ವೈರಸ್ ಪತ್ತೆ; ರಾಜ್ಯದಲ್ಲಿ ಒಟ್ಟು 14ಕ್ಕೆ ಏರಿದ ಸೋಂಕಿತರ ಸಂಖ್ಯೆ

ಸೋಂಕಿತರೊಂದಿಗೆ ಸಂಪರ್ಕ ಹೊಂದಿದವರನ್ನು ಪತ್ತೆ ಮಾಡಿ, ಅವರೆಲ್ಲರನ್ನೂ ಕಡ್ಡಾಯವಾಗಿ ಅವರ ಮನೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಎಲ್ಲ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ತಪಾಸಣೆ ಮಾಡುವ ಕಾರ್ಯ ನಿರಂತರ ಪ್ರಗತಿಯಲ್ಲಿದೆ ಎಂದು ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಬೆಂಗಳೂರು: ವ್ಯಾಪಕವಾಗಿ ಹಬ್ಬುತ್ತಿರುವ ಕೊರೋನಾ ವೈರಸ್ ಬಗ್ಗೆ ಆತಂಕ ಹೆಚ್ಚಾಗಿದೆ. ಇಂದು ಬೆಂಗಳೂರಿನ ಮತ್ತಿಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಇದೀಗ ಮತ್ತೋರ್ವ ವ್ಯಕ್ತಿಯಲ್ಲಿ ಮಾರಕು ಸೋಂಕು ತಗುಲಿದೆ. ಇದರೊಂದಿಗೆ ಕರ್ನಾಟಕದಲ್ಲಿ ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

  ಈ ಸಂಬಂಧ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, ಅಮೆರಿಕದಿಂದ ಹಿಂದಿರುಗಿದ 35 ವರ್ಷದ ವ್ಯಕ್ತಿಯಲ್ಲಿ ಕೊರೋನಾ ವೈರಸ್ ತಗುಲಿರುವುದು ಖಚಿತವಾಗಿದೆ. ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಸೋಂಕಿತ ಚಿಕಿತ್ಸೆ ಪಡೆಯುತ್ತಿದ್ದು, ಸೋಂಕು ಹರಡದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.  ಇದಕ್ಕೂ ಮುನ್ನ ಇಂದು ಬೆಳಗ್ಗೆ ಬೆಂಗಳೂರಿನ ಇಬ್ಬರಲ್ಲಿ ಕೊರೋನಾ ಸೋಂಕು ತಗುಲಿರುವುದನ್ನು ಶ್ರೀರಾಮುಲು ಸ್ಪಷ್ಟಪಡಿಸಿದ್ದರು. 56 ವಯಸ್ಸಿನ ಒಬ್ಬರು ಹಾಗೂ 25 ವಯಸ್ಸಿನ ಮಹಿಳೆಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವರಿಬ್ಬರೂ ಬೆಂಗಳೂರಿನವರಾಗಿದ್ದು, ಅವರ ಪ್ರಯಾಣದ ಮಾಹಿತಿಯನ್ನು ಸಂಗ್ರಹಿಸಲಾಗಿದೆ. 56 ವರ್ಷದ ಒಬ್ಬರು ಮಾರ್ಚ್ 6ರಂದು ಅಮೆರಿಕ ಪ್ರವಾಸದಿಂದ ಹಿಂತಿರುಗಿದ್ದರು. 25 ವರ್ಷದ ಇನ್ನೊಬ್ಬ ಮಹಿಳೆ ಸ್ಪೇನ್ ಪ್ರವಾಸದಿಂದ ಹಿಂದಿರುಗಿದ್ದರು. ಇಬ್ಬರನ್ನೂ ಈಗಾಗಲೇ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಿ, ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ಸಚಿವ ಶ್ರೀರಾಮುಲು ಮಾಹಿತಿ ನೀಡಿದ್ದರು.

  ಇದನ್ನು ಓದಿ: ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಕೊರೋನಾ ವೈರಸ್ ಪತ್ತೆ; ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 13ಕ್ಕೆ ಏರಿಕೆ

  ಸೋಂಕಿತರೊಂದಿಗೆ ಸಂಪರ್ಕ ಹೊಂದಿದವರನ್ನು ಪತ್ತೆ ಮಾಡಿ, ಅವರೆಲ್ಲರನ್ನೂ ಕಡ್ಡಾಯವಾಗಿ ಅವರ ಮನೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಎಲ್ಲ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ತಪಾಸಣೆ ಮಾಡುವ ಕಾರ್ಯ ನಿರಂತರ ಪ್ರಗತಿಯಲ್ಲಿದೆ ಎಂದು ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.


  First published: