ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಎಷ್ಟೇ ಜಾಗೃತೆವಹಿಸಿದರು ಕೊರೋನಾ ಸೋಂಕು ಹಬ್ಬುತ್ತಲೇ ಇದೇ. ಇದೀಗ ಬಾಲಿವುಡ್ ನಟ ಅರ್ಜುನ್ ಕಪೂರ್ಗೂ ಕೊರೋನಾ ಸೋಂಕು ತಗುಲಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಬಾಲಿವುಡ್ ಅನೇಕ ತಾರೆಯರಿಗೆ ಕೋವಿಡ್-19 ಸೋಂಕು ತಗುಲಿತ್ತು. ಬಿಗ್ ಬಿ ಅಮಿತಾಭ್ ಬಚ್ಚನ್, ಅಭಿಷೇಕ್ ಬಚ್ಚನ್, ಐಶ್ವರ್ಯಾ ರೈ, ಕನಿಕಾ ಕಪೂರ್, ಜೊಯಾ ಮೊರಾನಿ ಸೇರಿದಂತೆ ಅನೇಕ ತಾರೆಯರಿಗೆ ಪಾಸಿಟಿವ್ ಬಂದಿತ್ತು. ನಂತರ ಸರಿಯಾದ ಚಿಕಿತ್ಸೆ ಪಡೆದುಕೊಂಡು ಕೊರೋನಾವನ್ನು ಮೆಟ್ಟಿನಿಂತಿದ್ದಾರೆ. ಇದೀಗ ಬೋನಿ ಕಫೂರ್ ಮಗ ಅರ್ಜುನ್ ಕಪೂರ್ಗೂ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ಬಗ್ಗೆ ಬರೆದುಕೊಳ್ಳುವ ಮೂಲಕ ಕೊರೋನಾ ತಗುಲಿರುವ ವಿಚಾರವನ್ನು ಹಂಚಿಕೊಂಡಿದ್ದಾರೆ. ‘ನಾನು ಕರೋನಾ ಪರೀಕ್ಷೆ ಮಾಡಿಸಿಕೊಂಡಿದ್ದೆ. ಅದರಲ್ಲಿ ಪಾಸಿಟಿವ್ ಎಂದು ಬಂದಿದೆ. ನನಗೆ ಕೊರೋನಾದ ಯಾವುದೇ ಗುಣ ಲಕ್ಷಣಗಳು ಇಲ್ಲ. ವೈದ್ಯರ ಸಲಹೆ ಮೇರೆಗೆ ಪ್ರತ್ಯೇಕವಾಗಿದ್ದೇನೆ’ ಎಂದಿದ್ದಾರೆ.
ಯಾರು ಭಯ ಪಡಬೇಕಾದ ಅಗತ್ಯವಿಲ್ಲ. ನನ್ನ ಆರೋಗ್ಯ ಚೆನ್ನಾಗಿದೆ. ಪಾಸಿಟಿವ್ ಕಾಣಿಸಿಕೊಂಡಿದ್ದ ಕಾರಣ ನಾನು ಪ್ರತ್ಯೇಕವಾಗಿರಲು ಬಯಸಿದ್ದೇನೆ ಎಂದು ಇನ್ಸ್ಟಾಗ್ರಾಂ ಖಾತೆಯಲ್ಲಿ ಅರ್ಜುನ್ ಕಪೂರ್ ಬರೆದುಕೊಂಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ