ಹೊರ ರಾಜ್ಯದ ವಲಸೆ ಕಾರ್ಮಿಕರಿಗೆ ವಿಶೇಷ ರೈಲಿನ ವ್ಯವಸ್ಥೆ ಮಾಡಿ; ಸರ್ಕಾರಕ್ಕೆ ಮನವಿ ಸಲ್ಲಿಸಿದ ರಾಜ್ಯ ಕಾಂಗ್ರೆಸ್

ಬಡ ವಲಸೆ ಕಾರ್ಮಿಕರನ್ನು ಊರಿಗೆ ಕಳುಹಿಸಲು ಕೇಂದ್ರ ಸರ್ಕಾರ ಟಿಕೆಟ್‌ ದರ ವಸೂಲಿಗೆ ಮುಂದಾಗಿದೆ. ಹೀಗಾಗಿ ಇಂದು ಬೆಳಗ್ಗೆಯೇ ಈ ಕುರಿತು ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ವಲಸೆ ಕಾರ್ಮಿಕರ ರೈಲು ಪ್ರಯಾಣ ದರವನ್ನು ಕಾಂಗ್ರೆಸ್‌ ಭರಿಸುವುದಾಗಿ ಹೇಳಿಕೆ ನೀಡಿದ್ದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರಿಗೆ ಮನವಿ ಸಲ್ಲಿಸಿದ ಡಿ.ಕೆ. ಶಿವಕುಮಾರ್‌ ಮತ್ತು ಸಿದ್ದರಾಮ್ಯ.

ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರಿಗೆ ಮನವಿ ಸಲ್ಲಿಸಿದ ಡಿ.ಕೆ. ಶಿವಕುಮಾರ್‌ ಮತ್ತು ಸಿದ್ದರಾಮ್ಯ.

  • Share this:
ಬೆಂಗಳೂರು (ಮೇ 04); ಲಾಕ್‌ಡೌನ್‌ನಿಂದಾಗಿ ತಮ್ಮ ತಮ್ಮ ಸ್ವಂತ ಊರುಗಳಿಗೆ ಹೋಗಲು ಪರಿತಪಿಸುತ್ತಿರುವ ಹೊರ ರಾಜ್ಯದ ವಲಸೆ ಕಾರ್ಮಿಕರಿಗೆ ಅನುಕೂಲವಾಗುವಂತೆ ವಿಶೇಷ ರೈಲಿನ ವ್ಯವಸ್ಥೆ ಮಾಡಿ ಎಂದು ರಾಜ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಕೊರೋನಾ ಸೋಂಕು ದೇಶದಲ್ಲಿ ಕಡಿಮೆಯಾಗದ ಪರಿಣಾಮ ಲಾಕ್‌ಡೌನ್ ಸಮಯವನ್ನು ಮತ್ತಷ್ಟು ವಿಸ್ತರಿಸಲಾಗಿದೆ. ಹೀಗಾಗಿ ವಲಸೆ ಕಾರ್ಮಿಕರು ಸಂಕಷ್ಟಕ್ಕೆ ಎದುರಾಗಿದ್ದು, ಅವರನ್ನು ಅವರವರ ಊರಿಗೆ ಕಳುಹಿಸುವ ಸಲುವಾಗಿ ರಾಜ್ಯ ಸರ್ಕಾರ ಉಚಿತ ಬಸ್‌ ವ್ಯವಸ್ಥೆಯನ್ನು ಕಲ್ಪಿಸಿದ್ದರೆ. ಹೊರ ರಾಜ್ಯದ ವಲಸೆ ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸಲು ಕೇಂದ್ರ ಸರ್ಕಾರ ರೈಲು ಸೇವೆಯನ್ನು ಆರಂಭಿಸಲು ಮುಂದಾಗಿದೆ.

ಆದರೆ, ಬಡ ವಲಸೆ ಕಾರ್ಮಿಕರನ್ನು ಊರಿಗೆ ಕಳುಹಿಸಲು ಕೇಂದ್ರ ಸರ್ಕಾರ ಟಿಕೆಟ್‌ ದರ ವಸೂಲಿಗೆ ಮುಂದಾಗಿದೆ. ಹೀಗಾಗಿ ಇಂದು ಬೆಳಗ್ಗೆಯೇ ಈ ಕುರಿತು ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ವಲಸೆ ಕಾರ್ಮಿಕರ ರೈಲು ಪ್ರಯಾಣ ದರವನ್ನು ಕಾಂಗ್ರೆಸ್‌ ಭರಿಸುವುದಾಗಿ ಹೇಳಿಕೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರನ್ನು ಭೇಟಿ ಮಾಡಿರುವ ಕಾಂಗ್ರೆಸ್‌ ನಾಯಕರು ವಲಸೆ ಕಾರ್ಮಿಕರಿಗಾಗಿ ವಿಶೇಷ ರೈಲು ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದಾರೆ.

ವಲಸೆ ಕಾರ್ಮಿಕರಿಂದ ರೈಲು ಪ್ರಯಾಣ ದರ ವಸೂಲಿಗೆ ಮುಂದಾಗಿರುವ ಕೇಂದ್ರ ಸರ್ಕಾರದ ನಡೆಯ ವಿರುದ್ಧ ಸ್ವತಃ ಬಿಜೆಪಿ ಮುಖಂಡ ಹಾಗೂ ರಾಜ್ಯಸಭಾ ಸದಸ್ಯರಾಗಿರುವ ಸುಬ್ರಮಣಿಯನ್ ಸ್ವಾಮಿ ಸಹ ಕಿಡಿಕಾರಿದ್ದರು.

ಇದನ್ನೂ ಓದಿ : ಹಸಿವಿನಿಂದ ಸಾಯುತ್ತಿರುವ ವಲಸೆ ಕಾರ್ಮಿಕರಿಂದ ಹಣ ಕೇಳಬೇಡಿ; ಕೇಂದ್ರದ ವಿರುದ್ಧ ಸುಬ್ರಮಣಿಯನ್ ಸ್ವಾಮಿ ಕಿಡಿ
First published: