• ಹೋಂ
  • »
  • ನ್ಯೂಸ್
  • »
  • Corona
  • »
  • Arvind Kejriwal: ದೆಹಲಿಯಲ್ಲಿ ಮತದಾನ ಕೇಂದ್ರಗಳನ್ನು ಲಸಿಕಾ ಕೇಂದ್ರಗಳನ್ನಾಗಿ ಪರಿವರ್ತಿಸಲು ಮುಂದಾದ ಕೇಜ್ರಿವಾಲ್ ಸರ್ಕಾರ

Arvind Kejriwal: ದೆಹಲಿಯಲ್ಲಿ ಮತದಾನ ಕೇಂದ್ರಗಳನ್ನು ಲಸಿಕಾ ಕೇಂದ್ರಗಳನ್ನಾಗಿ ಪರಿವರ್ತಿಸಲು ಮುಂದಾದ ಕೇಜ್ರಿವಾಲ್ ಸರ್ಕಾರ

ಅರವಿಂದ್ ಕೇಜ್ರಿವಾಲ್.

ಅರವಿಂದ್ ಕೇಜ್ರಿವಾಲ್.

ಬೂತ್ ಮಟ್ಟದ ಅಧಿಕಾರಿಗಳು ತಮ್ಮ ವಾರ್ಡ್‌ಗಳಲ್ಲಿ ಪ್ರತಿ ಮನೆಗೆ ಹೋಗಿ ಸಮೀಕ್ಷೆ ನಡೆಸಿ, 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ತೆಗೆದುಕೊಳ್ಳಲು ದಿನಾಂಕ ಮತ್ತು ಸಮಯ ನೀಡಲಿದೆ. ದೆಹಲಿಯಲ್ಲಿ ಸುಮಾರು 280 ವಾರ್ಡ್‌ಗಳಿವೆ. ಪ್ರತಿ ವಾರ 70 ವಾರ್ಡ್‌ಗಳಲ್ಲಿ ವ್ಯಾಕ್ಸಿನೇಷನ್ ನಡೆಯಲಿದೆ.

ಮುಂದೆ ಓದಿ ...
  • Share this:

ನವ ದೆಹಲಿ (ಜೂನ್ 07); ಭಾರತದಲ್ಲೇ ಅತಿಹೆಚ್ಚು ಕೊರೋನಾ ಸೋಂಕು ಹರಡುತ್ತಿರುವ ರಾಜ್ಯಗಳ ಪೈಕಿ ವಾಣಿಜ್ಯ ರಾಜಧಾನಿ ಮುಂಬೈ ಹಾಗೂ ದೆಹಲಿ ಅಗ್ರಸ್ಥಾನದಲ್ಲಿವೆ. ಈ ರಾಜ್ಯಗಳಲ್ಲಿ ಸೋಂಕನ್ನು ಸೋಲಿಸಲು ಇರುವ ಏಕೈಕ ಮಾರ್ಗ ಎಲ್ಲರಿಗೂ ಲಸಿಕೆ ನೀಡುವುದು. ಇದೇ ಕಾರಣಕ್ಕೆ ಅರವಿಂದ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಎಲ್ಲರಿಗೂ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಿದೆ. ಆದರೆ, ಲಸಿಕಾ ಕೇಂದ್ರಗಳು ಹಲವು ಜನವಸತಿ ಕೇಂದ್ರಗಳಿಗಿಂತ ದೂರದಲ್ಲಿರುವ ಕಾರಣ ಜನ ಲಸಿಕೆ ಹಾಕಿಸಿಕೊಳ್ಳಲು ಮುಂದಾಗುತ್ತಿದೆ. ಹೀಗಾಗಿಲಸಿಕಾ ಕೇಂದ್ರಗಳಲ್ಲಿ ಲಸಿಕೆ ಪಡೆಯುವವರ ಸಂಖ್ಯೆ ಕುಸಿತವಾಗಿರುವ ಹಿನ್ನೆಲೆ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ತಮ್ಮ ಮತದಾನ ಕೇಂದ್ರಗಳಲ್ಲಿಯೇ ಲಸಿಕೆ ಹಾಕಲು ಮನೆ-ಮನೆಗೆ ಸಮೀಕ್ಷೆ ನಡೆಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮುಂದಾಗಿದ್ದಾರೆ.


’ಜಹಾ ವೋಟ್, ವಹಾ ವ್ಯಾಕ್ಸಿನೇಷನ್’ ಎಂಬ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪ್ರಕಟಿಸಿರುವ ಕೇಜ್ರಿವಾಲ್, "ದೆಹಲಿಯಲ್ಲಿ ಕೊರೋನಾ ಲಸಿಕೆಗಳ ಕೊರತೆಯಿಲ್ಲ, 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ನಾಲ್ಕು ವಾರಗಳಲ್ಲಿ ಲಸಿಕೆ ನೀಡಲಾಗುವುದು. ದೆಹಲಿಯಲ್ಲಿ 45 ವರ್ಷಕ್ಕಿಂತ ಮೇಲ್ಪಟ್ಟ 57 ಲಕ್ಷ ಜನರಿದ್ದು, 27 ಲಕ್ಷ ಜನರು ತಮ್ಮ ಮೊದಲ ಲಸಿಕೆ ಪಡೆದಿದ್ದಾರೆ. ಉಳಿದವರಿಗೆ ಅವರ ಮನೆಗೆ ಹತ್ತಿರವಾದ ಮತಗಟ್ಟೆಯಲ್ಲೇ ಲಸಿಕೆ ನೀಡಲು ಯೋಜನೆ ಸಿದ್ದಪಡಿಸಲಾಗಿದೆ" ಎಂದು ತಿಳಿಸಿದ್ದಾರೆ.


"ಬೂತ್ ಮಟ್ಟದ ಅಧಿಕಾರಿಗಳು ತಮ್ಮ ವಾರ್ಡ್‌ಗಳಲ್ಲಿ ಪ್ರತಿ ಮನೆಗೆ ಹೋಗಿ ಸಮೀಕ್ಷೆ ನಡೆಸಿ, 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ತೆಗೆದುಕೊಳ್ಳಲು ದಿನಾಂಕ ಮತ್ತು ಸಮಯ ನೀಡಲಿದೆ. ದೆಹಲಿಯಲ್ಲಿ ಸುಮಾರು 280 ವಾರ್ಡ್‌ಗಳಿವೆ. ಪ್ರತಿ ವಾರ 70 ವಾರ್ಡ್‌ಗಳಲ್ಲಿ ವ್ಯಾಕ್ಸಿನೇಷನ್ ನಡೆಯಲಿದೆ. 70 ವಾರ್ಡ್‌ಗಳಲ್ಲಿ ಮಂಗಳವಾರದಿಂದ ಈ ಯೋಜನೆ ಜಾರಿಗೆ ಬರಲಿದೆ" ಎಂದು ಅರವಿಂದ್ ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ.


"45 ವರ್ಷ ಮೇಲ್ಪಟ್ಟ ವಯಸ್ಸಿನವರು ಲಸಿಕೆ ಕೇಂದ್ರಗಳಲ್ಲಿ ಕೆಲವೇ ಜನರು ಹಾಜರಾಗುತ್ತಿದ್ದಾರೆ. ಆದ್ದರಿಂದ ಕೇಂದ್ರಗಳಲ್ಲಿ ಜನರಿಗಾಗಿ ಕಾಯುವ ಬದಲು ನಾವೇ ಅಲ್ಲಿಗೆ ಹೋಗಲು ನಿರ್ಧರಿಸಿದ್ದೇವೆ. ಮತದಾನ ಕೇಂದ್ರಗಳು ಎಲ್ಲಿವೆ ಎಂಬುದು ಎಲ್ಲರಿಗೂ ತಿಳಿದಿದೆ. ತಮ್ಮ ಮನೆಗಳಿಂದ ಹತ್ತಿರದಲ್ಲೇ ಇರುವುದರಿಂದ ಜನರು ಸುಲಭವಾಗಿ ಲಸಿಕೆ ಪಡೆಯಬಹುದು. ಜನರನ್ನು ತಮ್ಮ ಮನೆಗಳಿಂದ ಮತದಾನ ಕೇಂದ್ರಕ್ಕೆ ಕರೆದೊಯ್ಯಲು ಇ-ರಿಕ್ಷಾಗಳನ್ನು ಸಹ ಒದಗಿಸಲಾಗುವುದು ಎಂದು ಅರವಿಂದ ಕೇಜ್ರಿವಾಲ್ ದೆಹಲಿ ಜನರಿಗೆ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಉತ್ತರಪ್ರದೇಶ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯ ಸೂಚನೆ ನೀಡಿದ ಹೈಕಮಾಂಡ್; ಯೋಗಿ ಆದಿತ್ಯನಾಥ್​ ತಲೆದಂಡ?


ಯಾರಾದರೂ ಲಸಿಕೆ ತೆಗೆದುಕೊಳ್ಳಲು ನಿರಾಕರಿಸಿದರೆ, ಬೂತ್ ಮಟ್ಟದ ಅಧಿಕಾರಿಗಳು ಮತ್ತು ನಾಗರಿಕ ಸ್ವಯಂಸೇವಕರು ಲಸಿಕೆ ತೆಗೆದುಕೊಳ್ಳಲು ಮನವೊಲಿಸಲು ಪ್ರಯತ್ನಿಸುತ್ತಾರೆ. ಈ ಬಗ್ಗೆ ಅಧಿಕಾರಿಗಳಿಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಅಗತ್ಯ ಪ್ರಮಾಣದಲ್ಲಿ ಲಸಿಕೆಗಳು ಲಭ್ಯವಾದಾಗ 18 ರಿಂದ 44 ವರ್ಷ ವಯೋಮಾನದವರಿಗೂ ಕೂಡ ಲಸಿಕೆ ನೀಡಲು ಇದೇ ಯೋಜನೆಯನ್ನು ಅನುಸರಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.


ಇದನ್ನೂ ಓದಿ: ಕುಮಾರಸ್ವಾಮಿನ ಕಿತ್ತಾಕಿ BSYನ ತಂದಿದ್ದೇವೆ, ಅವರೇ ಸಿಎಂ ಆಗಿ ಮುಂದುವರಿಯಲಿ: ಯೋಗೇಶ್ವರ್ ಯೂಟರ್ನ್?


ಪ್ರಸ್ತುತ ದೆಹಲಿಯಲ್ಲಿ ಕೊರೋನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾ ಗುತ್ತಿದ್ದು, ಲಾಕ್​ಡೌನ್​ ಅನ್ನು ಸಡಿಲಿಸುವ ಕುರಿತ ಮಾತುಗಳು ಕೇಳಿಬರುತ್ತಿವೆ. ಭಾಗಶಃ ಮುಂದಿನ ವಾರದಿಂದ ದೆಹಲಿ ಮತ್ತು ಮುಂಬೈನಲ್ಲಿ ಹಂತ ಹಂತವಾಗಿ ಅನ್​ಲಾಕ್ ಮಾಡುವ ಸಾಧ್ಯತೆ ಇದೆ. ಹೀಗಾಗಿ ಶೀಘ್ರದಲ್ಲೇ ರಾಷ್ಟ್ರ ರಾಜ್ಯಧಾನಿಯಲ್ಲಿ ಜನರ ಬದುಕು ಸಹಜ ಸ್ಥಿತಿಗೆ ಮರಳಲಿದೆ ಎನ್ನಲಾಗುತ್ತಿದೆ.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.

top videos
    First published: