ದೆಹಲಿ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರಿಗೆ ಕೊರೋನಾ ಪತ್ತೆ; ಮೌಲಾನಾ ವಿರುದ್ಧ ಕೇಸ್ ದಾಖಲು

ಈ ಸಭೆಯಲ್ಲಿ ಭಾಗವಹಿಸಿದ್ದ ತೆಲಂಗಾಣದ 6 ಜನರು ಸೇರಿದಂತೆ ಒಟ್ಟು 10 ಸಾವನ್ನಪ್ಪಿದ್ದಾರೆ. 300ಕ್ಕೂ ಅಧಿಕ ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಮಾರು 2,000ಕ್ಕೂ ಅಧಿಕ ಜನರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ನಿಜಾಮುದ್ದೀನ್​ನಲ್ಲಿ ಪರಿಶೀಲನೆ ನಡೆಸುತ್ತಿರುವ ಸಿಬ್ಬಂದಿ

ನಿಜಾಮುದ್ದೀನ್​ನಲ್ಲಿ ಪರಿಶೀಲನೆ ನಡೆಸುತ್ತಿರುವ ಸಿಬ್ಬಂದಿ

  • Share this:
    ನವದೆಹಲಿ (ಮಾ. 31): ದಕ್ಷಿಣ ದೆಹಲಿಯ ನಿಜಾಮುದ್ದೀನ್​ ಪ್ರದೇಶದಲ್ಲಿ ಮಾ. 13ರಿಂದ 15ರವರೆಗೆ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ತೆಲಂಗಾಣದ 6 ಮಂದಿ ಸೇರಿದಂತೆ ಒಟ್ಟು 10 ಜನ ಈಗಾಗಲೇ ಸಾವನ್ನಪ್ಪುವ ಮೂಲಕ ದೇಶದಲ್ಲಿ ಕೊರೋನಾ ಭೀತಿ ಇನ್ನಷ್ಟು ಹೆಚ್ಚಾಗಿದೆ. ಸಭೆಯಲ್ಲಿ ಪಾಲ್ಗೊಂಡಿದ್ದ ನೂರಾರು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಧಾರ್ಮಿಕ ಸಭೆಯನ್ನು ಆಯೋಜಿಸಿದ್ದ ಮೌಲಾನಾ ವಿರುದ್ಧ ದೆಹಲಿ ಸರ್ಕಾರ ಎಫ್​ಐಆರ್​ ದಾಖಲಿಸಲು ನಿರ್ಧರಿಸಿದೆ.

    15 ದಿನಗಳ ಹಿಂದೆ ದೆಹಲಿಯ ನಿಜಾಮುದ್ದೀನ್​ನ ಮಸೀದಿಯಲ್ಲಿ ನಡೆದ ಈ ಸಭೆಯಲ್ಲಿ ಇಂಡೋನೇಷ್ಯಾ, ಮಲೇಷ್ಯಾ ಸೇರಿದಂತೆ ಅನೇಕ ದೇಶಗಳ ವಿದೇಶೀಯರು ಕೂಡ ಭಾಗವಹಿಸಿದ್ದರು. ಈ ಸಭೆಯಲ್ಲಿ ಭಾಗವಹಿಸಿದ್ದ ತೆಲಂಗಾಣದ 6 ಜನರು ಸೇರಿದಂತೆ ಒಟ್ಟು 10 ಸಾವನ್ನಪ್ಪಿದ್ದಾರೆ. 300ಕ್ಕೂ ಅಧಿಕ ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಮಾರು 2,000ಕ್ಕೂ ಅಧಿಕ ಜನರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

    ಇದನ್ನೂ ಓದಿ: ಸಾವಿನ ಭೀತಿ ಹೆಚ್ಚಿಸಿದ ದೆಹಲಿ ಧಾರ್ಮಿಕ ಸಭೆ; ಕಾರ್ಯಕ್ರಮದಲ್ಲಿದ್ದ 10 ಜನ ಕೊರೋನಾಗೆ ಬಲಿ, 300ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

    ಮಾ. 13ರಿಂದ 15ರವರೆಗೆ 5ರಿಂದ 6 ಫ್ಲೋರ್ ಬಿಲ್ಡಿಂಗ್ ನಲ್ಲಿ ನಡೆದಿದ್ದ ಸಭೆ ಇದಾಗಿತ್ತು. ಸಭೆಯಲ್ಲಿ ಪಾಲ್ಗೊಂಡಿದ್ದವರಲ್ಲಿ ಕೆಲವರನ್ನು ಈಗಾಗಲೇ ಹೋಂ ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ. ಭಾನುವಾರದಿಂದ 800ಕ್ಕೂ ಹೆಚ್ಚು ಜನರ ತಪಾಸಣೆ ಮಾಡಲಾಗಿದೆ. ಸಭೆ ವೇಳೆ ಇದ್ದವರು, ಅವರ ಸಂಪರ್ಕದಲ್ಲಿದ್ದವರ ತಪಾಸಣೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಮೌಲಾನಾ ವಿರುದ್ಧ ಕೇಸ್ ದಾಖಲಿಸುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶ ನೀಡಿದ್ದಾರೆ.

    ಇದನ್ನೂ ಓದಿ: ಕೇರಳದಲ್ಲಿ ಕೊರೋನಾಗೆ ಎರಡನೇ ಬಲಿ; ದೇಶದಲ್ಲಿ 33ಕ್ಕೇರಿದ ಸಾವಿನ ಸಂಖ್ಯೆ

    ಈ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡಿದ್ದವರಲ್ಲಿ 6 ಮಂದಿ ತೆಲಂಗಾಣದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲರೂ ಆರೋಗ್ಯಾಧಿಕಾರಿಗಳನ್ನು ಕೂಡಲೇ ಸಂಪರ್ಕಿಸಬೇಕೆಂದು ತೆಲಂಗಾಣ ಸರ್ಕಾರ ಮನವಿ ಮಾಡಿದೆ. ಸಭೆಯಲ್ಲಿ ಭಾಗವಹಿಸಿದ್ದವರಿಗೆ ಸರ್ಕಾರ ಉಚಿತವಾಗಿ ಚಿಕಿತ್ಸೆ ನೀಡಲಿದೆ. ದಯವಿಟ್ಟು ಈ ಸೋಂಕು ಬೇರೆಯವರಿಗೆ ಹರಡದಂತೆ ಎಚ್ಚರ ವಹಿಸಿ, ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸರ್ಕಾರ ಮನವಿ ಮಾಡಿದೆ.
    First published: