ಸರ್ಕಾರದ ವಿರುದ್ಧ ಸಿಡಿದೆದ್ದ ಆಶಾ ಕಾರ್ಯಕರ್ತೆಯರು; ಇಂದಿನಿಂದ ಕೆಲಸ ಬಹಿಷ್ಕರಿಸಿ ರಾಜ್ಯಾದ್ಯಂತ ಹೋರಾಟ

ಹೋರಾಟದ ಮುಂದಿನ ಹಂತವಾಗಿ ಇಂದಿನಿಂದ ಇಡೀ ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರು ಕೆಲಸ ಬಹಿಷ್ಕರಿಸಲಿದ್ದಾರೆ. ಇಂದು ಕೆಲಸ ಬಹಿಷ್ಕರಿಸಿ ರಾಜ್ಯಾದ್ಯಂತ ಎಲ್ಲಾ ಡಿಸಿ ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ. ರಾಜ್ಯ ಆಶಾ ಕಾರ್ಯಕರ್ತೆ ಸಂಘದ ಕಾರ್ಯದರ್ಶಿ ನಾಗಲಕ್ಷ್ಮೀ ನೇತೃತ್ವದಲ್ಲಿ ಹೋರಾಟ ನಡೆಯಲಿದೆ.

ಈ ಮೊದಲು ಬೆಂಗಳೂರಿನಲ್ಲಿ ಭಾರೀ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಿದ್ದ ಆಶಾ ಕಾರ್ಯಕರ್ತೆಯರು

ಈ ಮೊದಲು ಬೆಂಗಳೂರಿನಲ್ಲಿ ಭಾರೀ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಿದ್ದ ಆಶಾ ಕಾರ್ಯಕರ್ತೆಯರು

 • Share this:
  ಬೆಂಗಳೂರು; ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಸಮಾಧಾನಗೊಂಡಿರುವ ಆಶಾ ಕಾರ್ಯಕರ್ತೆಯರು ಇದೀಗ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು, ಇಂದಿನಿಂದ ಕೆಲಸ ಬಹಿಷ್ಕರಿಸಿ ಹೋರಾಟ ಆರಂಭಿಸಲಿದ್ದಾರೆ.

  ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12000 ಗೌರವ ಧನ ಕೊಡಬೇಕು ಹಾಗೂ ಕೊರೋನಾದಂತಹ ಸಂಕಷ್ಟದ ಸಮಯದಲ್ಲಿ ಜೀವವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಅಗತ್ಯ ಪ್ರಮಾಣದ ಸುರಕ್ಷತಾ ಕಿಟ್ ಕೊಡಬೇಕು ಎಂಬುದು ಆಶಾ ಕಾರ್ಯಕರ್ತೆಯರ ಬೇಡಿಕೆಯಾಗಿದೆ.

  ಈ ಬೇಡಿಕೆಗಳನ್ನು ಈಡೇರಿಸುವಂತೆ ಒಂದು ವಾರದಿಂದ ಸರ್ಕಾರಕ್ಕೆ ಮನವಿ ಪತ್ರ ಕೊಡುತ್ತಾ ಬಂದಿದ್ದಾರೆ. ಆಯಾ ಜಿಲ್ಲಾಧಿಕಾರಿಗಳು ಮತ್ತು ತಹಸೀಲ್ದಾರರಿಗೆ ಹಾಗೂ ಸಚಿವರು ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ. ಆದರೆ, ಸರ್ಕಾರದಿಂದ ಸೂಕ್ತ ಸ್ಪಂದನೆ ಸಿಕ್ಕಿಲ್ಲ. ಅಲ್ಲದೇ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಚರ್ಚಿಸಲು ಸಭೆಯನ್ನು ಕರೆಯುವ ಪ್ರಸ್ತಾಪವನ್ನೂ ಸರ್ಕಾರ ಮುಂದಿಟ್ಟಿಲ್ಲ. ಈ ಹಿನ್ನೆಲೆ‌ಯಲ್ಲಿ ಆಶಾ ಕಾರ್ಯಕರ್ತೆಯರು ಇದೀಗ ಹೋರಾಟಕ್ಕೆ ಇಳಿದಿದ್ದಾರೆ.

  ಇದನ್ನು ಓದಿ: ರಾಜ್ಯದಲ್ಲಿ ಮುಂದುವರೆದ ಕೊರೋನಾ ಆರ್ಭಟ : ಒಂದೇ ದಿನ 17 ಸಾವು, 2,228 ಜನರಿಗೆ ಸೋಂಕು ದೃಢ

  ಹೋರಾಟದ ಮುಂದಿನ ಹಂತವಾಗಿ ಇಂದಿನಿಂದ ಇಡೀ ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರು ಕೆಲಸ ಬಹಿಷ್ಕರಿಸಲಿದ್ದಾರೆ. ಇಂದು ಕೆಲಸ ಬಹಿಷ್ಕರಿಸಿ ರಾಜ್ಯಾದ್ಯಂತ ಎಲ್ಲಾ ಡಿಸಿ ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ. ರಾಜ್ಯ ಆಶಾ ಕಾರ್ಯಕರ್ತೆ ಸಂಘದ ಕಾರ್ಯದರ್ಶಿ ನಾಗಲಕ್ಷ್ಮೀ ನೇತೃತ್ವದಲ್ಲಿ ಹೋರಾಟ ನಡೆಯಲಿದೆ.
  Published by:HR Ramesh
  First published: