CoronaVirus Update: ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಅವರಿಗೂ ಕೊರೋನಾ ಸೋಂಕು ದೃಢ

ಈ ಹಿಂದೆ ದೇಶದ ಗೃಹ ಸಚಿವ ಅಮಿತ್‌ ಶಾ ಅವರಿಗೂ ಸಹ ಕೊರೋನಾ ಸೋಂಕು ತಗುಲಿತ್ತು. ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹ್ಹಾನ್ ಮತ್ತು ಕರ್ನಾಟಕದ ಸಿಎಂ ಯಡಿಯೂರಪ್ಪ ಅವರಿಗೆ ಸೋಂಕು ತಗುಲಿತ್ತು. ಅಲ್ಲದೆ, ಛತ್ತೀಸ್‌ ಗಢದ ಮಾಜಿ ಸಿಎಂ ರಮಣ್‌ ಸಿಂಗ್ ಸಹ ಇಂದು ಸೋಂಕಿಗೆ ತುತ್ತಾಗಿರುವುದು ಪತ್ತೆಯಾಗಿದೆ.

MAshok Kumar | news18-kannada
Updated:August 12, 2020, 8:46 PM IST
CoronaVirus Update: ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಅವರಿಗೂ ಕೊರೋನಾ ಸೋಂಕು ದೃಢ
ಸಚಿವ ಶ್ರೀಪಾದ್ ನಾಯಕ್.
  • Share this:
ನವ ದೆಹಲಿ (ಆಗಸ್ಟ್‌ 12); ಕೇಂದ್ರದ ರಾಜ್ಯ ಖಾತೆ ಆಯುಷ್‌ ಸಚಿವ ಶ್ರೀಪಾದ್‌ ನಾಯಕ್‌ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಇಂದು ದೃಢಪಟ್ಟಿದ್ದು, ಸಚಿವರನ್ನು ಕ್ವಾರಂಟೈನ್‌ ಮಾಡಲಾಗಿದೆ ಎಂದು ವರದಿಯಾಗಿದೆ.

ಈ ಕುರಿತು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿರುವ ಸಚಿವ ಶ್ರೀಪಾದ್‌ ನಾಯಕ್‌, "ನನಗೆ ಕೊರೋನಾ ಪರೀಕ್ಷೆಗೆ ಒಳಗಾಗಿದ್ದೇನೆ. ಈ ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಆದರೆ, ರೋಗ ಲಕ್ಷಣಗಳು ಕಾಣಿಸಿಕೊಳ್ಳದ ಕಾರಣ ನನ್ನನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನನ್ನ ಜೀವಕೋಶಗಳು ಸಾಮಾನ್ಯ ಮಿತಿಯಲ್ಲಿವೆ. ಹೀಗಾಗಿ ಚಿಂತಿಸುವ ಅಗತ್ಯ ಇಲ್ಲ.

ಆದರೂ, ನನಗೆ ಕೊರೋನಾ ದೃಢಪಟ್ಟಿರುವ ಕಾರಣ ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಮೊದಲು ಕೊರೋನಾ ಪರೀಕ್ಷೆಗೆ ಒಳಗಾಗಿ. ನಿಮ್ಮನ್ನು ನೀವು ಪ್ರತ್ಯೇಕಿಸಿಕೊಳ್ಳಿ. ಅಲ್ಲದೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಿ" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : CoronaVirus Update: ಛತ್ತೀಸ್ ಗಢ ಮಾಜಿ ಸಿಎಂ ರಮಣ್‌ ಸಿಂಗ್ ಪತ್ನಿಗೆ ಕೊರೋನಾ ಪಾಸಿಟಿವ್; ಬಿಜೆಪಿ ನಾಯಕ ಕ್ವಾರಂಟೈನ್‌

ಈ ಹಿಂದೆ ದೇಶದ ಗೃಹ ಸಚಿವ ಅಮಿತ್‌ ಶಾ ಅವರಿಗೂ ಸಹ ಕೊರೋನಾ ಸೋಂಕು ತಗುಲಿತ್ತು. ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹ್ಹಾನ್ ಮತ್ತು ಕರ್ನಾಟಕದ ಸಿಎಂ ಯಡಿಯೂರಪ್ಪ ಅವರಿಗೆ ಸೋಂಕು ತಗುಲಿತ್ತು. ಅಲ್ಲದೆ, ಛತ್ತೀಸ್‌ ಗಢದ ಮಾಜಿ ಸಿಎಂ ರಮಣ್‌ ಸಿಂಗ್ ಸಹ ಇಂದು ಸೋಂಕಿಗೆ ತುತ್ತಾಗಿರುವುದು ಪತ್ತೆಯಾಗಿದೆ.

ಈ ನಡುವೆ ಭಾರತದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 23 ಲಕ್ಷ ಗಡಿ ದಾಟಿದ್ದು ವಿಶ್ವದಲ್ಲೇ ಅತಿಹೆಚ್ಚು ಸೋಂಕು ಪೀಡಿತರನ್ನು ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭಾರತದ ಅಗ್ರ ಮೂರನೇ ಸ್ಥಾನದಲ್ಲಿದೆ. ಅಲ್ಲದೆ, ಕೊರೋನಾದಿಂದಾಗಿ ಮೃತಪಟ್ಟವರ ಸಂಖ್ಯೆಯೂ 46 ಸಾವಿರದ ಗಡಿ‌ ದಾಟಿದ್ದು 46,091ಕ್ಕೆ ಏರಿಕೆಯಾಗಿದೆ. ಮಂಗಳವಾರ ದೇಶದಲ್ಲಿ 834 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ
Published by: MAshok Kumar
First published: August 12, 2020, 8:46 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading