Karnataka Coronavirus: ಕರ್ನಾಟಕದಲ್ಲಿ ಇಂದು 3,693 ಕೊರೋನಾ ಸೋಂಕು ಪತ್ತೆ, 115 ಸಾವು; ಬೆಂಗಳೂರಿನಲ್ಲಿ 2,208 ಕೇಸ್

Karnataka Coronavirus Updates: ಇಂದು ಬೆಂಗಳೂರೊಂದರಲ್ಲೇ 2,208 ಕೊರೋನಾ ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ. ಇಂದು 3,693 ಕೊರೋನಾ ಕೇಸ್​ಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದ ಸೋಂಕಿತರ ಸಂಖ್ಯೆ 55,115ಕ್ಕೆ ಏರಿಕೆಯಾಗಿದೆ.

news18-kannada
Updated:July 17, 2020, 8:21 PM IST
Karnataka Coronavirus: ಕರ್ನಾಟಕದಲ್ಲಿ ಇಂದು 3,693 ಕೊರೋನಾ ಸೋಂಕು ಪತ್ತೆ, 115 ಸಾವು; ಬೆಂಗಳೂರಿನಲ್ಲಿ 2,208 ಕೇಸ್
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಜು. 17): ಕರ್ನಾಟಕದಲ್ಲಿ ಕೊರೋನಾ ಕೇಸ್​ಗಳು ಹೆಚ್ಚಾಗಿರುವುದರಿಂದ ಬೆಂಗಳೂರು, ದಕ್ಷಿಣ ಕನ್ನಡ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಲಾಕ್​ಡೌನ್ ಘೋಷಿಸಲಾಗಿದೆ. ಇಷ್ಟಾದರೂ ಕೊರೋನಾ ಸೋಂಕಿತರ ಸಂಖ್ಯೆ ಮಾತ್ರ ಏರಿಕೆಯಾಗುತ್ತಲೇ ಇದೆ. ಕರ್ನಾಟಕದಲ್ಲಿ ಇಂದು 3,693 ಕೊರೋನಾ ಸೋಂಕಿತರ ಪ್ರಕರಣಗಳು ದಾಖಲಾಗಿವೆ. ಬೆಂಗಳೂರೊಂದರಲ್ಲೇ 2,208 ಕೊರೋನಾ ಕೇಸ್​ಗಳು ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಲಾಕ್​ಡೌನ್ ಘೋಷಿಸಿದ ಬಳಿಕ ಸೋಂಕಿತರ ಸಂಖ್ಯೆಯಲ್ಲೂ ಹೆಚ್ಚಲವಾಗುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಕರ್ನಾಟಕದಲ್ಲಿ ಕಳೆದೊಂದು ವಾರದಿಂದ 2 ಸಾವಿರದ ಗಡಿಯಲ್ಲಿದ್ದ ಕೊರೋನಾ ಸೋಂಕಿತರ ಸಂಖ್ಯೆ ನಿನ್ನೆ 4 ಸಾವಿರದ ಗಡಿ ದಾಟಿತ್ತು. ಇಂದು 3,693 ಕೊರೋನಾ ಕೇಸ್​ಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದ ಸೋಂಕಿತರ ಸಂಖ್ಯೆ 55,115ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರೊಂದರಲ್ಲೇ 2,208 ಕೊರೋನಾ ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ. ಸದ್ಯಕ್ಕೆ ರಾಜ್ಯದಲ್ಲಿ 30,655 ಕೊರೋನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 1028 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಇದುವರೆಗೂ ಒಟ್ಟಾರೆ 20,757 ರೋಗಿಗಳು ಡಿಸ್ಚಾರ್ಜ್ ಆದಂತಾಗಿದೆ. ಇಂದು ಕೊರೋನಾದಿಂದಾಗಿ 115 ರೋಗಿಗಳು ಸಾವನ್ನಪ್ಪುವ ಮೂಲಕ ರಾಜ್ಯದಲ್ಲಿ 1147 ರೋಗಿಗಳು ಕೊರೋನಾಗೆ ಬಲಿಯಾಗಿದ್ದಾರೆ.

ಇದನ್ನೂ ಓದಿ:  ಕೊರೋನಾ ಚಿಕಿತ್ಸೆಗೆ ಬೆಡ್ ಮೀಸಲಿಡುವ ವಿಚಾರ; ನಾಳೆ ಖಾಸಗಿ ಆಸ್ಪತ್ರೆಗಳ ಜೊತೆ ಸಿಎಂ ಯಡಿಯೂರಪ್ಪ ಸಭೆ

ಇಂದು ಬೆಂಗಳೂರಿನಲ್ಲಿ 2,208 ಕೊರೋನಾ ಕೇಸ್​ಗಳು ಪತ್ತೆಯಾಗುವ ಮೂಲಕ ಮತ್ತೊಮ್ಮೆ ಸಿಲಿಕಾನ್​ ಸಿಟಿಗೆ ಕೊರೋನಾ ಆಘಾತ ನೀಡಿದೆ. ಮಂಗಳವಾರ ರಾತ್ರಿಯಿಂದ ಬೆಂಗಳೂರಿನಲ್ಲಿ ಲಾಕ್​ಡೌನ್ ಘೋಷಿಸಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ದಾಖಲೆಯ ಕೊರೋನಾ ಕೇಸುಗಳು ಪತ್ತೆಯಾಗುತ್ತಿರುವುದು ಇನ್ನಷ್ಟು ಆತಂಕ ಮೂಡಿಸಿದೆ.ಬೆಂಗಳೂರಿನಲ್ಲಿ 2,208, ಧಾರವಾಡದಲ್ಲಿ 157, ಬಳ್ಳಾರಿಯಲ್ಲಿ 133, ವಿಜಯಪುರದಲ್ಲಿ 118, ಬೆಳಗಾವಿಯಲ್ಲಿ 95, ಮೈಸೂರಿನಲ್ಲಿ 93 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ಎಲ್ಲ ಜಿಲ್ಲೆಗಳಲ್ಲಿ 80ಕ್ಕಿಂತ ಕಡಿಮೆ ಕೊರೋನಾ ಕೇಸುಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ ಇಂದು 75 ರೋಗಿಗಳು ಕೊರೋನಾದಿಂದ ಸಾವನ್ನಪ್ಪಿದ್ದಾರೆ.
Published by: Sushma Chakre
First published: July 17, 2020, 8:18 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading