ಕೆ.ಆರ್.ಮಾರುಕಟ್ಟೆಯ ಎಲ್ಲಾ ರಸ್ತೆಗಳು ಬಂದ್; ಹೆಚ್ಚುವರಿ ಪೊಲೀಸರ ನಿಯೋಜನೆ

ಮುನ್ನೆಚ್ಚರಿಕಾ ಕ್ರಮವಾಗಿ ಕೆ.ಆರ್. ಮಾರುಕಟ್ಟೆ ಬಳಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಪೊಲೀಸರು ಇಡೀ ಮಾರುಕಟ್ಟೆಯನ್ನು ಸಂಪೂರ್ಣ ಬಂದ್​ ಮಾಡಿಸಿದ್ದಾರೆ.

news18-kannada
Updated:March 30, 2020, 7:53 AM IST
ಕೆ.ಆರ್.ಮಾರುಕಟ್ಟೆಯ ಎಲ್ಲಾ ರಸ್ತೆಗಳು ಬಂದ್; ಹೆಚ್ಚುವರಿ ಪೊಲೀಸರ ನಿಯೋಜನೆ
ಕೆ. ಆರ್. ಮಾರುಕಟ್ಟೆ
  • Share this:
ಬೆಂಗಳೂರು(ಮಾ.30): ಕೊರೋನಾ ಭೀತಿ ಹೆಚ್ಚಾದ ಹಿನ್ನೆಲೆ ದೇಶವ್ಯಾಪಿ ಮೂರು ವಾರಗಳ ಕಾಲ ಲಾಕ್​ಡೌನ್​ ಘೋಷಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಸಹ ಅಗತ್ಯ ಮತ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೆಚ್ಚು ಜನ ಸೇರುವ  ನಗರದ ಕೆ.ಆರ್.ಮಾರುಕಟ್ಟೆಯನ್ನು ಆಯಾ ಏರಿಯಾಗೆ ವರ್ಗಾವಣೆ ಮಾಡಲಾಗಿದೆ. ಜೊತೆಗೆ ಮಾರುಕಟ್ಟೆಗೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಲಾಗಿದೆ.

ಇನ್ನು, ಮುನ್ನೆಚ್ಚರಿಕಾ ಕ್ರಮವಾಗಿ ಕೆ.ಆರ್. ಮಾರುಕಟ್ಟೆ ಬಳಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಪೊಲೀಸರು ಇಡೀ ಮಾರುಕಟ್ಟೆಯನ್ನು ಸಂಪೂರ್ಣ ಬಂದ್​ ಮಾಡಿಸಿದ್ದಾರೆ. ಆದರೂ ಸಹ ತರಕಾರಿ ವ್ಯಾಪಾರಿಗಳು ತಳ್ಳುವ ಗಾಡಿಯಲ್ಲಿ ಜೋರಾಗಿಯೇ ವ್ಯಾಪಾರ ನಡೆಸುತ್ತಿದ್ದಾರೆ.

ಭಾರತದಲ್ಲಿ 1 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ; 27 ಮಂದಿ ಸಾವು

ಇದುವರೆಗೂ ರಾಜ್ಯದಲ್ಲಿ 83 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ. ಬೆಂಗಳೂರಿನಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇಲ್ಲಿ 41 ಕೊರೋನಾ ಪಾಸಿಟಿವ್ ಕೇಸ್​ಗಳಿವೆ. ನಂತರದ ಸ್ಥಾನದಲ್ಲಿ ಚಿಕ್ಕಬಳ್ಳಾಪುರ ಮತ್ತು ಮೈಸೂರು ಇವೆ. ಇಲ್ಲಿ ತಲಾ ಎಂಟು ಪ್ರಕರಣಗಳಿವೆ.

ಇನ್ನು, ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಂದು ಸಾವಿರದ ಗಡಿ ದಾಟಿದೆ. ಈವರೆಗೆ ಒಟ್ಟು 27 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಬಳಿಕ ಎರಡನೇ ಸ್ಥಾನದಲ್ಲಿ ಕೇರಳ ಹಾಗೂ ಮೂರನೇ ಸ್ಥಾನದಲ್ಲಿ ಕರ್ನಾಟಕ ಇದೆ.
First published: March 30, 2020, 7:48 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading