Karnataka Coronavirus: ಕರ್ನಾಟಕದಲ್ಲಿ ಇಂದು 3 ಸಾವಿರದ ಗಡಿ ದಾಟಿದ ಕೊರೋನಾ ಕೇಸ್; ಬೆಂಗಳೂರೊಂದರಲ್ಲೇ 1,975 ಸೋಂಕಿತರು!

Bangalore Lockdown: ಇಂದು ಬೆಂಗಳೂರೊಂದರಲ್ಲೇ 1975 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಕರ್ನಾಟಕದಲ್ಲಿ ಇಂದು 3,176 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗುವ ಮೂಲಕ ರಾಜ್ಯದ ಸೋಂಕಿತರ ಸಂಖ್ಯೆ 47,253ಕ್ಕೆ ಏರಿಕೆಯಾಗಿವೆ.

Sushma Chakre | news18-kannada
Updated:July 15, 2020, 8:09 PM IST
Karnataka Coronavirus: ಕರ್ನಾಟಕದಲ್ಲಿ ಇಂದು 3 ಸಾವಿರದ ಗಡಿ ದಾಟಿದ ಕೊರೋನಾ ಕೇಸ್; ಬೆಂಗಳೂರೊಂದರಲ್ಲೇ 1,975 ಸೋಂಕಿತರು!
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಜು. 15): ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಮಿತಿಮೀರುತ್ತಲೇ ಇದೆ. ಬೆಂಗಳೂರು, ದಕ್ಷಿಣ ಕನ್ನಡ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ವಿಪರೀತವಾಗಿರುವುದರಿಂದ ಲಾಕ್​ಡೌನ್ ಘೋಷಿಸಲಾಗಿದೆ. ಕಳೆದೊಂದು ವಾರದಿಂದ 2 ಸಾವಿರದ ಗಡಿಯಲ್ಲಿದ್ದ ಕೊರೋನಾ ಸೋಂಕಿತರ ಸಂಖ್ಯೆ ಇದೇ ಮೊದಲ ಬಾರಿಗೆ 3 ಸಾವಿರದ ಗಡಿ ದಾಟಿದೆ. ನಿನ್ನೆ ರಾತ್ರಿಯಿಂದ ಇಂದು ಸಂಜೆಯವರೆಗೆ ಕರ್ನಾಟಕದಲ್ಲಿ ದಾಖಲೆಯ 3,176 ಕೊರೋನಾ ಕೇಸ್​ಗಳು ಪತ್ತೆಯಾಗಿವೆ.

ಇಂದು ಬೆಂಗಳೂರೊಂದರಲ್ಲೇ 1975 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಕರ್ನಾಟಕದಲ್ಲಿ ಇಂದು 3,176 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗುವ ಮೂಲಕ ರಾಜ್ಯದ ಸೋಂಕಿತರ ಸಂಖ್ಯೆ 47,253ಕ್ಕೆ ಏರಿಕೆಯಾಗಿವೆ. ಸದ್ಯಕ್ಕೆ 27,853 ಕೊರೋನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 1076 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಇದುವರೆಗೂ ಒಟ್ಟಾರೆ 18,466 ರೋಗಿಗಳು ಡಿಸ್ಚಾರ್ಜ್ ಆದಂತಾಗಿದೆ. ಇಂದು ಕೊರೋನಾದಿಂದಾಗಿ 87 ರೋಗಿಗಳು ಸಾವನ್ನಪ್ಪುವ ಮೂಲಕ ರಾಜ್ಯದಲ್ಲಿ 928 ರೋಗಿಗಳು ಕೊರೋನಾಗೆ ಬಲಿಯಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ 60 ರೋಗಿಗಳು ಸಾವನ್ನಪ್ಪಿದ್ದಾರೆ.


ಇದನ್ನೂ ಓದಿ: ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಟ್ವಿಟ್ಟರ್ ಖಾತೆ; ಪಿಯು ನಿರ್ದೇಶಕರಿಂದ ಸೈಬರ್ ಕ್ರೈಂಗೆ ದೂರು

ಇಂದು ಬೆಂಗಳೂರಿನಲ್ಲಿ 1975 ಕೊರೋನಾ ಕೇಸ್​ಗಳು ಪತ್ತೆಯಾಗುವ ಮೂಲಕ ಮತ್ತೊಮ್ಮೆ ಸಿಲಿಕಾನ್​ ಸಿಟಿಗೆ ಕೊರೋನಾ ಆಘಾತ ನೀಡಿದೆ. ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಇಷ್ಟು ಪ್ರಮಾಣದ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ನಿನ್ನೆ ರಾತ್ರಿಯಿಂದ ಬೆಂಗಳೂರಿನಲ್ಲಿ ಲಾಕ್​ಡೌನ್ ಘೋಷಿಸಿರುವ ಬೆನ್ನಲ್ಲೇ ಇಂದು ಬೆಂಗಳೂರಿನಲ್ಲಿ ದಾಖಲೆಯ ಕೊರೋನಾ ಕೇಸುಗಳು ಪತ್ತೆಯಾಗಿರುವುದು ಇನ್ನಷ್ಟು ಆತಂಕ ಮೂಡಿಸಿದೆ.

ಬೆಂಗಳೂರಿನಲ್ಲಿ 1975, ಧಾರವಾಡದಲ್ಲಿ 139, ಬಳ್ಳಾರಿಯಲ್ಲಿ 136, ಮೈಸೂರಿನಲ್ಲಿ 99, ವಿಜಯಪುರದಲ್ಲಿ 80, ದಕ್ಷಿಣ ಕನ್ನಡದಲ್ಲಿ 76 ಕೊರೋನಾ ಸೊಂಕಿತ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರೊಂದನ್ನು ಗಹೊರತುಪಡಿಸಿದರೆ ಉಳಿದ ಎಲ್ಲ ಜಿಲ್ಲೆಗಳಲ್ಲಿ 150ಕ್ಕೂ ಕಡಿಮೆ ಕೊರೋನಾ ಸೋಂಕಿತ ಪ್ರಕರಣಗಳು ದಾಖಲಾಗಿವೆ.
Published by: Sushma Chakre
First published: July 15, 2020, 8:05 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading