ಕೊರೋನಾ ವೈರಸ್​​ ಭೀತಿ: ‘ಜನ ಒಂದೆಡೆ ಗುಂಪು ಸೇರುವಂತಿಲ್ಲ‘ - ಬಿಬಿಎಂಪಿ ಆದೇಶ

ಹಲವರಲ್ಲಿ ಸೋಂಕಿರುವುದು ದೃಢಪಟ್ಟ ಹಿನ್ನೆಲೆ ಸಿಎಂ ಬಿಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಆರೋಗ್ಯ ಸಚಿವ ಬಿ ಶ್ರೀರಾಮುಲು, ಉನ್ನತ ಮಟ್ಟದ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ಇಲ್ಲಿ ಎಲ್ಲರಿಗೂ ಕೊರೋನಾ ವೈರಸ್​​​ ಹರಡದಂತೆ ಮುನ್ನೆಚ್ಚರಿಕಾ ಕ್ರಮವಹಿಸುವಂತೆ ಸಿಎಂ ಸೂಚಿಸಿದ್ದಾರೆ.

ಬಿಬಿಎಂಪಿ ಆಯುಕ್ತ ಅನಿಲ್​​ ಕುಮಾರ್

ಬಿಬಿಎಂಪಿ ಆಯುಕ್ತ ಅನಿಲ್​​ ಕುಮಾರ್

  • Share this:
    ಬೆಂಗಳೂರು(ಮಾ.03): ಕೊರೋನಾ ವೈರಸ್​​ ವ್ಯಾಪಕವಾಗಿ ಹರಡುತ್ತಿರುವ ಕಾರಣ ಯಾವುದೇ ಕಾರಣಕ್ಕೂ ಜನ ಒಂದೆಡೆ ಗುಂಪು ಸೇರುವಂತಿಲ್ಲ ಎಂದು ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ನಗರದ ಖಾಸಗಿ ಆಸ್ಪತ್ರೆಗಳು, ಬಾರ್‌ ಅಂಡ್‌ ರೆಸ್ಟೋರೆಂಟ್‌, ಹೋಟೆಲ್‌, ಕಲ್ಯಾಣ ಮಂಟಪ, ಚಿತ್ರಮಂದಿರ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನ ಒಟ್ಟಾಗಿ ಗುಂಪು ಸೇರಬಾರದು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದ್ದಾರೆ. ಹಾಗೆಯೇ ಪೊಲೀಸರ ಅನುಮತಿ ಇಲ್ಲದೆ, ಎನ್​​ಒಸಿ ಪ್ರತಿ ಪಡೆಯದೆ ಯಾವುದೇ ಸಾರ್ವಜನಿಕ ಸಭೆಯಗಳನ್ನು ಆಯೋಜಿಸುವಂತಿಲ್ಲ ಎಂದು ನಿಷೇಧ ಹೇರಲಾಗಿದೆ.

    ಜಗತ್ತಿನಾದ್ಯಂತ ತಲ್ಲಣ ಮೂಡಿಸುತ್ತಿರುವ ಕೊರೋನಾ ವೈರಸ್​ ಸೋಂಕು ರಾಜ್ಯದ ಐವರಲ್ಲಿ ಪತ್ತೆಯಾಗಿದೆ. ಸೋಂಕಿತರನ್ನು ಕುಟುಂಬ ಸದಸ್ಯರಿಂದ ಪ್ರತ್ಯೇಕವಾಗಿರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದ ಜನರು ಮುಂಜಾಗೃತ ಕ್ರಮವಾಗಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

    ಹಲವರಲ್ಲಿ ಸೋಂಕಿರುವುದು ದೃಢಪಟ್ಟ ಹಿನ್ನೆಲೆ ಸಿಎಂ ಬಿಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಆರೋಗ್ಯ ಸಚಿವ ಬಿ ಶ್ರೀರಾಮುಲು, ಉನ್ನತ ಮಟ್ಟದ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ಇಲ್ಲಿ ಎಲ್ಲರಿಗೂ ಕೊರೋನಾ ವೈರಸ್​​​ ಹರಡದಂತೆ ಮುನ್ನೆಚ್ಚರಿಕಾ ಕ್ರಮವಹಿಸುವಂತೆ ಸಿಎಂ ಸೂಚಿಸಿದ್ದಾರೆ.

    ಇದನ್ನೂ ಓದಿ: ರಾಜ್ಯದಲ್ಲಿ ಐದನೇ ಕೊರೋನಾ ಪಾಸಿಟಿವ್ ಪ್ರಕರಣ: 26 ವರ್ಷದ ಮತ್ತೋರ್ವ ವ್ಯಕ್ತಿಯಲ್ಲಿ ಸೋಂಕು ಪತ್ತೆ

    ಹಲವರಲ್ಲಿ ಸೋಂಕಿರುವುದು ದೃಢಪಟ್ಟ ಹಿನ್ನೆಲೆ ಸಿಎಂ ಬಿಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಆರೋಗ್ಯ ಸಚಿವ ಬಿ ಶ್ರೀರಾಮುಲು, ಉನ್ನತ ಮಟ್ಟದ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ಇಲ್ಲಿ ಎಲ್ಲರಿಗೂ ಕೊರೋನಾ ವೈರಸ್​​​ ಹರಡದಂತೆ ಮುನ್ನೆಚ್ಚರಿಕಾ ಕ್ರಮವಹಿಸುವಂತೆ ಸಿಎಂ ಸೂಚಿಸಿದ್ದಾರೆ. ಈ ಬೆನ್ನಲ್ಲೇ ಬಿಬಿಎಂಪಿ ಹೀಗೊಂದು ಆದೇಶ ಹೊರಡಿಸಿದೆ.
    First published: