ಬೆಂಗಳೂರು (ಜು.18): ಕೋವಿಡ್-19 ಪರಿಸ್ಥಿತಿ ನಿರ್ವಹಣೆಯಲ್ಲಿ ವೈಫಲ್ಯ ಆರೋಪದ ಹಿನ್ನೆಲೆಯಲ್ಲಿ ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್ ಅವರನ್ನು ಎತ್ತಂಗಡಿ ಮಾಡಲಾಗಿದೆ. ಎನ್. ಮಂಜುನಾಥ್ ಪ್ರಸಾದ್ ನೂತನ ಬಿಬಿಎಂಪಿ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ.
ಕೋವಿಡ್ ಪರಿಸ್ಥಿತಿ ನಿಯಂತ್ರಿಸುವಲ್ಲಿ ಅನಿಲ್ ಕುಮಾರ್ ಅವರು ವೈಫಲ್ಯರಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೇ ಹೈಕೋರ್ಟ್ನಿಂದಲೂ ಬಿಬಿಎಂಪಿ ಕಾರ್ಯ ವೈಖರಿಗೆ ಚಾಟಿ ಬೀಸಿತ್ತು. ಈ ಕಾರಣಕ್ಕೆ ಅನಿಲ್ ಕುಮಾರ್ ಅವರನ್ನು ಆ ಸ್ಥಾನದಿಂದ ಎತ್ತಂಗಡಿ ಮಾಡಬೇಕು ಎನ್ನುವ ಮಾತು ಕೇಳಿ ಬಂದಿತ್ತು. ಅಲ್ಲದೆ,ಈ ಹಿಂದೆ ಬಿಬಿಎಂಪಿ ಆಯುಕ್ತರಾಗಿ ಕೆಲಸ ಮಾಡಿದ್ದ ಕುಮಾರ ನಾಯಕ್ ಅವರನ್ನು ಬಿಬಿಎಂಪಿ ಆಯುಕ್ತರನ್ನಾಗಿ ನೇಮಿಸಲು ಚಿಂತನೆ ನಡೆದಿದೆ ಎನ್ನಲಾಗಿತ್ತು. ಆದರೆ, ಈ ಸ್ಥಾನಕ್ಕೆ ಈಗ ಎನ್. ಮಂಜುನಾಥ್ ಪ್ರಸಾದ್ ಅವರನ್ನು ನೂತನ ಕಮಿಷನರ್ ಆಗಿ ನೇಮಕ ಮಾಡಲಾಗಿದೆ. ಇನ್ನು, ಅನಿಲ್ ಕುಮಾರ್ ಸಾರ್ವಜನಿಕ ಉದ್ದಿಮೆ ಅಪರ ಮುಖ್ಯ ಕಾರ್ಯದರ್ಶಿ ಆಗಿ ವರ್ಗಾವಣೆ ಮಾಡಲಾಗಿದೆ.
ಇಂದು ಬೆಂಗಳೂರಿನಲ್ಲಿ 2,208 ಕೊರೋನಾ ಕೇಸ್ಗಳು ಪತ್ತೆಯಾಗುವ ಮೂಲಕ ಮತ್ತೊಮ್ಮೆ ಸಿಲಿಕಾನ್ ಸಿಟಿಗೆ ಕೊರೋನಾ ಆಘಾತ ನೀಡಿದೆ. ಮಂಗಳವಾರ ರಾತ್ರಿಯಿಂದ ಬೆಂಗಳೂರಿನಲ್ಲಿ ಲಾಕ್ಡೌನ್ ಘೋಷಿಸಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ದಾಖಲೆಯ ಕೊರೋನಾ ಕೇಸುಗಳು ಪತ್ತೆಯಾಗುತ್ತಿರುವುದು ಇನ್ನಷ್ಟು ಆತಂಕ ಮೂಡಿಸಿದೆ.
Published by:Rajesh Duggumane
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ