Bellary Coronavirus | ಬಳ್ಳಾರಿಯಲ್ಲಿ ಕೊರೋನಾ ಸೋಂಕಿತರನ್ನು ಪತ್ತೆ ಹಚ್ಚಲು ಮನೆ-ಮನೆ ಸಮೀಕ್ಷೆ

ಬಳ್ಳಾರಿ ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ತಂಡವನ್ನು ರಚನೆ ಮಾಡಿ ಮನೆಮನೆಗೆ ತಪಾಸಣೆ ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಬಳ್ಳಾರಿಯಲ್ಲಿ ಕೊರೋನಾ ಸೋಂಕಿತರನ್ನು ಪತ್ತೆ ಹಚ್ಚಲು ಮನೆ-ಮನೆ ಸಮೀಕ್ಷೆ

ಬಳ್ಳಾರಿಯಲ್ಲಿ ಕೊರೋನಾ ಸೋಂಕಿತರನ್ನು ಪತ್ತೆ ಹಚ್ಚಲು ಮನೆ-ಮನೆ ಸಮೀಕ್ಷೆ

  • Share this:
    ಬಳ್ಳಾರಿ (ಮೇ 6): ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇದಿನೆ ಹೆಚ್ಚಾಗುತ್ತಿದ್ದು, ತೀವ್ರ ಆತಂಕ ಮೂಡಿಸಿದೆ. ಜೊತೆಗೆ  ಸೋಂಕಿತರ ಸಾವಿನ ಸಂಖ್ಯೆಯು ಕೂಡ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದನ್ನ ತಡೆಗಟ್ಟಲು ಆರಂಭದಲ್ಲಿಯೇ ಸೋಂಕಿನ ಲಕ್ಷಣಗಳನ್ನು ಹೊಂದಿರುವವರನ್ನು ಪತ್ತೆಹಚ್ಚುವ, ಇಎಲ್‍ಐ ಮತ್ತು ತೀವ್ರ ಉಸಿರಾಟ ಹಾಗೂ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರನ್ನು ಪತ್ತೆಹಚ್ಚಿ ತಪಾಸಣೆ ನಡೆಸಿ ಚಿಕಿತ್ಸೆ ನೀಡುವ ಹಾಗೂ ಕೊರೊನಾ ಪ್ರಸರಣ ಸರಪಳಿ ತುಂಡರಿಸುವ ನಿಟ್ಟಿನಲ್ಲಿ ಮನೆ ಮನೆ ಸಮೀಕ್ಷೆ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ.

    ಬಳ್ಳಾರಿ ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ತಂಡವನ್ನು ರಚನೆ ಮಾಡಿ ಮನೆಮನೆಗೆ ತಪಾಸಣೆ ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಒಂದು ದಿನಕ್ಕೆ 20 ರಿಂದ 30 ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಇದರಿಂದ ಜನ ಕೂಡಾ ಆತಂಕ ಪಡುತ್ತಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ ಮತ್ತು ಸೋಂಕಿತರು ಸಂಖ್ಯೆ ಇಳಿಮುಖಗೊಳಿಸಲು ಜಿಲ್ಲಾಡಳಿತ ಈ ಯೋಜನೆ ರೂಪಿಸಿದೆ.

    Bellary Coronavirus | Bellary District Administration conducting Home to Home Survey to Identify Covid-19 Patients.

    ಇದಕ್ಕಾಗಿ ನಗರದ 39 ವಾರ್ಡ್‍ಗಳಿಗೆ ತಲಾ ಓರ್ವ ನೋಡಲ್ ಅಧಿಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚನೆ ಮಾಡಲಾಗಿದೆ. ಪ್ರತಿ ತಂಡದಲ್ಲಿ  ನೋಡಲ್ ಅಧಿಕಾರಿ, ವೈದ್ಯರು, ನರ್ಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಈ ತಂಡದಲ್ಲಿರಲಿದ್ದಾರೆ. ಇವರು 39 ವಾರ್ಡ್‍ಗಳಲ್ಲಿರುವ ಪ್ರತಿ ಮನೆ-ಮನೆಗೆ ತೆರಳಿ ಸಮೀಕ್ಷೆ ನಡೆಸಲಿದ್ದಾರೆ. ಈಗಾಗಲೇ ಈ ಕಾರ್ಯ ಎರಡು ದಿನಗಳಿಂದ ನಗರದಲ್ಲಿ ಆರಂಭಿಸಲಾಗಿದೆ.

    ಇದನ್ನೂ ಓದಿ: ಆ್ಯಂಬುಲೆನ್ಸ್ ಕಾದು ಕಾದು ರಸ್ತೆಯಲ್ಲೇ ಕುಸಿದು ಮೃತಪಟ್ಟ ಯುವಕ; ಕೊಡಗಿನ ಬಜೆಗುಂಡಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ

    ಕೊರೊನಾ ಸೋಂಕಿನ ಲಕ್ಷಣಗಳಿದ್ದರೂ ತಪಾಸಣೆ ಮಾಡಿಸದೇ ನಿರ್ಲಕ್ಷ್ಯ ತೋರುತ್ತಿರುವುದು ಮತ್ತು ಸೊಂಕು ತೀವ್ರತರದಲ್ಲಿ ಉಲ್ಭಣಿಸಿದಾಗ ಆಸ್ಪತ್ರೆಗೆ ಬರುತ್ತಿರುವುದರಿಂದ ಮರಣಗಳು ಸಂಭವಿಸುತ್ತಿರುವುದು ಸೇರಿದಂತೆ ವಿವಿಧ ಸಮಸ್ಯೆಗಳು ಉಂಟಾಗುತ್ತಿವೆ.

    ಈ ಹಿನ್ನೆಲೆಯಲ್ಲಿ ಇದಕ್ಕೆ ಕಡಿವಾಣ ಹಾಕುವುದಕ್ಕೆ ಮನೆ-ಮನೆ ಸಮೀಕ್ಷೆಯೇ ಮದ್ದು ಎಂದು ನಿರ್ಧರಿಸಿರುವ ಜಿಲ್ಲಾಡಳಿತ ಸಮೀಕ್ಷೆ ಆರಂಭಿಸಿದೆ. ಪ್ರತಿ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿರುವ ಈ ತಂಡಗಳು ಮನೆಯಲ್ಲಿರುವ ಪ್ರತಿಯೊಬ್ಬರನ್ನು ತಪಾಸಣೆ ಮಾಡಲಿವೆ. ಅವರಲ್ಲಿ ಯಾರಾದರೂ ಸೊಂಕಿತರೆಂದು ಕಂಡುಬಂದಲ್ಲಿ ಅವರ ರೋಗಲಕ್ಷಣಗಳ ಆಧಾರದ ಮೇರೆಗೆ ಹೋಂ ಐಸೋಲೇಶನ್ ಅಥವಾ ಆಸ್ಪತ್ರೆಗೆ ದಾಖಲಿಸಬೇಕೆ ಎಂಬುದನ್ನು ಶಿಫಾರಸ್ಸು ಮಾಡಲಿವೆ. ಹೋಂ ಐಸೋಲೇಶನ್ ಇದ್ದಲ್ಲಿ ಪ್ರತಿನಿತ್ಯ ನಿಗಾವಹಿಸಲು ತಂಡಗಳಿಗೆ ತಿಳಿಸುವುದರ ಜತೆಗೆ ಸೊಂಕಿತರಿಗೆ ಔಷಧಿ ಕಿಟ್‍ಗಳನ್ನು ವಿತರಿಸಲಾಗುತ್ತದೆ.

    ತಪಾಸಣೆ ನಡೆಸುವುದರ ಜೊತೆಗೆ ಆ ಮನೆಯಲ್ಲಿ ಈಗಾಗಲೇ ಕೋವಿಡ್ ಲಸಿಕೆ ಪಡೆದಿದ್ದರೇ ಅವರ ವಿವರವನ್ನು ಪಡೆದುಕೊಳ್ಳಲಿವೆ. ಎರಡು ಬಾರಿ ಲಸಿಕೆ ಪಡೆದಿದ್ದರೇ ಸಮಸ್ಯೆ ಇಲ್ಲ, ಒಂದು ಬಾರಿ ಲಸಿಕೆ ಪಡೆದು ಎರಡನೇ ಡೋಸ್‍ಗಾಗಿ ಕಾಯುತ್ತಿರುವವರನ್ನು ಆದ್ಯತೆ ಮೇರೆಗೆ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಿಸಲು ಕ್ರಮವಹಿಸಲಾಗುತ್ತದೆ.

    ಒಟ್ಟಾರೆಯಾಗಿ ಬಳ್ಳಾರಿ ಜಿಲ್ಲಾಡಳಿತ ಸಾವಿನ ಸಂಖ್ಯೆಯನ್ನು ಕಡಿಮೆಗೊಳಿಸಲು ಮತ್ತು ಸೋಂಕಿತರ ಸರಪಳಿಯನ್ನು ತುಂಡರಿಸಲು ಈ ರೀತಿಯಾಗಿ ಹೊಸ ಯೋಜನೆಯನ್ನು ರೂಪಿಸಿಕೊಂಡಿದೆ. ಇನ್ನಾದರು ಜನ ಎಚ್ಚೆತ್ತುಕೊಂಡು ಕಡ್ಡಾಯವಾಗಿ ಮಾಸ್ಕ, ಸಾಮಾಜಿಕ ಅಂತರ ಕಾಯ್ದುಕೊಳ್ಳ ಬೇಕಿದೆ.

    (ವರದಿ: ವಿನಾಯಕ ಬಡಿಗೇರ)
    Published by:Sushma Chakre
    First published: