ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪ ರಿಯಾಲಿಟಿ ಸಿಂಗಿಂಗ್ ಶೋ ಖ್ಯಾತಿಯ ಪೊಲೀಸ್ ಸಿಂಗರ್ ಸುಬ್ರಮಣಿ ಪತ್ನಿ ಕೋವಿಡ್ ಸೋಂಕಿಗೆ ತುತ್ತಾಗಿ, ತೀವ್ರ ಉಸಿರಾಟದ ಸಮಸ್ಯೆಯಿಂದ ನೆನ್ನೆ ಮೃತಪಟ್ಟಿದ್ದಾಗಿ ವರದಿಯಾಗಿತ್ತು. ಆದರೆ, ಇದೀಗ ಈ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಬೆಂಗಳೂರಿನ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಸುಬ್ರಮಣಿ ಅವರ ಪತ್ನಿ ಜ್ಯೋತಿ (33) ಮೇ 7 ರಂದು ಕೋಲಾರದ ಧರ್ಮರಾಯನಗರದ ನಿವಾಸದಲ್ಲಿ ಆತ್ಮಹತ್ಯೆ ಯತ್ನಿಸಿದ್ದರು ಎಂಬ ಮಾಹಿತಿ ಇದೀಗ ತಿಳಿದುಬಂದಿದೆ.
ಜ್ಯೋತಿ ಅವರು ಕೌಟುಂಬಿಕ ಕಲಹ ಹಾಗೂ ಖಿನ್ನತೆಯಿಂದಾಗಿ ಮೇ 7ರಂದು ಕೋಲಾರದ ಧರ್ಮರಾಯನಗರದ ನಿವಾಸದಲ್ಲಿ ಆತ್ಮಹತ್ಯೆ ಯತ್ನಿಸಿದ್ದರು. ಕೂಡಲೇ ಅವರನ್ನು ಕೋಲಾರದ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತಿದ್ದ ಸುಬ್ರಮಣಿ ಪತ್ನಿ ಜ್ಯೋತಿ ಅವರಿಗೆ ವೆಂಟಿಲೇಟರ್ ಬೆಡ್ ಸಿಗದೇ ಪರದಾಟ ನಡೆಸಿದ್ದರು. ಆ ಬಳಿಕ ಸಂಬಂಧಿಕರು ಬೆಂಗಳೂರು ಹೊರವಲಯದ ಹೊಸಕೋಟೆ ಖಾಸಗಿ ಆಸ್ಪತ್ರೆಗೆ ನಿನ್ನೆ ಸಂಜೆ ಕರೆದೊಯ್ದಿಯ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ ಹೊಸಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೌಟುಂಬಿಕ ಕಲಹ ಆರೋಪ ಹಾಗೂ ಖಿನ್ನತೆಗೊಳಗಾಗಿದ್ದರು ಎಂಬ ಶಂಕೆ ವ್ಯಕ್ತವಾಗಿದೆ.
ಇದನ್ನು ಓದಿ: ರಾಜ್ಯ, ದೇಶದಲ್ಲಿ ಕೊರೋನಾ ಇಷ್ಟು ದೊಡ್ಡದಾಗಿ ಬೆಳೆಯಲು ವಿರೋಧ ಪಕ್ಷದವರ ಅಪಪ್ರಚಾರವೇ ಕಾರಣ; ಸಚಿವ ಸಿ.ಪಿ. ಯೋಗೇಶ್ವರ್!
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ