Black Fungus: ಮಾರಕ ಬ್ಲಾಕ್ ಫಂಗಸ್​ ಸೋಂಕನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿದ ರಾಜಸ್ಥಾನ

ರಾಜಸ್ಥಾನ ಪ್ರಧಾನ ಆರೋಗ್ಯ ಕಾರ್ಯದರ್ಶಿ ಅಖಿಲ್ ಅರೋರಾ ಹೊರಡಿಸಿದ ಅಧಿಸೂಚನೆಯ ಪ್ರಕಾರ, ರಾಜಸ್ಥಾನ ಸಾಂಕ್ರಾಮಿಕ ಕಾಯ್ದೆ 2020 ರ ಅಡಿಯಲ್ಲಿ ಬ್ಲಾಕ್ ಫಂಗಸ್ ಸೋಂಕನ್ನು ಸಾಂಕ್ರಾಮಿಕ ರೋಗವೆಂದು ತಿಳಿಸಲಾಗಿದೆ.

ಬ್ಲಾಕ್​ ಫಂಗಸ್ ವೈರಸ್.

ಬ್ಲಾಕ್​ ಫಂಗಸ್ ವೈರಸ್.

  • Share this:
    ರಾಜಸ್ಥಾನ (ಮೇ 19); ಕೊರೋನಾ ಸೋಂಕಿನ ಮೊದಲ ಅಲೆಯಿಂದಲೇ ಭಾರತ ಇನ್ನೂ ಚೇತರಿಸಿಕೊಂಡಿಲ್ಲ. ಅಷ್ಟರಲ್ಲೇ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಇಷ್ಟು ದಿನ ನಗರ ಪ್ರದೇಶಗಳಿಗಷ್ಟೇ ಸೀಮಿತವಾಗಿದ್ದ ಕೊರೋನಾ ಸೋಂಕು ಇದೀಗ ಗ್ರಾಮೀಣ ಭಾಗಗಳಿಗೂ ಹರಡುತ್ತಿದೆ. ದಿನವೊಂದಕ್ಕೆ ಕನಿಷ್ಟ 4 ಲಕ್ಷಕ್ಕೂ ಅಧಿಕ ಜನ ಈ ಸೋಂಕಿಗೆ ಒಳಗಾಗುತ್ತಿದ್ದಾರೆ. ಅಲ್ಲದೆ, ಅಪಾರ ಜನ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಈ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವುದೇ ಕೇಂದ್ರ ಸರ್ಕಾರಕ್ಕೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಅಲ್ಲದೆ, ಎಲ್ಲರಿಗೂ ವ್ಯಾಕ್ಸಿನ್​ ನೀಡುವುದು ಸಹ ಇದೀಗ ದೊಡ್ಡ ಸಾಹಸದಂತೆ ಭಾಸವಾಗುತ್ತಿದೆ. ಈ ನಡುವೆ ದೇಶದಲ್ಲಿ ಕೊರೋನಾ ಸೋಂಕಿನ ಬೆನ್ನಿಗೆ ಬ್ಲಾಕ್ ಫಂಗಸ್​ ವೈರಸ್​  (ಕಪ್ಪು ಶಿಲೀಂಧ್ರ) ಸಹ ದಿನದಿಂದ ದಿನಕ್ಕೆ ಮಾರಕವಾಗಿ ಪರಿಣಮಿಸಿದ್ದು, ಮೊದಲ ಬಾರಿಗೆ ಇದೂ ಸಹ ಒಂದು ಸಾಂಕ್ರಾಮಿಕ ರೋಗ ಎಂದು ರಾಜಸ್ಥಾನ ಸರ್ಕಾರ ಇಂದು ಅಧಿಕೃತವಾಗಿ ಘೋಷಿಸಿದೆ.

    ಪ್ರಸ್ತುತ, ರಾಜಸ್ಥಾನದಲ್ಲಿ ಸುಮಾರು 100 ಮಂದಿ ಕಪ್ಪು ಶಿಲೀಂಧ್ರ ಸೋಂಕಿತ ರೋಗಿಗಳಿದ್ದು, ಅವರ ಚಿಕಿತ್ಸೆಗಾಗಿ ಜೈಪುರದ ಸವಾಯಿ ಮನ್ ಸಿಂಗ್ (ಎಸ್‌ಎಂಎಸ್) ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಮಾಡಲಾಗಿದೆ. "ಈ ಸೋಂಕು ಕೊರೋನಾಗಿಂತ ಪರಿಣಾಮಕಾರಿಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಜನರಿಗೆ ಹರಡುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಈ ಸೋಂಕನ್ನೂ ಸಹ ಸಾಂಕ್ರಾಮಿಕ ಖಾಯಿಲೆ ಎಂದು ಘೋಷಿಸಲಾಗಿದ್ದು, ಈಗಿನಿಂದಲೇ ಎಚ್ಚರದಿಂದ ಇರುವುದು ಒಳ್ಳೆಯದು" ಎಂದು ರಾಜಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ.

    ರಾಜ್ಯದ ಪ್ರಧಾನ ಆರೋಗ್ಯ ಕಾರ್ಯದರ್ಶಿ ಅಖಿಲ್ ಅರೋರಾ ಹೊರಡಿಸಿದ ಅಧಿಸೂಚನೆಯ ಪ್ರಕಾರ, ರಾಜಸ್ಥಾನ ಸಾಂಕ್ರಾಮಿಕ ಕಾಯ್ದೆ 2020 ರ ಅಡಿಯಲ್ಲಿ ಬ್ಲಾಕ್ ಫಂಗಸ್ ಸೋಂಕನ್ನು ಸಾಂಕ್ರಾಮಿಕ ರೋಗವೆಂದು ತಿಳಿಸಲಾಗಿದೆ.

    ಕಪ್ಪು ಶಿಲೀಂಧ್ರ ಮತ್ತು ಕೊರೊನಾ ವೈರಸ್‌ ಸೋಂಕು ಎರಡಕ್ಕೂ ಸಮಗ್ರ ಮತ್ತು ಸಂಘಟಿತ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಧಾನ ಆರೋಗ್ಯ ಕಾರ್ಯದರ್ಶಿ ಅಖಿಲ್ ಅರೋರಾ ಹೇಳಿದ್ದಾರೆ.

    ತಜ್ಞರ ಪ್ರಕಾರ, ಕೊರೊನಾ ಸೋಂಕಿಗೆ ಒಳಗಾಗಿ ಚೇತರಿಸಿಕೊಳ್ಳುವವರಲ್ಲಿ ಮತ್ತು ಮಧುಮೇಹ ಇರುವವರಲ್ಲಿ ಕಪ್ಪು ಶಿಲೀಂಧ್ರ ಸೋಂಕು ಹೆಚ್ಚು ಕಾಣಿಸಿಕೊಳ್ಳುತ್ತದೆ ಎಂದಿದ್ದಾರೆ. ರಾಜ್ಯದಲ್ಲಿ ಬೆಂಗಳೂರು ಹೊರತುಪಡಿಸಿ ಮೈಸೂರು ಮೆಡಿಕಲ್ ಕಾಲೇಜು, ಶಿವಮೊಗ್ಗ ಮೆಡಿಕಲ್, ಜಿಮ್ಸ್, ಕಿಮ್ಸ್, ಕೆಎಂಸಿ ಹಾಗೂ ವೆನ್‌ಲಾಕ್ ಆಸ್ಪತ್ರೆಗಳಲ್ಲಿ ಬ್ಲಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್‌ ಹೇಳಿದ್ದಾರೆ‍.

    ಬ್ಲಾಕ್ ಫಂಗಸ್ ಸೋಂಕಿನ ಬಗ್ಗೆ ಡಾ.ಎಚ್.ಎಸ್.ಸತೀಶ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿಲಾಗಿದ್ದು ಸೋಂಕಿನ ಕಾರಣ ಮತ್ತು ಚಿಕಿತ್ಸೆ ಬಗ್ಗೆ ಸರ್ಕಾರಕ್ಕೆ ವರದಿ ನೀಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

    ಭಾರತದಲ್ಲಿ ಕೊರೋನಾ ಅಬ್ಬರ:

    ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಏಪ್ರಿಲ್ 30ರಿಂದ ದಿನ‌ ಒಂದರಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕು ಪೀಡಿತರಾಗುತ್ತಿದ್ದರು. ಈಗ ತುಸು ಕಡಿಮೆಯಾಗಿ ಮೂರು ಲಕ್ಷಕ್ಕಿಂತಲೂ ಕಡಿಮೆ ಜನ ಸೋಂಕು ಪೀಡಿತರಾಗುತ್ತಿದ್ದಾರೆ. ಆದರೆ ಕೊರೋನಾದಿಂದ ಸಾಯುತ್ತಿರುವವರ ಸಂಖ್ಯೆಯಲ್ಲಿ ಮಾತ್ರ ಇಳಿಮುಖ ಆಗಿಲ್ಲ.

    ಇದನ್ನೂ ಓದಿ : Narada case: ನಾರದ ಲಂಚ ಪ್ರಕರಣ; ಸಿಎಂ ಮಮತಾ ಬ್ಯಾನರ್ಜಿ ಹೆಸರು ಉಲ್ಲೇಖಿಸಿ ಪ್ರಕರಣದ ವರ್ಗಾವಣೆಗೆ ಸಿಬಿಐ ಅರ್ಜಿ

    ಮಂಗಳವಾರ 2,67,334 ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,54,96,330ಕ್ಕೆ ಏರಿಕೆ ಆಗಿದೆ.‌ ಆದರೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಮಾತ್ರ ಕಡಿಮೆ ಆಗಿಲ್ಲ. ಮಂಗಳವಾರವಾರವೂ 4,529 ಜನರು ಬಲಿ ಆಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 2,83,248ಕ್ಕೆ ಏರಿಕೆ ಆಗಿದೆ. ಈವರೆಗೆ 2,19,86,363ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಇನ್ನೂ 32,26,719 ಆಕ್ಟಿವ್ ಕೇಸುಗಳಿವೆ.

    ದೇಶದಲ್ಲಿ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ. ಆಗ ಸೋಂಕು ಪೀಡಿತರ ಸಂಖ್ಯೆ ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಅತಿಹೆಚ್ಚಾಗಿತ್ತು.
    Published by:MAshok Kumar
    First published: