Black Fungus: ಬ್ಲಾಕ್ ಫಂಗಸ್ ಹರಡುವಿಕೆ ಹಿನ್ನೆಲೆ; ಕೇಂದ್ರದಿಂದ ರಾಜ್ಯಗಳಿಗೆ ಆಂಫೊಟೆರಿಸಿನ್-ಬಿ ಇಂಜೆಕ್ಷನ್ ರವಾನೆ

Amphotericin-B: ಜನಸಂಖ್ಯೆ ಮತ್ತು ಬ್ಲ್ಯಾಕ್ ಫಂಗಸ್ ಸೋಂಕಿನ ಸಂಖ್ಯೆಗೆ ಅನುಗುಣವಾಗಿ ರಾಜ್ಯ ಸರ್ಕಾರಗಳಿಗೆ ಆಂಫೊಟೆರಿಸಿನ್-ಬಿ ಇಂಜೆಕ್ಷನ್ ಹಂಚಿಕೆ ಮಾಡಲಾಗಿದೆ.

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

  • Share this:
ನವದೆಹಲಿ, ಮೇ 22: ದೇಶದಲ್ಲಿ ಎರಡನೇ ಸುತ್ತಿನ ಕಾಯಿಲೆ ಕೊರೋನಾ ಅಲೆ ಇನ್ನೂ ವ್ಯಾಪಕವಾಗಿ ಹರಡುತ್ತಿದ್ದು ಪ್ರತಿ ದಿನ ಸರಿ ಸುಮಾರು ಎರಡೂವರೆ ಲಕ್ಷ ಜನ ಸೋಂಕು ಪೀಡಿತರಾಗುತ್ತಿದ್ದಾರೆ. ಪ್ರತಿ ದಿನ ನಾಲ್ಕು ಸಾವಿರಕ್ಕೂ ಹೆಚ್ಚು ಜನ‌ ಕೊರೋನಾದಿಂದ ಸಾಯುತ್ತಿದ್ದಾರೆ. ಈ ನಡುವೆ Black Fungus ಹರಡುವಿಕೆ ಹೆಚ್ಚಾಗುತ್ತಿದ್ದು ಆತಂಕ ಮೂಡಿಸಿದೆ.‌ ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ Amphotericin-B Injection ರವಾನೆ ಮಾಡಿದೆ.

ಒಟ್ಟು ಹೆಚ್ಚುವರಿಯಾಗಿ 8,848 ವಯಲ್ಸ್ Amphotericin-Bಗಳನ್ನು ಹಂಚಿಕೆ ಮಾಡಲಾಗಿದ್ದು ಕರ್ನಾಟಕಕ್ಕೆ 500 ವಯಲ್ಸ್ ನೀಡಲಾಗಿದೆ. ಇದರಿಂದ ಈವರೆಗೆ ಕರ್ನಾಟಕಕ್ಕೆ 1,270 ವಯಲ್ಸ್ ಹಂಚಿಕೆ ಮಾಡಿದಂತಾಗಿದೆ. ದೇಶದಲ್ಲಿ ಈವರೆಗೆ 23,680 ವಯಲ್ಸ್ ಹಂಚಿಕೆ ಮಾಡಲಾಗಿದೆ. ಈ ಪೈಕಿ ಗುಜರಾತ್‌ ರಾಜ್ಯಕ್ಕೆ ಅತಿ ಹೆಚ್ಚು 5,800 ವಯಲ್ಸ್, ಮಹಾರಾಷ್ಟ್ರಕ್ಕೆ 5,090 ವಯಲ್ಸ್, ಆಂಧ್ರ ಪ್ರದೇಶಕ್ಕೆ 2,310 ವಯಲ್ಸ್, ಮಧ್ಯ ಪ್ರದೇಶಕ್ಕೆ 1,830 ವಯಲ್ಸ್ ಮತ್ತು ಹರಿಯಾಣಕ್ಕೆ 640 ವಯಲ್ಸ್ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Cyclone Yaas: ಮೇ 26ಕ್ಕೆ ಪಶ್ಚಿಮ ಬಂಗಾಳ, ಒರಿಸ್ಸಾದಲ್ಲಿ ಯಾಸ್ ಚಂಡಮಾರುತದ ಅಬ್ಬರ; ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್

Covid-19 Vaccine ಹಂಚಿಕೆಯಲ್ಲಿ ತಾರತಮ್ಯ ಮಾಡಿದಂತೆ ಕೇಂದ್ರ ಸರ್ಕಾರವು Black Fungus Medicine ವಿತರಣೆಯಲ್ಲೂ ತಾರತಮ್ಯ ಮಾಡಿದೆ ಎಂಬ ಆರೋಪಗಳು ಕೇಳಿ ಬರುತ್ತಿದ್ದವು. ದಿಢೀರನೆ ಪತ್ತೆಯಾದ ಬ್ಲ್ಯಾಕ್ ಫಂಗಸ್ ರೋಗ ನಿವಾರಣೆಗೆ ಕೇಂದ್ರ ಸರ್ಕಾರ ಔಷಧಿ ಕೊಡುವುದನ್ನು ತಡ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದವು. ಈ ಹಿನ್ನೆಲೆಯಲ್ಲಿ 'ಜನಸಂಖ್ಯೆ ಮತ್ತು ಬ್ಲ್ಯಾಕ್ ಫಂಗಸ್ ಸೋಂಕಿನ ಸಂಖ್ಯೆಗೆ ಅನುಗುಣವಾಗಿ ರಾಜ್ಯ ಸರ್ಕಾರಗಳಿಗೆ ಆಂಫೊಟೆರಿಸಿನ್-ಬಿ ಹಂಚಿಕೆ ಮಾಡಲಾಗಿದೆ' ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Coronavirus Updates: ಭಾರತದಲ್ಲಿ ತಗ್ಗಿದ ಕೊರೋನಾ ಹಾವಳಿ; ನಿನ್ನೆ 2.57 ಲಕ್ಷ ಕೇಸುಗಳು ಪ್ರಕರಣಗಳು ಪತ್ತೆ

ಶುಕ್ರವಾರ 2,57,299 ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,62,89,290ಕ್ಕೆ ಏರಿಕೆ ಆಗಿದೆ.‌ ಆದರೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಮಾತ್ರ ಕಡಿಮೆ ಆಗಿಲ್ಲ. ಶುಕ್ರವಾರ 4,194 ಜನರು ಬಲಿ ಆಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 2,95,525ಕ್ಕೆ ಏರಿಕೆ ಆಗಿದೆ. ಈವರೆಗೆ 2,30,70,365 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಇನ್ನೂ 29,23,400 ಆಕ್ಟಿವ್ ಕೇಸುಗಳಿವೆ.

ದೇಶದಲ್ಲಿ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ. ಆಗ ಸೋಂಕು ಪೀಡಿತರ ಸಂಖ್ಯೆ ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಅತಿ ಹೆಚ್ಚಾಗಿತ್ತು.
Published by:Sushma Chakre
First published: