BS Yediyurappa: ಸಿಎಂ ಯಡಿಯೂರಪ್ಪ ಕೊರೋನಾದಿಂದ ಗುಣಮುಖ; ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್

Karnataka Coronavirus: ಕೊರೋನಾ ಸೋಂಕಿನಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿ.ಎಸ್. ಯಡಿಯೂರಪ್ಪ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಇಂದಿನ ಕೊರೋನಾ ಪರೀಕ್ಷೆಯಲ್ಲಿ ಸಿಎಂ ವರದಿ ನೆಗೆಟಿವ್ ಬಂದಿರುವುದರಿಂದ ನಾಳೆ ಡಿಸ್ಚಾರ್ಜ್ ಮಾಡಲಾಗುವುದು.

news18-kannada
Updated:August 10, 2020, 10:23 AM IST
BS Yediyurappa: ಸಿಎಂ ಯಡಿಯೂರಪ್ಪ ಕೊರೋನಾದಿಂದ ಗುಣಮುಖ; ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್
ಪುಸ್ತಕ ಓದುತ್ತಿರುವ ಬಿಎಸ್​ವೈ
  • Share this:
BS Yediyurappa: ಬೆಂಗಳೂರು (ಆ. 10): ಕೊರೋನಾ ಪಾಸಿಟಿವ್ ಕಂಡುಬಂದಿದ್ದರಿಂದ ಕಳೆದ ಭಾನುವಾರ ರಾತ್ರಿ ಕೊರೋನಾ ಪಾಸಿಟಿವ್​ನಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಆಸ್ಪತ್ರೆಗೆ ಸೇರಿ ಇಂದಿಗೆ 9 ದಿನವಾಗಿದ್ದು, ಇಂದಿನ ವೈದ್ಯಕೀಯ ಪರೀಕ್ಷೆಯಲ್ಲಿ ಕೊರೋನಾ ನೆಗೆಟಿವ್ ಬಂದಿದೆ. ಹೀಗಾಗಿ, ನಾಳೆ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಕೊರೋನಾ ಸೋಂಕಿನಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿ.ಎಸ್. ಯಡಿಯೂರಪ್ಪ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಇಂದಿನ ಕೊರೋನಾ ಪರೀಕ್ಷೆಯಲ್ಲಿ ಸಿಎಂ ವರದಿ ನೆಗೆಟಿವ್ ಬಂದಿರುವುದರಿಂದ ಯಡಿಯೂರಪ್ಪ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ, ಎಲ್ಲವೂ ಕ್ಲಿಯರ್ ಆಗಿದೆ ಎಂದು ವೈದ್ಯರು ಸಿಎಂ ಯಡಿಯೂರಪ್ಪ ಹಾಗೂ ಪುತ್ರಿ ಪದ್ಮಾಗೆ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯದ 7 ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಕೊರೋನಾದಿಂದಾಗಿ ಮಣಿಪಾಲ್ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಮೂತ್ರಕೋಶದ ಸಮಸ್ಯೆಯೂ ಇರುವುದರಿಂದ ಆಸ್ಪತ್ರೆಯಲ್ಲಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಯಡಿಯೂರಪ್ಪನವರ ಸಂಪುಟದ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿದಾಗ ಕೊರೋನಾ ಸೋಂಕು ತಗುಲಿರುವುದು ಖಚಿತವಾಗಿದೆ. ಹೀಗಾಗಿ, ಅವರು ಶಿವಾಜಿನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಆಸ್ಪತ್ರೆಯ ಬದಲು ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುವ ಮೂಲಕ ಸಚಿವ ಶ್ರೀರಾಮುಲು ಮಾದರಿಯಾಗಿದ್ದಾರೆ.

ಕೊರೋನಾ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ. ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಇತ್ತೀಚಿಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದು ಸಚಿವ ಶ್ರೀರಾಮುಲು ಟ್ವೀಟ್​ನಲ್ಲಿ ತಿಳಿಸಿದ್ದರು.
Published by: Sushma Chakre
First published: August 10, 2020, 9:42 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading