ಮಾರ್ಗಸೂಚಿ ಪಾಲಿಸಿ; ಉಜ್ವಲ ಭವಿಷ್ಯ ನಿಮ್ಮದಾಗಲಿ: SSLC ಪರೀಕ್ಷಾರ್ಥಿಗಳಿಗೆ ಸಿಎಂ ಶುಭಹಾರೈಕೆ

ವಿದ್ಯಾರ್ಥಿಗಳೇ, ಮಾಸ್ಕ್, ಸ್ಯಾನಿಟೈಸರ್ಗಳನ್ನು ಕಡ್ಡಾಯವಾಗಿ ಬಳಸಿ. ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಿ. ಸರ್ಕಾರ ಪರೀಕ್ಷೆ ನಡೆಸಲು ಹೊರಡಿಸಿರುವ ಮಾರ್ಗ ಸೂಚಿಗಳನ್ನ ಪಾಲಿಸಿ ಎಂದು ಮಕ್ಕಳಿಗೆ ಸಿಎಂ ಕರೆ ನೀಡಿದರು.

ಸಿಎಂ ಬಿ.ಎಸ್‌. ಯಡಿಯೂರಪ್ಪ.

ಸಿಎಂ ಬಿ.ಎಸ್‌. ಯಡಿಯೂರಪ್ಪ.

 • Share this:
  ಬೆಂಗಳೂರು(ಜೂನ್ 24): ನಾಳೆ ಪ್ರಾರಂಭವಾಗಲಿರುವ ರಾಜ್ಯದ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಭ ಹಾರೈಸಿದ್ಧಾರೆ. ಸರ್ಕಾರ ಎಲ್ಲಾ ಅಗತ್ಯ ಸುರಕ್ಷತಾ ಕ್ರಮಗಳನ್ನ ಕೈಗೊಂಡಿದ್ದು ಆತಂಕ, ಭಯ ಇಲ್ಲದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಮಕ್ಕಳಿಗೆ ಸಿಎಂ ಕರೆ ನೀಡಿದ್ಧಾರೆ.

  ಇಂದು ಎರಡು ಸರಣಿ ಟ್ವೀಟ್ ಮೂಲಕ ಮಕ್ಕಳಿಗೆ ಶುಭ ಹಾರೈಸಿದ ಅವರು, ಮಕ್ಕಳು ಪರೀಕ್ಷೆಯಲ್ಲಿ ಯಶಸ್ಸು ಪಡೆದು ಉಜ್ವಲ ಭವಿಷ್ಯ ಹೊಂದಲಿ ಎಂದು ಆಶಿಸಿದರು. ಕೊರೋನಾ ವೈರಸ್ ಸೋಂಕು ಹರಡದಂತೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನ ಪಾಲಿಸುವಂತೆ ಅವರು ಕರೆ ನೀಡಿದರು.

  “ವಿದ್ಯಾರ್ಥಿಗಳೇ, ಮಾಸ್ಕ್, ಸ್ಯಾನಿಟೈಸರ್​ಗಳನ್ನು ಕಡ್ಡಾಯವಾಗಿ ಬಳಸಿ. ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಿ. ಸರ್ಕಾರ ಪರೀಕ್ಷೆ ನಡೆಸಲು ಹೊರಡಿಸಿರುವ ಮಾರ್ಗ ಸೂಚಿಗಳನ್ನ ಪಾಲಿಸಿ…. ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾದ ಪರೀಕ್ಷೆಯನ್ನು ಆತಂಕ ಮತ್ತು ಭಯ ಇಲ್ಲದೆ ಆತ್ಮವಿಶ್ವಾಸದಿಂದ ಎದುರಿಸಿ, ಯಶಸ್ಸು ಪಡೆಯಿರಿ. ಉಜ್ವಲ ಭವಿಷ್ಯ ನಿಮ್ಮದಾಗಲಿ” ಎಂದು ಬಿಎಸ್​ವೈ ಟ್ವೀಟ್ ಮಾಡಿದ್ದಾರೆ.

  ಇದನ್ನೂ ಓದಿ: SSLC ಪರೀಕ್ಷೆ ಸರ್ಕಾರಕ್ಕೆ ಪ್ರತಿಷ್ಠೆಯಲ್ಲ; ಮಕ್ಕಳ ಭವಿಷ್ಯ ಮುಖ್ಯ: ಶಿಕ್ಷಣ ಸಚಿವ ಸುರೇಶ್ ಕುಮಾರ್  ನಾಳೆಯಿಂದ ರಾಜ್ಯಾದ್ಯಂತ 5,757 ಕೇಂದ್ರಗಳಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳಲ್ಲಿ ಒಟ್ಟು 8,48,203 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಬೆಂಗಳೂರಿನಲ್ಲೇ 1,13,800 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಕೊರೋನಾ ಸೋಂಕು ತಗುಲಿರುವ ವಿದ್ಯಾರ್ಥಿಗಳಿಗೆ ಆಗಸ್ಟ್ ತಿಂಗಳಲ್ಲಿ ಪ್ರತ್ಯೇಕವಾಗಿ ಪರೀಕ್ಷೆ ಆಯೋಜಿಸಲಾಗುವುದು ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದ್ಧಾರೆ.
  First published: