Presidents Rule: ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗಲಿ: ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಆಗ್ರಹ

ರಾಜಸ್ಥಾನದಲ್ಲಿ ರಾಜಕಾರಣಿಗಳ ಫೋನ್‌ ಕದ್ದಾಲಿಕೆ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಅಶೋಕ್‌ ಗೆಹ್ಲೋಟ್‌ ಸರ್ಕಾರದ ಮೇಲೆ ಕೇಳಿ ಬಂದಿದೆ. ಈ ಸಂಬಂಧ ಸಿಬಿಐ ತನಿಖೆ ನಡೆಯಬೇಕು ಎಂದು ಬಿಜೆಪಿ ಆಗ್ರಹಿಸಿದೆ.

news18-kannada
Updated:July 18, 2020, 3:40 PM IST
Presidents Rule: ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗಲಿ: ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಆಗ್ರಹ
ಬಿಎಸ್​ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ
  • Share this:
ನವದೆಹಲಿ(ಜು.18): ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್​ ಆಡಳಿತದ ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಆಗ್ರಹಿಸಿದ್ಧಾರೆ. ರಾಜಸ್ಥಾನದಲ್ಲಿ ಭಾರತೀಯ ಜನತಾ ಪಕ್ಷ ಕುದುರೆ ವ್ಯಾಪರ ನಡೆಸುತ್ತಿದೆ ಎಂಬ ಸಿಎಂ ಅಶೋಕ್​​ ಗೆಹ್ಲೋಟ್ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಯಾವತಿ ಹೀಗೆಂದರು.

ಈ ಸಂಬಂಧ ಟ್ವೀಟ್​ ಮಾಡಿರುವ ಬಿಎಸ್​​ಪಿ ಮುಖ್ಯಸ್ಥೆ ಮತ್ತು ಮಾಜಿ ಸಿಎಂ ಮಾಯಾವತಿ, ರಾಜಸ್ಥಾನದ ರಾಜಕೀಯ ಬಿಕ್ಕಟ್ಟು ಬಗ್ಗೆ ಹೀಗೆ ಬರೆದುಕೊಂಡಿದ್ದಾರೆ. 'ರಾಜಸ್ಥಾನ ಸಿಎಂ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಈ ಹಿಂದೆ ಕಾಂಗ್ರೆಸ್​ ಮುಖಂಡರು ಬಿಎಸ್​ಪಿ ಶಾಸಕರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡರು. ಆಗ ಕಾಂಗ್ರೆಸ್​ ಮಾಡಿದ ಕೆಲವೇ ಬಿಜೆಪಿ ಮಾಡುತ್ತಿದೆ. ಇವರು ತಮ್ಮ ಶಾಸಕರನ್ನು ಕಾಪಾಡಿಕೊಳ್ಳಲು ಬಿಜೆಪಿ ನಾಯಕರ ಫೋನ್​​ ಕದ್ದಾಲಿಕೆ ಮಾಡಲಾಗಿದೆ. ಹೀಗಾಗಿ ರಾಜಸ್ಥಾನದಲ್ಲಿ ರಾಷ್ಟ್ರಪತಿಗಳ ಆಡಳಿತ ಹೇರಬೇಕು' ಎಂದು ಮಾಯಾವತಿ ಒತ್ತಾಯಿಸಿದ್ಧಾರೆ.

ಮತ್ತೊಂದು ಟ್ವೀಟ್​ ಮಾಡಿರುವ ಮಾಯಾವತಿ, ರಾಜಸ್ಥಾನದ ಸದ್ಯದ ರಾಜಕೀಯ ಬಿಕ್ಕಟ್ಟಿನ ಬಗ್ಗೆ ರಾಜ್ಯಪಾಲರು ಸಂಪೂರ್ಣ ಮಾಹಿತಿ ಸಂಗ್ರಹಿಸಬೇಕು. ಬಳಿಕ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡುವ ಮೂಲಕ ಪ್ರಜಾಪ್ರಭುತ್ವ ಉಳಿಸಬೇಕು' ಎಂದು ಬರೆದುಕೊಂಡಿದ್ದಾರೆ.

ರಾಜಸ್ಥಾನದಲ್ಲಿ ರಾಜಕಾರಣಿಗಳ ಫೋನ್‌ ಕದ್ದಾಲಿಕೆ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಅಶೋಕ್‌ ಗೆಹ್ಲೋಟ್‌ ಸರ್ಕಾರದ ಮೇಲೆ ಕೇಳಿ ಬಂದಿದೆ. ಈ ಸಂಬಂಧ ಸಿಬಿಐ ತನಿಖೆ ನಡೆಯಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಇತ್ತೀಚೆಗೆ ಶುಕ್ರವಾರವಷ್ಟೆ ಕಾಂಗ್ರೆಸ್‌ ಬಿಜೆಪಿ ನಾಯಕರ ಆಡಿಯೋ ಟೇಪ್‌ ಒಂದನ್ನು ಬಿಡುಗಡೆಗೊಳಿಸಿತ್ತು. ಇದರಲ್ಲಿ ಶಾಸಕರ ಕುದುರೆ ವ್ಯಾಪಾರದ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದು ಕಾಂಗ್ರೆಸ್​ ಹೇಳಿತ್ತು.

ಇದನ್ನೂ ಓದಿ: Asha workers: ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರಇನ್ನು, ಈ ಫೋನ್​ ಟ್ಯಾಪಿಂಗ್​ ಆಧಾರದ ಮೇಲೆ ಕಾಂಗ್ರೆಸ್‌ ಬಿಜೆಪಿ ಮೇಲೆ ಪೊಲೀಸರಿಗೆ ದೂರು ಕೂಡ ನೀಡಿತ್ತು. ಆದರೆ ಬಿಜೆಪಿಯ ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಇದು ನನ್ನ ಧ್ವನಿಯಲ್ಲ ಎಂದಿದ್ದರು. ಜತೆಗೆ ಇದು ನಕಲಿ ಆಡಿಯೋ ಎಂದು ಬಿಜೆಪಿ ಹೇಳಿತ್ತು.
Published by: Ganesh Nachikethu
First published: July 18, 2020, 3:38 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading