HOME » NEWS » Coronavirus-latest-news » BSY GOVT UNLOCK DAKSHINA KANNADA HASSAN DAVANAGERE AND CHAMARAJANAGARA DISTRICTS SESR

Unlock: ಮತ್ತೆ ನಾಲ್ಕು ಜಿಲ್ಲೆಗಳು ಅನ್​ಲಾಕ್​; ಮಧ್ಯಾಹ್ನದವರೆಗೆ ಮಾತ್ರ ವ್ಯಾಪಾರಕ್ಕೆ ಅವಕಾಶ

ಪಾಸಿಟಿವಿಟಿ ರೇಟ್​​ ಶೇ 5ಕ್ಕಿಂತ ಕಡಿಮೆ ಇರುವ ದಕ್ಷಿಣ ಕನ್ನಡ, ಹಾಸನ, ದಾವಣಗೆರೆ ಮತ್ತು ಚಾಮರಾಜನಗರದಲ್ಲಿ ಲಾಕ್​ಡೌನ್​ ನಿಯಮ ಸಡಿಲಿಕೆ ಮಾಡಲಾಗಿದೆ.


Updated:June 22, 2021, 4:33 PM IST
Unlock: ಮತ್ತೆ ನಾಲ್ಕು ಜಿಲ್ಲೆಗಳು ಅನ್​ಲಾಕ್​; ಮಧ್ಯಾಹ್ನದವರೆಗೆ ಮಾತ್ರ ವ್ಯಾಪಾರಕ್ಕೆ ಅವಕಾಶ
file photo
  • Share this:
ಬೆಂಗಳೂರು (ಜೂ. 22):  ಕೋವಿಡ್​ ಸೋಂಕು ಇಳಿಕೆ ಕಾಣುತ್ತಿರುವ ಹಿನ್ನಲೆ ಮತ್ತೆ ನಾಲ್ಕು ಜಿಲ್ಲೆಗಳಿಗೆ ಲಾಕ್​ಡೌನ್​ನಿಂದ ಅಲ್ಪ ಪ್ರಮಾಣದ ರಿಲೀಫ್​ ನೀಡಿ ಸರ್ಕಾರ ಆದೇಶಿಸಿದೆ. ಪಾಸಿಟಿವಿಟಿ ರೇಟ್​​ ಶೇ 5ಕ್ಕಿಂತ ಕಡಿಮೆ ಇರುವ ದಕ್ಷಿಣ ಕನ್ನಡ, ಹಾಸನ, ದಾವಣಗೆರೆ ಮತ್ತು ಚಾಮರಾಜನಗರದಲ್ಲಿ ಲಾಕ್​ಡೌನ್​ ನಿಯಮ ಸಡಿಲಿಕೆ ಮಾಡಲಾಗಿದೆ. ಬೆಳಗ್ಗೆ 6 ರಿಂದ ಮಧ್ಯಾಹ್ನ 1 ಗಂಟೆವರೆಗೂ ಅಗತ್ಯ ವಸ್ತುಗಳ ವಹಿವಾಟಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ಹಂತ ಹಂತವಾಗಿ ಸರ್ಕಾರ ಒಂದೊಂದೇ ಜಿಲ್ಲೆಗೆ ವಿನಾಯತಿ ನೀಡಲು ಮುಂದಾಗಿದೆ. ಇನ್ನು ನಿನ್ನೆಯಷ್ಟೆ ಶಿವಮೊಗ್ಗ, ಬಳ್ಳಾರಿ, ವಿಜಯಪುರ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಅನ್​ಲಾಕ್​ ಘೋಷಿಸಲಾಗಿತ್ತು ಈಗ ಮತ್ತೆ ನಾಲ್ಕು ಜಿಲ್ಲೆಗಳಲ್ಲಿ ಲಾಕ್​ಡೌನ್​ ಸಡಿಲಕ್ಕೆ ರಾಜ್ಯ ಸರ್ಕಾರ ಆದೇಶ ಮಾಡಿದೆ.

ಇನ್ನುಳಿದ ಮೈಸೂರು, ಉಡುಪಿ, ಚಿಕ್ಕಮಗಳೂರು, ಕೊಡಗಿನಲ್ಲಿ ಲಾಕ್​​ಡೌನ್​ ನಿಯಮ ಜಾರಿಯಲ್ಲಿರಲಿದ್ದು, ಇಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಘೋಷಿಸಲಾಗಿದೆ.

ಏನೆಲ್ಲಾ ವಿನಾಯಿತಿ

  • ಎಲ್ಲಾ ಅಂಗಡಿಗಳನ್ನು ಸಂಜೆ 1.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.

  • ಎಸಿ. ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಮಧ್ಯಾಹ್ನ 1 .00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು.

  • ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.
  • ಬಸ್‌ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.

  • ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.

  • ಸರ್ಕಾರಿ/ ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.

  • ಲಾಡ್ಜ್‌ ಗಳಲ್ಲಿ ಮತ್ತು ರೆಸಾರ್ಟ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.

  • ಜಿಮ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ


ಈ ಸಮಯದಲ್ಲಿ ಸಾರಿಗೆ ಸಂಚಾರ ಇರಲಿದ್ದು, ಹೊಟೇಲ್​, ಅಂಗಡಿ ಮುಗ್ಗಟ್ಟುಗಳು ಕೂಡ  ಕಾರ್ಯನಿರ್ವಹಿಸಲಿದೆ. ರಾತ್ರಿ 7 ಗಂಟೆ ಬಳಿಕ ಎಂದಿನಂತೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದ್ದು, ವಿಕೇಂಡ್​ ಕರ್ಪ್ಯೂ ಕೂಡ ಜಾರಿಯಲ್ಲಿ ಇರಲಿದೆ ಎಂದು ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
Youtube Video

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು
Published by: Seema R
First published: June 22, 2021, 4:33 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories