HOME » NEWS » Coronavirus-latest-news » BSYEDDYURAPPA IS IN FAVOR OF THE TRUTH AMONG POLITICAL WORMS IN MARRIAGE SAYS HDKUMARASWAMY MAK

ವಿವಾಹದಲ್ಲೂ ರಾಜಕೀಯ ಹುಡುಕಿದ ಹುಳುಗಳ ನಡುವೆ ಬಿಎಸ್‌ವೈ ಸತ್ಯದ ಪರ ಇದ್ದಾರೆ; ಹೆಚ್‌ಡಿಕೆ

ಮಾಜಿ ಸಿಎಂ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿ ಅವರ ಮದುವೆಯನ್ನು ಏಪ್ರಿಲ್ 17ರಂದು ನೆರವೇರಿಸಲಾಗಿತ್ತು. ಆದರೆ. ಈ ಸಮಾರಂಭದ ಮೂಲಕ ಲಾಕ್‌ಡೌನ್ ಅನ್ನು ಉಲ್ಲಂಘಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುದುಕೊಂಡಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್‌ಡಿಕೆ ವಿರುದ್ಧ ಹಲವರು ಕಿಡಿ ಕಾರಿದ್ದರು.

MAshok Kumar | news18-kannada
Updated:April 19, 2020, 1:30 PM IST
ವಿವಾಹದಲ್ಲೂ ರಾಜಕೀಯ ಹುಡುಕಿದ ಹುಳುಗಳ ನಡುವೆ ಬಿಎಸ್‌ವೈ ಸತ್ಯದ ಪರ ಇದ್ದಾರೆ; ಹೆಚ್‌ಡಿಕೆ
ಹೆಚ್​.ಡಿ. ಕುಮಾರಸ್ವಾಮಿ.
  • Share this:
ಬೆಂಗಳೂರು (ಏಪ್ರಿಲ್ 19); ಮದುವೆಯಂತಹ ಕೌಟುಂಬಿಕ ಸಮಾರಂಭದಲ್ಲೂ ರಾಜಕೀಯ ಹುಡುಕಿದ ಕೆಲವು ಸೋಷಿಯಲ್ ಮೀಡಿಯಾ ಹುಳುಗಳ ನಡುವೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸತ್ಯದ ಪರ ನಿಂತಿದ್ದಾರೆ ಎಂದು ಹೆಚ್‌.ಡಿ. ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿ ಅವರ ಮದುವೆಯನ್ನು ಏಪ್ರಿಲ್ 17ರಂದು ನೆರವೇರಿಸಲಾಗಿತ್ತು. ಆದರೆ. ಈ ಸಮಾರಂಭದ ಮೂಲಕ ಲಾಕ್‌ಡೌನ್ ಅನ್ನು ಉಲ್ಲಂಘಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುದುಕೊಂಡಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್‌ಡಿಕೆ ವಿರುದ್ಧ ಹಲವರು ಕಿಡಿ ಕಾರಿದ್ದರು. ಈ ಎಲ್ಲಾ ಆರೋಪಗಳಿಗೂ ಕುಮಾರಸ್ವಾಮಿ ಇಂದು ಸರಣಿ ಟ್ವೀಟ್ ಮಾಡುವ ಮೂಲಕ ಉತ್ತರ ನೀಡಿದ್ದಾರೆ.

"ನಿಖಿಲ್‌ ವಿವಾಹದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡರೂ, ನಿಯಮ ಪಾಲಿಸಿದರೂ ಇದ್ಯಾವುದೂ ಪಾಲನೆ ಆಗಿಲ್ಲ ಎಂಬ ಚರ್ಚೆಗಳು ನಡೆದವು. ರಾಜಕೀಯ ದ್ವೇಷಕ್ಕಾಗಿ ಶುಭ ಸಮಾರಂಭದ ವಿಷಯದಲ್ಲೂ ವಿಷ ಕಾರುವ ಮನಸ್ಥಿತಿಗಳು ರಾರಾಜಿಸಿದವು.
ಆದರೆ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಇವೆಲ್ಲವನ್ನೂ ನಿರಾಕರಿಸುವ ಮೂಲಕ ಸತ್ಯದ ಪರ ನಿಂತಿದ್ದಾರೆ" ಎಂದು ಪ್ರಶಂಶೆ ವ್ಯಕ್ತಪಡಿಸಿದರು.



ಮತ್ತೊಂದು ಟ್ವೀಟ್‌ನಲ್ಲಿ, "ನನ್ನ ಒಡನಾಡಿಗಳು, ನನ್ನ ಹಿತೈಷಿಗಳು, ನನ್ನ ಜನ, ನನ್ನ ಕಾರ್ಯಕರ್ತರು ಇವರೆಲ್ಲರೊಂದಿಗೆ ಶುಭ ಸಮಾರಂಭವೊಂದರಲ್ಲಿ ಒಟ್ಟಿಗೆ ಸೇರಲು ವೈಯಕ್ತಿಕವಾಗಿ ನನಗೆ ಇದ್ದ ಒಂದೇ ಒಂದು ಸುವರ್ಣ ಅವಕಾಶವನ್ನು ಕೈಚೆಲ್ಲಿ ನಿಖಿಲ್‌ ವಿವಾಹವನ್ನು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಿ ಸರಳವಾಗಿ ಮಾಡಲಾಯಿತು.



ಆದರೆ, ನಿಖಿಲ್‌ ವಿವಾಹದಲ್ಲೂ ರಾಜಕೀಯ ಹುಡುಕಿದ ‘ಸಾಮಾಜಿಕ ಮಾಧ್ಯಮ’ದ ಕೆಲವು ಹುಳುಕು ಮನಸ್ಸಿನ ಮಂದಿ ತಮ್ಮ ಮನದಲ್ಲಿರುವ ವಿಷ ಕಾರಿಕೊಂಡಿದ್ದಾರೆ. ಅವರೆಲ್ಲರೂ ಶರಣರ ಈ ಮಾತನ್ನು ನೆನಪಲ್ಲಿಟ್ಟುಕೊಳ್ಳಬೇಕು. "ಮನದ ಕೋಪ ತನ್ನ ಅರಿವಿನ ಕೇಡು ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡದು ಕೂಡಲಸಂಗಮದೇವಾ" ಎಂದು ತಮ್ಮ ಅಸಮಾಧಾನವನ್ನು ಅವರು ಹೊರಹಾಕಿದ್ದಾರೆ.

ಇದನ್ನೂ ಓದಿ : ಕೊರೋನಾ ಕ್ರಮದ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನಿಯೋಗ; ವರದಿಯಲ್ಲೇನಿದೆ?
Youtube Video
First published: April 19, 2020, 1:30 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories