• ಹೋಂ
  • »
  • ನ್ಯೂಸ್
  • »
  • Corona
  • »
  • Coronavirus | ಸಿಬಿಎಸ್​ಇ 10ನೇ ತರಗತಿ ಪರೀಕ್ಷೆಗಳು ರದ್ದು, 12ನೇ ತರಗತಿ ಪರೀಕ್ಷಾ ದಿನಾಂಕ ಮುಂದೂಡಿಕೆ

Coronavirus | ಸಿಬಿಎಸ್​ಇ 10ನೇ ತರಗತಿ ಪರೀಕ್ಷೆಗಳು ರದ್ದು, 12ನೇ ತರಗತಿ ಪರೀಕ್ಷಾ ದಿನಾಂಕ ಮುಂದೂಡಿಕೆ

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಹಾಕುವ ಕೆಲಸವನ್ನು ಹಂತ ಹಂತವಾಗಿ ದೇಶವ್ಯಾಪಿ ತೀವ್ರಗೊಳಿಸಲಾಗುತ್ತದೆ. ಈವರೆಗೆ ದೇಶಾದ್ಯಂತ ಒಟ್ಟು 11,11,79,578 ಜನರಿಗೆ ಲಸಿಕೆ ಹಾಕಲಾಗಿದೆ. ಏಪ್ರಿಲ್ 1 ರಿಂದ 45 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಎಲ್ಲರಿಗೂ ಕೊರೋನಾ ಲಸಿಕೆ ಹಾಕಲಾಗುತ್ತಿದೆ. ಏಪ್ರಿಲ್ 11 ರಿಂದ ಕೊರೋನಾ ಲಸಿಕೆ ಹಾಕುವ 'ಟಿಕಾ ಉತ್ಸವ'ವನ್ನು ನಡೆಸಲಾಗುತ್ತಿದೆ.

ಮುಂದೆ ಓದಿ ...
  • Share this:

    ನವದೆಹಲಿ: ದೇಶವ್ಯಾಪಿ ಕೊರೋನಾ ಸೋಂಕು ಹೆಚ್ಚಳವಾದ ಹಿನ್ನಲೆಯಲ್ಲಿ 10ನೇ ತರಗತಿ CBSE ಬೋರ್ಡ್ ಪರೀಕ್ಷೆ ರದ್ದು ಮಾಡಲಾಗಿದೆ. ಹಾಗೆಯೇ 12ನೇ ತರಗತಿ ಪರೀಕ್ಷೆಗಳ ದಿನಾಂಕ ಮುಂದೂಡಲಾಗಿದೆ. ಜೂನ್ 1ರಂದು ಪರಿಸ್ಥಿತಿ ನೋಡಿಕೊಂಡು ಜೂನ್ ‌1ರ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳಲು ಕೇಂದ್ರ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇ


    ಮೇ 4ರಿಂದ ಜೂನ್ 14ರವರೆಗೆ 12ನೇ ತರಗತಿ ಪರೀಕ್ಷೆಗಳು ನಡೆಯಬೇಕಿತ್ತು. ಜೂ. 1ರ ಬಳಿಕ ಪರೀಕ್ಷೆ ದಿನಾಂಕ ನಿರ್ಧರಿಸಿ 15 ದಿನ ಮುನ್ನವೇ ತಿಳಿಸಲು ನಿರ್ಧಾರ ಮಾಡಲಾಗಿದೆ. ಹಾಗೆಯೇ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, ವಸ್ತುನಿಷ್ಠ ಮಾನದಂಡದ ಆಧಾರದ ಮೇಲೆ 10ನೇ ತರಗತಿ ಫಲಿತಾಂಶವನ್ನು ಸಿಬಿಎಸ್​ಇ ತಯಾರಿ ಮಾಡಲಿದೆ.


    ಕೊರೋನಾ ಸೋಂಕಿನ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ 10 ಮತ್ತು 12 ನೇ ತರಗತಿ ಸಿಬಿಎಸ್‌ಇ ಪರೀಕ್ಷೆ ಮುಂದೂಡಲು ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಮನವಿ ಮಾಡಿದ್ದರು. ಪತ್ರದ ಮೂಲಕ ಕೇಂದ್ರ ಸರ್ಕಾರಕ್ಕೆ ಅಮರಿಂದರ್ ಸಿಂಗ್ ಮನವಿ ಮಾಡಿದ್ದರು.


    ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ.‌ ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ‌.‌ ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೋಂಕು ಪೀಡಿತರಾಗಿದ್ದರು. ಏಪ್ರಿಲ್ 7ರಿಂದ ದಿನ ಒಂದರಲ್ಲಿ ಒಂದೂಕಾಲು ಲಕ್ಷಕ್ಕೂ ‌ಹೆಚ್ಚು‌ ಕೊರೋನಾ ಸೋಂಕು ಪೀಡಿತರು ಪತ್ತೆಯಾಗುತ್ತಿದ್ದರು. ಈಗ ದಿನ‌ ಒಂದರಲ್ಲಿ 'ಒಂದೂವರೆ ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಕಂಡು ಬರುವ ಟ್ರೆಂಡ್' ಮುಂದುವರೆದಿದೆ. ಅಲ್ಲದೆ ಸುಮಾರು ಎರಡು ಲಕ್ಷ ಪ್ರಕರಣಗಳು ಗೋಚರಿಸಿವೆ.


    ಇದನ್ನು ಓದಿ: HD Kumaraswamy: ಕೊರೋನಾ ಸೋಂಕಿತರಿಗೆ ಚಿಕಿತ್ಸೆ ಸಿಗುವುದೇ ಕಷ್ಟವಾಗಿದೆ; ಬಿಜೆಪಿ ಸರ್ಕಾರದ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಟೀಕೆ


    ಮಂಗಳವಾರ 1,84,372 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 82,339 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,36,89,453ಕ್ಕೆ ಏರಿಕೆ ಆಗಿದೆ.‌ ಇದಲ್ಲದೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ‌ ಹೆಚ್ಚಾಗಿದ್ದು ದೇಶದಲ್ಲಿ ಇದೇ ಮೊದಲ ಬಾರಿಗೆ ಮಂಗಳವಾರ ಒಂದೇ ದಿನ ಸಾವಿರಕ್ಕೂ ಹೆಚ್ಚು ಜನ‌ ಸಾವನ್ನಪ್ಪಿದ್ದಾರೆ. ಮಂಗಳವಾರ 1,027 ಜನರು ಬಲಿ ಆಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆಗುತ್ತಿರುವವರ ಸಂಖ್ಯೆ 1,72,085ಕ್ಕೆ ಏರಿಕೆ ಆಗಿದೆ.


    ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಹಾಕುವ ಕೆಲಸವನ್ನು ಹಂತ ಹಂತವಾಗಿ ದೇಶವ್ಯಾಪಿ ತೀವ್ರಗೊಳಿಸಲಾಗುತ್ತದೆ. ಈವರೆಗೆ ದೇಶಾದ್ಯಂತ ಒಟ್ಟು 11,11,79,578 ಜನರಿಗೆ ಲಸಿಕೆ ಹಾಕಲಾಗಿದೆ. ಏಪ್ರಿಲ್ 1 ರಿಂದ 45 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಎಲ್ಲರಿಗೂ ಕೊರೋನಾ ಲಸಿಕೆ ಹಾಕಲಾಗುತ್ತಿದೆ. ಏಪ್ರಿಲ್ 11 ರಿಂದ ಕೊರೋನಾ ಲಸಿಕೆ ಹಾಕುವ 'ಟಿಕಾ ಉತ್ಸವ'ವನ್ನು ನಡೆಸಲಾಗುತ್ತಿದೆ.

    Published by:HR Ramesh
    First published: