ಸರ್ಕಾರದ ಮಾರ್ಗಸೂಚಿಯಂತೆ ಈದ್ ಹಬ್ಬ ಆಚರಿಸಿ; ಶಿವಮೊಗ್ಗ ಜಿಲ್ಲಾಧಿಕಾರಿ ಶಿವಕುಮಾರ್ ಮನವಿ

ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 7 ರವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್‌ಡೌನ್ ಇರಲಿದೆ. ಈ ಅವಧಿಯಲ್ಲಿ ದಿನಸಿ ಸಾಮಾಗ್ರಿಗಳು, ಹಾಲು, ತರಕಾರಿ, ಮೀನು, ಮಾಂಸ, ಕೋಳಿ ಅಂಗಡಿಗಳು ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳನ್ನು ತೆರೆಯಲು ಮಾತ್ರ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

news18-kannada
Updated:May 23, 2020, 5:30 PM IST
ಸರ್ಕಾರದ ಮಾರ್ಗಸೂಚಿಯಂತೆ ಈದ್ ಹಬ್ಬ ಆಚರಿಸಿ; ಶಿವಮೊಗ್ಗ ಜಿಲ್ಲಾಧಿಕಾರಿ ಶಿವಕುಮಾರ್ ಮನವಿ
ಪ್ರಾತಿನಿಧಿಕ ಚಿತ್ರ.
  • Share this:
ಶಿವಮೊಗ್ಗ (ಮೇ 23); ಲಾಕ್‌ಡೌನ್ ಹಿನ್ನೆಲೆಯಲ್ಲಿ ಈದ್ ಹಬ್ಬವನ್ನು ಸರ್ಕಾರದ ಮಾರ್ಗ ಸೂಚಿಯಂತೆ ಆಚರಣೆ ಮಾಡಿ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ಇಂದು ಮುಸ್ಲಿಂ ಸಮುದಾಯದವರಿಲ್ಲಿ ಮನವಿ ಮಾಡಿಕೊಂಡಿದ್ದಾರೆ. 

ಸೋಮವಾರ ವಿಶ್ವದಾದ್ಯಂತ ಪವಿತ್ರ ರಂಜಾನ್ ಆಚರಿಸಲಾಗುತ್ತದೆ. ಈ ವೇಳೆ ಎಲ್ಲಾ ಮುಸ್ಲಿಂ ಭಾಂದವರೂ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗುವುದು ವಿಶೇಷ. ಈ ಹಿನ್ನೆಲೆಯಲ್ಲಿ ಇಂದು ಮುಸ್ಲಿಂ ಸಮುದಾಯದ ಮುಖಂಡರನ್ನು ಕಚೇರಿಗೆ ಕರೆಸಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ಸಭೆ ನಡೆಸಿದ್ದಾರೆ.

ಈ ವೇಳೆ, "ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿರುವುದಿಲ್ಲ. ಹೀಗಾಗಿ ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಈ ವಿಶೇಷ ಸಂದರ್ಭದಲ್ಲಿ ಎಲ್ಲರೂ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಸಹಕರಿಸಿ. ಅಲ್ಲದೆ, ಈದ್ ಶುಭಾಶಯಕ್ಕಾಗಿ ಕೈಕುಲುಕುವುದು, ತಬ್ಬಿಕೊಳ್ಳುವುದನ್ನು ಆದಷ್ಟು ತಪ್ಪಿಸಬೇಕು. ಕಂಟೈನ್ಮೆಂಟ್ ಪ್ರದೇಶದಲ್ಲಿ ಈ ರೀತಿಯಲ್ಲಿ ಶುಭಾಶಯ ಯಾವುದೇ ಕಾರಣಕ್ಕೂ ಕೋರಬಾರದು. ಈದ್ಗಾಗಳಲ್ಲಿ ಪ್ರಾರ್ಥನೆಗೆ ಅವಕಾಶವಿರುವುದಿಲ್ಲ" ಎಂದು ತಿಳಿಸಿದ್ದಾರೆ.

ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 7 ರವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್‌ಡೌನ್ ಇರಲಿದೆ. ಈ ಅವಧಿಯಲ್ಲಿ ದಿನಸಿ ಸಾಮಾಗ್ರಿಗಳು, ಹಾಲು, ತರಕಾರಿ, ಮೀನು, ಮಾಂಸ, ಕೋಳಿ ಅಂಗಡಿಗಳು ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳನ್ನು ತೆರೆಯಲು ಮಾತ್ರ ಅವಕಾಶ ನೀಡಲಾಗುವುದು. ಯಾವುದೇ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇರುವುದಿಲ್ಲ. ಜನರು ಅನಗತ್ಯವಾಗಿ ಹೊರಬಾರದೆ ಸ್ವಯಂಪ್ರೇರಿತರಾಗಿ ಮನೆಯಲ್ಲಿಯೇ ಇರುವಂತೆಯೂ ಸೂಚನೆ ನೀಡಿದ್ದಾರೆ.

(ವರದಿ - ಹೆಚ್.ಆರ್.ನಾಗರಾಜ ಶಿವಮೊಗ್ಗ)

ಇದನ್ನೂ ಓದಿ : ಕಂಗಾಲಾಗಿರುವ ಕೃಷಿ ಸಮುದಾಯ; ಸೂಕ್ತ ಬೆಲೆ ಸಿಗದೆ ಮೆಣಸಿನಕಾಯಿ ಬೆಳೆ ನಾಶಗೊಳಿಸಿದ ರೈತ
First published: May 23, 2020, 5:29 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading