ಲಾಕ್​ಡೌನ್ ಅವಧಿಯಲ್ಲಿ ಕೂಲಿಕಾರ್ಮಿಕರ ವೇತನ ನಿಲ್ಲಿಸುವಂತಿಲ್ಲ; ಬಾಡಿಗೆ ಕೇಳುವಂತಿಲ್ಲ: ಕೇಂದ್ರ ನಿರ್ದೇಶನ

ಲಾಕ್ ಡೌನ್​ನ ನಿಯಮ ಉಲ್ಲಂಘಿಸಿದವರಿಗೆ ಮತ್ತು ಈ ಅವಧಿಯಲ್ಲಿ ಬೇರೆ ನಗರ, ಜಿಲ್ಲೆಗಳಿಗೆ ಪ್ರಯಾಣ ಮಾಡಿದವರನ್ನು ಕನಿಷ್ಠ 14 ದಿನ ಸರ್ಕಾರದ ವ್ಯವಸ್ಥೆಯಲ್ಲಿ ಕ್ವಾರಂಟೈನ್​ನಲ್ಲಿಡುವಂತೆ ಕೇಂದ್ರ ಸರ್ಕಾರ ಸಲಹೆ ನೀಡಿದೆ.

news18
Updated:March 29, 2020, 2:09 PM IST
ಲಾಕ್​ಡೌನ್ ಅವಧಿಯಲ್ಲಿ ಕೂಲಿಕಾರ್ಮಿಕರ ವೇತನ ನಿಲ್ಲಿಸುವಂತಿಲ್ಲ; ಬಾಡಿಗೆ ಕೇಳುವಂತಿಲ್ಲ: ಕೇಂದ್ರ ನಿರ್ದೇಶನ
ಸಾಂದರ್ಭಿಕ ಚಿತ್ರ
  • News18
  • Last Updated: March 29, 2020, 2:09 PM IST
  • Share this:
ನವದೆಹಲಿ(ಮಾ. 29): ಏಪ್ರಿಲ್ 14ರವರೆಗೂ ಲಾಕ್ ಡೌನ್ ಕ್ರಮವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಎಲ್ಲಾ ರಾಜ್ಯಗಳಿಗೂ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ನಿನ್ನೆ ಸಂಜೆ ಮತ್ತು ಇವತ್ತು ಬೆಳಗ್ಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿ ಮತ್ತು ಡಿಜಿಪಿಗಳ ಜೊತೆ ಕೇಂದ್ರ ಸಂಪುಟ ಕಾರ್ಯದರ್ಶಿ ಮತ್ತು ಗೃಹ ಕಾರ್ಯದರ್ಶಿಗಳು ವಿಡಿಯೋ ಕಾನ್ಫೆರೆನ್ಸ್​ನಲ್ಲಿ ಮಾತನಾಡಿ ವಿವಿಧ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ದೇಶದೆಲ್ಲೆಡೆ ಲಾಕ್ ಡೌನ್ ಕಾರ್ಯವನ್ನು ರಾಜ್ಯ ಸರ್ಕಾರಗಳು ನಿಭಾಯಿಸಿರುವ ರೀತಿ ಕೇಂದ್ರ ಸರ್ಕಾರಕ್ಕೆ ಸಮಾಧಾನವಿದೆ. ಕೊರೋನಾ ವೈರಸ್ ಸೋಂಕು ಹರಡುವುದನ್ನು ತಪ್ಪಿಸಲು ಮೂರು ವಾರ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಯಾಗುವುದು ಮುಖ್ಯ ಎಂದು ಸರ್ಕಾರ ಹೇಳಿದೆ.

ಲಾಕ್ ಡೌನ್​ನ ನಿಯಮ ಉಲ್ಲಂಘಿಸಿದವರಿಗೆ ಮತ್ತು ಈ ಅವಧಿಯಲ್ಲಿ ಬೇರೆ ನಗರ, ಜಿಲ್ಲೆಗಳಿಗೆ ಪ್ರಯಾಣ ಮಾಡಿದವರನ್ನು ಕನಿಷ್ಠ 14 ದಿನ ಸರ್ಕಾರದ ವ್ಯವಸ್ಥೆಯಲ್ಲಿ ಕ್ವಾರಂಟೈನ್​ನಲ್ಲಿಡುವಂತೆ ಕೇಂದ್ರ ಸರ್ಕಾರ ಸಲಹೆ ನೀಡಿದೆ.

ವಲಸಿಗ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ಹೋಗುತ್ತಿರುವುದೇ ಈಗ ವಿವಿಧ ಸರ್ಕಾರಗಳಿಗೆ ತಲೆ ನೋವು ತಂದಿದೆ. ಈ ಹಿನ್ನೆಲೆಯಲ್ಲಿ ಪ್ರತೀ ರಾಜ್ಯ ಮತ್ತು ಜಿಲ್ಲೆಗಳ ಗಡಿಯನ್ನು ಸಂಪೂರ್ಣವಾಗಿ ಬಂದ್ ಮಾಡಬೇಕು. ಈ ಗಡಿ ದಾಟಿ ಯಾರೂ ಕೂಡ ಆ ಕಡೆ ಈ ಕಡೆ ಹೋಗದಂತೆ ನಿಗಾ ವಹಿಸಬೇಕು. ಕೇವಲ ಸರಕು ಸಾಗಣೆ ವಾಹನಗಳಿಗೆ ಮಾತ್ರ ಓಡಾಡಲು ಅನುಮತಿ ಕೊಡಬೇಕು ಎಂದು ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಕೊರೋನಾ ತಗುಲುವ ಮುನ್ನವೇ ಹಸಿವಿನಿಂದ ಸಾಯುವ ಭೀತಿಯಲ್ಲಿ ಬೂದಿಗುಂದಿ ಲೆಪ್ರಸಿ ಕಾಲೊನಿ ಜನರು

ಈ ಕಾರ್ಯವನ್ನು ಅನುಷ್ಠಾನಗೊಳಿಸುವ ಹೊಣೆಯನ್ನು ಜಿಲ್ಲಾಧಿಕಾರಿಗಳು ಮತ್ತು ಎಸ್​ಪಿಗಳಿಗೆ ವಹಿಸಲಾಗಿದೆ.

ಕೂಲಿ ಕಾರ್ಮಿಕರು ವಲಸೆ ಹೋಗುವಂತಹ ಪರಿಸ್ಥಿತಿ ಎದುರಾಗದಂತೆ ನೋಡಿಕೊಳ್ಳಬೇಕು. ಬಡವರು ಮತ್ತು ಅಗತ್ಯವಿದ್ದವರಿಗೆ ಆಹಾರ ಮತ್ತು ವಸತಿ ವ್ಯವಸ್ಥೆ ಏರ್ಪಡಿಸಿದಂತೆಯೇ, ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲೂ ವ್ಯವಸ್ಥೆ ಮಾಡಬೇಕು. ಲಾಕ್ ಡೌನ್ ಅವಧಿಯಲ್ಲಿ ಕಾರ್ಮಿಕರಿಗೆ ವೇತನ ತಪ್ಪದಂತೆ ನೋಡಿಕೊಳ್ಳಬೇಕು. ಕಾರ್ಮಿಕರಿಂದ ಮನೆ ಬಾಡಿಗೆ ಕೇಳದಂತೆ ಮನೆಯ ಮಾಲೀಕರಿಗೆ ಸೂಚನೆ ನೀಡಬೇಕು. ಕಾರ್ಮಿಕರು ಮತ್ತು ವಿದ್ಯಾರ್ಥಿಗಳನ್ನು ಮನೆ ಖಾಲಿ ಮಾಡುವಂತೆ ಹೇಳುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.ನವದೆಹಲಿ(ಮಾ. 29): ಏಪ್ರಿಲ್ 14ರವರೆಗೂ ಲಾಕ್ ಡೌನ್ ಕ್ರಮವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಎಲ್ಲಾ ರಾಜ್ಯಗಳಿಗೂ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ನಿನ್ನೆ ಸಂಜೆ ಮತ್ತು ಇವತ್ತು ಬೆಳಗ್ಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿ ಮತ್ತು ಡಿಜಿಪಿಗಳ ಜೊತೆ ಕೇಂದ್ರ ಸಂಪುಟ ಕಾರ್ಯದರ್ಶಿ ಮತ್ತು ಗೃಹ ಕಾರ್ಯದರ್ಶಿಗಳು ವಿಡಿಯೋ ಕಾನ್ಫೆರೆನ್ಸ್​ನಲ್ಲಿ ಮಾತನಾಡಿ ವಿವಿಧ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ದೇಶದೆಲ್ಲೆಡೆ ಲಾಕ್ ಡೌನ್ ಕಾರ್ಯವನ್ನು ರಾಜ್ಯ ಸರ್ಕಾರಗಳು ನಿಭಾಯಿಸಿರುವ ರೀತಿ ಕೇಂದ್ರ ಸರ್ಕಾರಕ್ಕೆ ಸಮಾಧಾನವಿದೆ. ಕೊರೋನಾ ವೈರಸ್ ಸೋಂಕು ಹರಡುವುದನ್ನು ತಪ್ಪಿಸಲು ಮೂರು ವಾರ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಯಾಗುವುದು ಮುಖ್ಯ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: Mann ki Baat: 21 ದಿನಗಳ ಲಾಕ್​ಡೌನ್ ಘೋಷಿಸಿದ್ದಕ್ಕೆ ಜನರಲ್ಲಿ ಕ್ಷಮೆ ಕೇಳಿದ ಪ್ರಧಾನಿ ಮೋದಿ

ಲಾಕ್ ಡೌನ್​ನ ನಿಯಮ ಉಲ್ಲಂಘಿಸಿದವರಿಗೆ ಮತ್ತು ಈ ಅವಧಿಯಲ್ಲಿ ಬೇರೆ ನಗರ, ಜಿಲ್ಲೆಗಳಿಗೆ ಪ್ರಯಾಣ ಮಾಡಿದವರನ್ನು ಕನಿಷ್ಠ 14 ದಿನ ಸರ್ಕಾರದ ವ್ಯವಸ್ಥೆಯಲ್ಲಿ ಕ್ವಾರಂಟೈನ್​ನಲ್ಲಿಡುವಂತೆ ಕೇಂದ್ರ ಸರ್ಕಾರ ಸಲಹೆ ನೀಡಿದೆ.

ವಲಸಿಗ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ಹೋಗುತ್ತಿರುವುದೇ ಈಗ ವಿವಿಧ ಸರ್ಕಾರಗಳಿಗೆ ತಲೆ ನೋವು ತಂದಿದೆ. ಈ ಹಿನ್ನೆಲೆಯಲ್ಲಿ ಪ್ರತೀ ರಾಜ್ಯ ಮತ್ತು ಜಿಲ್ಲೆಗಳ ಗಡಿಯನ್ನು ಸಂಪೂರ್ಣವಾಗಿ ಬಂದ್ ಮಾಡಬೇಕು. ಈ ಗಡಿ ದಾಟಿ ಯಾರೂ ಕೂಡ ಆ ಕಡೆ ಈ ಕಡೆ ಹೋಗದಂತೆ ನಿಗಾ ವಹಿಸಬೇಕು. ಕೇವಲ ಸರಕು ಸಾಗಣೆ ವಾಹನಗಳಿಗೆ ಮಾತ್ರ ಓಡಾಡಲು ಅನುಮತಿ ಕೊಡಬೇಕು ಎಂದು ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ.

ಈ ಕಾರ್ಯವನ್ನು ಅನುಷ್ಠಾನಗೊಳಿಸುವ ಹೊಣೆಯನ್ನು ಜಿಲ್ಲಾಧಿಕಾರಿಗಳು ಮತ್ತು ಎಸ್​ಪಿಗಳಿಗೆ ವಹಿಸಲಾಗಿದೆ.

ಕೂಲಿ ಕಾರ್ಮಿಕರು ವಲಸೆ ಹೋಗುವಂತಹ ಪರಿಸ್ಥಿತಿ ಎದುರಾಗದಂತೆ ನೋಡಿಕೊಳ್ಳಬೇಕು. ಬಡವರು ಮತ್ತು ಅಗತ್ಯವಿದ್ದವರಿಗೆ ಆಹಾರ ಮತ್ತು ವಸತಿ ವ್ಯವಸ್ಥೆ ಏರ್ಪಡಿಸಿದಂತೆಯೇ, ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲೂ ವ್ಯವಸ್ಥೆ ಮಾಡಬೇಕು. ಲಾಕ್ ಡೌನ್ ಅವಧಿಯಲ್ಲಿ ಕಾರ್ಮಿಕರಿಗೆ ವೇತನ ತಪ್ಪದಂತೆ ನೋಡಿಕೊಳ್ಳಬೇಕು. ಕಾರ್ಮಿಕರಿಂದ ಮನೆ ಬಾಡಿಗೆ ಕೇಳದಂತೆ ಮನೆಯ ಮಾಲೀಕರಿಗೆ ಸೂಚನೆ ನೀಡಬೇಕು. ಕಾರ್ಮಿಕರು ಮತ್ತು ವಿದ್ಯಾರ್ಥಿಗಳನ್ನು ಮನೆ ಖಾಲಿ ಮಾಡುವಂತೆ ಹೇಳುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

First published:March 29, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading