HOME » NEWS » Coronavirus-latest-news » CENTRAL MINISTER HARSH VARDHAN CALLS MEETING OF HEALTH MINISTERS OF 11 STATES DBDEL SNVS

ಕೇಂದ್ರದೊಂದಿಗೆ ಇಂದು ಕರ್ನಾಟಕ ಸೇರಿ 11 ರಾಜ್ಯಗಳ ಆರೋಗ್ಯ ಸಚಿವರ ಸಭೆ

ಏಪ್ರಿಲ್ 8ರಂದು ಸಿಎಂಗಳ ಜೊತೆ ಪ್ರಧಾನಿ ಸಭೆ ಇರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಕೇಂದ್ರ ಸಚಿವ ಹರ್ಷವರ್ಧನ್ ಅವರು 11 ರಾಜ್ಯಗಳ ಆರೋಗ್ಯ ಸಚಿವರ ಜೊತೆ ಇಂದು ಸಭೆ ನಡೆಸಲಿದ್ದಾರೆ. ಇದರ ವರದಿ ಆಧಾರದ ಮೇಲೆ ಸಿಎಂಗಳ ಜೊತೆ ಪ್ರಧಾನಿ ಚರ್ಚೆ ನಡೆಸುವ ಸಾಧ್ಯತೆ ಇದೆ.

news18-kannada
Updated:April 6, 2021, 9:44 AM IST
ಕೇಂದ್ರದೊಂದಿಗೆ ಇಂದು ಕರ್ನಾಟಕ ಸೇರಿ 11 ರಾಜ್ಯಗಳ ಆರೋಗ್ಯ ಸಚಿವರ ಸಭೆ
ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್​
  • Share this:
ನವದೆಹಲಿ(ಏ.‌ 6): ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಪ್ರತಿ ದಿನ ಒಂದು ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಕಂಡುಬರಲು ಆರಂಭಿಸಿದ ಹಿನ್ನೆಲೆಯಲ್ಲಿ ಇವತ್ತು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು ಕರ್ನಾಟಕ ಸೇರಿದಂತೆ 11 ರಾಜ್ಯಗಳ ಆರೋಗ್ಯ ಸಚಿವರ ಸಭೆ ಕರೆದಿದ್ದಾರೆ. ದೇಶದಲ್ಲಿ ದಾಖಲಾಗುತ್ತಿರುವ ಒಟ್ಟು ಕೊರೋನಾ ಪ್ರಕರಣಗಳ ಪೈಕಿ ಶೇಕಡಾ 90ರಷ್ಟು ಪ್ರಕರಣಗಳು ಮಹಾರಾಷ್ಟ್ರ, ಕರ್ನಾಟಕ, ಪಂಜಾಬ್, ಕೇರಳ, ಛತ್ತೀಸ್​ಗಡ, ಉತ್ತರ ಪ್ರದೇಶ, ಗುಜರಾತ್, ತಮಿಳುನಾಡು, ದೆಹಲಿ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕಂಡು ಬರುತ್ತಿವೆ. ಈ‌ ಹಿನ್ನೆಲೆಯಲ್ಲಿ ಈ 11 ರಾಜ್ಯಗಳ ಆರೋಗ್ಯ ಸಚಿವ ಜೊತೆ ಸಭೆ ನಡೆಸಲಾಗುವುದು.‌ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುವ ಸಭೆಯಲ್ಲಿ ಕೊರೊನಾ ನಿಯಂತ್ರಿಸಲು ಕೈಗೊಳ್ಳಬೇಕಾದ ಕಠಿಣ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುವುದು.

ಕೊರೋನಾ ದೇಶಾದ್ಯಂತ ತೀವ್ರವಾಗಿ ಹೆಚ್ಚಳ ಆಗುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ ‌8ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಿದ್ದಾರೆ. ಆ ಸಭೆಗೂ ಮುನ್ನ ವರದಿ ನೀಡಲೆಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಇಂದು ಅತಿ‌ ಹೆಚ್ಚು‌ ಕೊರೋನಾ ಕೇಸ್ ಗಳಿರುವ 11 ರಾಜ್ಯಗಳ ಆರೋಗ್ಯ ಸಚಿವರ ಸಭೆ ಕರೆದಿದ್ದಾರೆ. ಹರ್ಷವರ್ಧನ್‌ ಅವರು ನೀಡುವ ವರದಿ ಆಧರಿಸಿ ಪ್ರಧಾನಿ ಮೋದಿ ಸಿಎಂಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ ಬಳಿಕ ದೇಶದ್ಯಾಂತ ಏಕ ರೂಪದ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಬಗ್ಗೆ ಗಂಭೀರ ಚಿಂತನೆ ಇದ್ದು ಈ ವಿಷಯಗಳ ಬಗ್ಗೆ ಕೂಡ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ರಾಜ್ಯಗಳ ಸಲಹೆ, ಶಿಫಾರಸು ಅನ್ನು ಪಡೆಯಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆ; ಇಂದು ಮಹತ್ವದ ದಿನ – 4 ರಾಜ್ಯಗಳಲ್ಲಿ ಇಂದೇ ಮತದಾನ ಮುಕ್ತಾಯ

ದೇಶದಲ್ಲಿ ಮೊತ್ತ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು, ಕೇರಳದಲ್ಲಿ. ಅದಾದ ಬಳಿಕ ಅದು ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಒಂದು ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಈವರೆಗಿನ ದಾಖಲೆ ಆಗಿತ್ತು. ಆದರೆ ಈಗ ಎರಡನೇ ಅಲೆ ಶುರುವಾದ ಮೇಲೆ ಇದೇ ಮೊದಲ ಬಾರಿಗೆ ಭಾನುವಾರ 1,03,558 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಆತಂಕಗೊಂಡಿರುವ ಕೇಂದ್ರ ಸರ್ಕಾರ ಒಂದೆಡೆ ಮುಖ್ಯಮಂತ್ರಿಗಳ ಸಭೆ ಮತ್ತು ಇನ್ನೊಂದೆಡೆ ಅತಿ‌ ಹೆಚ್ಚು‌ ಕೊರೋನಾ ಕೇಸ್ ಗಳಿರುವ 11 ರಾಜ್ಯಗಳ ಆರೋಗ್ಯ ಸಚಿವರ ಜೊತೆ ಸಭೆ ನಡೆಸಲು ಮುಂದಾಗಿದೆ.

ವರದಿ: ಧರಣೀಶ್ ಬೂಕನಕೆರೆ
Published by: Vijayasarthy SN
First published: April 6, 2021, 9:44 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories