ಬೆಂಗಳೂರು(ಮಾ. 24): ದೇಶಾದ್ಯಂತ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಲಿದೆ. ಇದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಕೊಳ್ಳತ್ತಿದೆ. ಹಲವು ರಾಜ್ಯಗಳು ವಿಶೇಷ ಪ್ಯಾಕೇಜ್ ಗಳನ್ನು ಘೋಷಿಸಿವೆ. ಇದರ ಮಧ್ಯೆ ಕೇಂದ್ರ ಸಚಿವರೊಬ್ಬರು ಕೊರೋನಾ ವಿರುದ್ದ ಹೋರಾಟಕ್ಕೆ ಬೆಂಬಲವನ್ನು ಸೂಚಿಸಿದ್ದಾರೆ.
ಕೇಂದ್ರ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಒಂದು ತಿಂಗಳ ವೇತನವನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಗೆ ನೀಡಿದ್ದಾರೆ. ಜೊತೆಗೆ ತಮ್ಮ ಆಪ್ತ ಸಹಾಯಕರುಗಳಿಗೆ ಧನಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.
ಪೂರ್ಣ ವೇತನ ನೀಡಿ ; ಆಂಧ್ರ ಸರ್ಕಾರ ಆದೇಶ
ನೌಕರರಿಗೆ ಪೂರ್ಣ ಸಂಬಳ ಕೊಡುವಂತೆ ಎಲ್ಲಾ ಖಾಸಗಿ ಕಂಪನಿಗಳಿಗೆ ಆಂಧ್ರ ಸರ್ಕಾರ ಆದೇಶ ನೀಡಿದೆ. ಕಾಂಟ್ರ್ಯಾಕ್ಟ್ ಕೆಲಸಗಾರರಿಗೂ ಪೂರ್ತಿ ಸಂಬಳ ನೀಡಬೇಕು, ಹೊರಗುತ್ತಿಗೆಯ ಕೆಲಸಗಾರರಿಗೂ ತಿಂಗಳ ಸಂಬಳವನ್ನೇ ಕೊಡಬೇಕು.ಈ ಆದೇಶ ಉಲ್ಲಂಘಿಸಿದರೆ ಕಂಪನಿಗಳ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಖಡಕ್ ಸಂದೇಶವನ್ನು ಸಿಎಂ ಜಗನ್ಮೋಹನ್ ರೆಡ್ಡಿ ಸರ್ಕಾರ ರವಾನಿಸಿದೆ.
ದೇಶದಲ್ಲಿ ಇದುವೆರಗೂ 519 ಮಂದಿಗೆ ಸೋಂಕು ಇರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಜತೆಗೆ ಇಂದು ಮುಂಬೈನಲ್ಲಿ 65 ವರ್ಷದ ವ್ಯಕ್ತಿ ಕೊರೋನಾ ವೈರಸ್ನಿಂದಾಗಿ ಮೃತಪಟ್ಟಿದ್ದು, ದೇಶದಲ್ಲಿ ಸಾವಿನ ಸಂಖ್ಯೆ 10ಕ್ಕೇರಿದೆ.
ಇದನ್ನೂ ಓದಿ :
ಕೊರೋನಾ ಭೀತಿ ಹೆಚ್ಚಳ - ಕಲಾಪ ಮುಗಿಯುತ್ತಿದ್ದಂತೆಯೇ ಜಿಲ್ಲೆಗಳಿಗೆ ತೆರಳಿ ಎಂದು ಸಚಿವರಿಗೆ ಸಿಎಂ ತಾಕೀತು
ಈ ಕೊರೋನಾ ನಿಗ್ರಹಕ್ಕಾಗಿ ಇಡೀ ದೇಶಾದ್ಯಂತ ಲಾಕ್ಡೌನ್ ಘೋಷಣೆ ಮಾಡಲಾಗಿದೆ. 30 ರಾಜ್ಯಗಳ 548 ಜಿಲ್ಲೆಗಳನ್ನು ಮಾರ್ಚ್ 31ರವರೆಗೆ ಲಾಕ್ಡೌನ್ ಮಾಡಲಾಗಿದೆ. ಅಗತ್ಯ ಮತ್ತು ತುರ್ತು ಸೇವೆ ಹೊರತುಪಡಿಸಿ ಯಾವುದೇ ಸೇವೆ ಲಭ್ಯವಿರುವುದಿಲ್ಲ. ಇಂದು ಮಧ್ಯರಾತ್ರಿಯಿಂದ ಎಲ್ಲಾ ದೇಶೀಯ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ