ರೆಸ್ಟೋರೆಂಟ್, ವಾಹನ ಓಡಾಟಕ್ಕೆ ಅವಕಾಶ ನೀಡಿ ಲಾಕ್​ಡೌನ್ ನಿಯಮ ಉಲ್ಲಂಘಿಸಿದೆ ಎಂದು ಕೇರಳ ಸರ್ಕಾರದ ವಿರುದ್ದ ಕೇಂದ್ರದ ಆರೋಪ

ಸುಪ್ರೀಂಕೋರ್ಟ್ ನಿರ್ದೇಶನಗಳನ್ನು ಪತ್ರದಲ್ಲಿ ಉಲ್ಲೇಖಿಸಿರುವ ಭಳ್ಳಾ ಅವರು, ಜನರ ಸುರಕ್ಷತೆ ದೃಷ್ಟಿಯಿಂದ ಭಾರತ ಸರ್ಕಾರದ ನಿರ್ದೇಶನಗಳನ್ನು ರಾಜ್ಯ ಸರ್ಕಾರ ಅನುಸರಿಸಲಿದೆ ಎಂದು ನಾವು ನಂಬುತ್ತೇವೆ ಮತ್ತು ನಿರೀಕ್ಷಿಸುತ್ತೇವೆ ಎಂದು ಹೇಳಿದ್ದಾರೆ.

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

 • Share this:
  ನವದೆಹಲಿ: ನಿಗದಿತ ಸ್ಥಳಗಳಲ್ಲಿ ಸಾರಿಗೆ ಸಂಚಾರ, ಬುಕ್ ಶಾಪ್, ರೆಸ್ಟೋರೆಂಟ್ ಹಾಗೂ ಬಾರ್ಬರ್ ಅಂಗಡಿ ತೆರೆಯಲು ಅವಕಾಶ ನೀಡಿದ ಕೇರಳ ಸರ್ಕಾರದ ತೀರ್ಮಾನದ ವಿರುದ್ದ ಕೇಂದ್ರ ಗೃಹ ಸಚಿವಾಲಯ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿದೆ. ಕೇರಳ ಸರ್ಕಾರ ಲಾಕ್​ಡೌನ್ ಮಾರ್ಗಸೂಚಿಗಳನ್ನು ದುರ್ಬಲಗೊಳಿಸಿದೆ ಎಂದು ಆರೋಪಿಸಿದೆ.

  ವಿಪತ್ತು ನಿರ್ವಹಣಾ ಕಾಯ್ದೆಯಡಿ ಗೃಹ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಗಳನ್ನು ರಾಜ್ಯಗಳು ಉಲ್ಲಂಘಿಸುವಂತಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಅವರು ಕಟುವಾಗಿ ಕೇರಳ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

  ಮಾರ್ಗಸೂಚಿ ನಿಬಂಧನೆ 4(i) ಮತ್ತು (ii) ಬಗ್ಗೆ ನಿಮ್ಮ ಗಮನಕ್ಕೆ ತರಲು ಇಚ್ಛಿಸುತ್ತೇನೆ. ವಿಪತ್ತು ನಿರ್ವಹಣಾ ಕಾಯ್ದೆಯಡಿ ಜಾರಿಗೊಳಿಸಲಾದ ಮಾರ್ಗಸೂಚಿಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ದುರ್ಬಲಗೊಳಿಸುವಂತಿಲ್ಲ ಎಂದು ಉಲ್ಲೇಖಿಸಲಾಗಿದೆ. ಮತ್ತು ಆ ಮಾರ್ಗಸೂಚಿಗಳನ್ನು ಎಲ್ಲಡೆ ಸಮಾನವಾಗಿ ಕಠಿಣವಾಗಿ ಜಾರಿಗೊಳಿಸಬೇಕು ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಳ್ಳಾ ಅವರು ಪತ್ರದಲ್ಲಿ ಬರೆದಿದ್ದಾರೆ.

  ಸುಪ್ರೀಂಕೋರ್ಟ್ ನಿರ್ದೇಶನಗಳನ್ನು ಪತ್ರದಲ್ಲಿ ಉಲ್ಲೇಖಿಸಿರುವ ಭಳ್ಳಾ ಅವರು, ಜನರ ಸುರಕ್ಷತೆ ದೃಷ್ಟಿಯಿಂದ ಭಾರತ ಸರ್ಕಾರದ ನಿರ್ದೇಶನಗಳನ್ನು ರಾಜ್ಯ ಸರ್ಕಾರ ಅನುಸರಿಸಲಿದೆ ಎಂದು ನಾವು ನಂಬುತ್ತೇವೆ ಮತ್ತು ನಿರೀಕ್ಷಿಸುತ್ತೇವೆ ಎಂದು ಹೇಳಿದ್ದಾರೆ.

  ಇದನ್ನು ಓದಿ: ಕೊರೋನಾ ಭಯ; ಜೂಮ್ ವಿಡಿಯೋ ಕಾಲ್ ಮೂಲಕ ಮದುವೆ; ಕಾನೂನು ಮಾನ್ಯತೆ ನೀಡಿದ ನ್ಯೂಯಾರ್ಕ್ ಆಡಳಿತ

  ಕೇರಳ ಸರ್ಕಾರವು ರೆಸ್ಟೋರೆಂಟ್​, ಅತಿಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳನ್ನು ಮುನ್ಸಿಪಲ್ ನಗರಗಳಲ್ಲಿ ತೆರೆಯಲು  ನಿರ್ಧಾರ ತೆಗೆದುಕೊಂಡಿದೆ. ಲಾಕ್​ಡೌನ್​ ಸಮಯದಲ್ಲಿ ಬಾರ್ಬರ್ ಶಾಪ್ ಹಾಗೂ ಬುಕ್​ ಶಾಪ್​ಗಳನ್ನು ತೆರೆಯಲು ಅವಕಾಶ ನೀಡುವ ಮೂಲಕ ಕೇಂದ್ರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ.

   
  First published: