ಚಾಮರಾಜನಗರದಲ್ಲಿ ಸುರಕ್ಷಾ ಕೋವಿಡ್ ರಕ್ಷಣಾ ಪಡೆ ರಚನೆ: ರಾಜ್ಯದಲ್ಲೇ ವಿನೂತನ ಕ್ರಮ

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಚಾಮರಾಜನಗರ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿದೆ. ಕಳೆದ ಬಾರಿಗೆ ಹೋಲಿಸಿದರೆ ಕೊರೋನಾ ಬಹಳ ವೇಗವಾಗಿ ಹರಡುತ್ತಿದೆ. ಈಗಾಗಲೇ ಕಳೆದ 2 ವಾರಗಳಿಂದ ಜನರಲ್ಲಿ ಜಾಗೃತಿ ಮೂಡಿಸುವ  ಮಾಡುತ್ತಿದ್ದೇವೆ ಎಂದರು.

ಸುರಕ್ಷಾ ಕೋವಿಡ್ ರಕ್ಷಣಾ ಪಡೆ

ಸುರಕ್ಷಾ ಕೋವಿಡ್ ರಕ್ಷಣಾ ಪಡೆ

  • Share this:
ಚಾಮರಾಜನಗರ (ಏ.18): ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ  ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಮುಂದಾಗಿರುವ ಜಿಲ್ಲಾಡಳಿತ  ರಾಜ್ಯದಲ್ಲೇ ವಿನೂತನವಾದ ಸುರಕ್ಷಾ ಕೋವಿಡ್ ರಕ್ಷಣಾ ಪಡೆಗಳನ್ನು ರಚಿಸಿದೆ. ಈ ಪಡೆಗಳನ್ನು ಕೋವಿಡ್ ತಡೆಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸಲು ವಿಶೇಷವಾಗಿ ಸಜ್ಜುಗೊಳಿಸಲಾಗಿದೆ.

ಕೋವಿಡ್ ಶಿಷ್ಟಾಚಾರ ಉಲ್ಲಂಘಿಸುವವರ ವಿರುದ್ದ ದಂಡ ವಿಧಿಸುವಿಕೆ, ಮಾಸ್ಕ್ ಧರಿಸದೇ ಓಡಾಟ ನಡೆಸುವವರಿಗೆ ದಂಡ ಹಾಕುವುದು,  ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೆ ವ್ಯಾಪಾರ ವಹಿವಾಟು ನಡೆಸುವ ಅಂಗಡಿಮುಂಗಟ್ಟುಗಳ ಲೈಸೆನ್ಸ್ ರದ್ದುಗೊಳಿಸುವುದು, ಸಭೆ ಸಮಾರಂಭಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಜನ ಸೇರಿದ್ದರೆ, ಆಯೋಜಕರ ಮೇಲೆ ಎಫ್ ಐಆರ್ ದಾಖಲಿಸುವುದು. ಸಾರ್ವಜನಿಕರಲ್ಲಿ ಕೋವಿಡ್ ನಿಯಮಗಳ ಬಗ್ಗ ಜಾಗೃತಿ ಮೂಡಿಸುವ ಕೆಲಸಗಳನ್ನ ಈ ಪಡೆಗಳು ಮಾಡಲಿವೆ.

ಕೆ-ಸೆಟ್​ ಪರೀಕ್ಷೆ ಮುಂದೂಡುವಂತೆ ಪರೀಕ್ಷಾರ್ಥಿಗಳ ಆಗ್ರಹ; ಭವಿಷ್ಯ ರೂಪಿಸಿಕೊಳ್ಳಲು ಜೀವ ಪಣಕ್ಕಿಡುವುದು ಸರಿಯೇ ಎಂದು ಪ್ರಶ್ನೆ

ಜಿಲ್ಲೆಯಾದ್ಯಂತ 13 ಸುರಕ್ಷಾ ಕೋವಿಡ್ ರಕ್ಷಣಾ ಪಡೆಗಳನ್ನು  ರಚಿಸಲಾಗಿದೆ.  ಜಿಲ್ಲಾಧಿಕಾರಿಗಳು ಈಗಾಗಲೇ ರಚಿಸಿರುವ  ತರಬೇತಿ ಪಡೆದ  ಕ್ಷಿಪ್ರ ಕಾರ್ಯಾಚರಣೆ ತಂಡದ  ಪಡೆದ ಮೂವರು ಸದಸ್ಯರು, ಒಬ್ಬ ನಗರಸಭೆ ಅಥವಾ ಪುರಸಭೆ ಅಧಿಕಾರಿ ಮತ್ತು  ಒಬ್ಬ ಪೊಲೀಸ್ ಅಧಿಕಾರಿ ಸೇರಿದಂತೆ 5 ಮಂದಿ ಇರುತ್ತಾರೆ. ಈ ಪಡೆಗಳು ಜನನಿಬಿಡ ಪ್ರದೇಶ, ಹೋಟೆಲ್, ಅಂಗಡಿ ಮುಂಗಟ್ಟು, ಕಲ್ಯಾಣ ಮಂಟಪಗಳು, ಬಸ್ ನಿಲ್ದಾಣ ಮೊದಲಾದ ಕಡೆ ಕಾರ್ಯಾಚರಣೆ ನಡೆಸಲಿವೆ.



ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಚಾಮರಾಜನಗರ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿದೆ. ಕಳೆದ ಬಾರಿಗೆ ಹೋಲಿಸಿದರೆ ಕೊರೋನಾ ಬಹಳ ವೇಗವಾಗಿ ಹರಡುತ್ತಿದೆ. ಈಗಾಗಲೇ ಕಳೆದ 2 ವಾರಗಳಿಂದ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಆದರೂ ಜನರಲ್ಲಿ ನಿರ್ಲಕ್ಷ್ಯ ಹಾಗೂ ಉದಾಸೀನ ಭಾವನೆ ಕಾಣುತ್ತಿದೆ.  ಹಾಗಾಗಿ ಕೊರೋನಾ ಹರಡುವಿಕೆಯನ್ನು ತಡೆಗಟ್ಟುವ  ಹಿನ್ನಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು  ಸುರಕ್ಷಾ ಕೋವಿಡ್ ರಕ್ಷಣಾ ಪಡೆಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರ ಸಹಕಾರ  ಇಲ್ಲದಿದ್ದರೆ ಕೊರೋನಾ ಹರಡುವುದನ್ನು ತಡೆಗಟ್ಟುವುದು ಕಷ್ಟವಾಗಲಿದ್ದು, ಜನರು ಅರ್ಥ ಮಾಡಿಕೊಂಡು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಇಲ್ಲದಿದ್ದರೆ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ  ಕೋವಿಡ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ದ  ಎಫ್.ಐ.ಆರ್. ದಾಖಲಿಸುತ್ತೇವೆ ಎಂದು ಅವರು ಎಚ್ಚರಿಸಿದ್ದಾರೆ.

ಸ್ವತಃ ಕಾರ್ಯಾಚರಣೆಗಿಳಿದ ಜಿಲ್ಲಾಧಿಕಾರಿ:

ಚಾಮರಾಜನಗರದಲ್ಲಿಂದು ಸುರಕ್ಷಾ ಕೋವಿಡ್ ರಕ್ಷಣಾ ಪಡೆಯ ಕಾರ್ಯಾಚರಣೆಗೆ ಹಸಿರು ನಿಶಾನೆ ತೋರಿದ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸ್ವತಃ ಕೋವಿಡ್ ಸುರಕ್ಷಾ ಪಡೆಯೊಂದಿಗೆ  ನಗರದ  ವಿವಿಧೆಡೆ ಭೇಟಿ ನೀಡಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಸೂಚಿಸಿದರು. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೆ  ವ್ಯಾಪಾರ ಮಾಡುತ್ತಿದ್ದ ಅಂಗಡಿ ಮಾಲೀಕರನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ ಅಂಗಡಿ ಮುಚ್ಚಲು ಆದೇಶಿಸಿದರು. ಕೋವಿಡ್ ಶಿಷ್ಠಾಚಾರ ಉಲ್ಲಂಘಿಸಿದ ಕೆಲವು ಅಂಗಡಿಗಳನ್ನು ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಮುಚ್ಚಿಸುವ ಮೂಲಕ ಖಡಕ್ ಎಚ್ಚರಿಕೆ ನೀಡಲಾಯಿತು.
Published by:Latha CG
First published: