ಗ್ರಾಮ ಪಂಚಾಯಿತಿ ಮತ್ತು ನರೇಗಾ ಸ್ಥಳಗಳಿಗೆ ಚಿಕ್ಕಾಬಳ್ಳಾಪುರ ಸಿಇಓ ದಿಢೀರ್ ಭೇಟಿ: ಅಧಿಕಾರಿಗಳಿಗೆ ತೀವ್ರ ತರಾಟೆ 

ಗ್ರಾಮ ಪಂಚಾಯಿತಿಯಲ್ಲಿ ಸ್ಥಾಪಿಸಲಾಗಿರುವ ಸಹಾಯವಾಣಿ ಕೇಂದ್ರವು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸದ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದಿತ್ತು. ಹೀಗಾಗಿ ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಬಿ. ಫೌಜಿಯಾ ತರನ್ನುಮ್ ಸಾರ್ವಜನಿಕರ ಸಂಕಷ್ಟಗಳಿಗೆ ಸೂಕ್ತವಾಗಿ ಪ್ರತಿಕ್ರಿಯಿಸಲು ಸೂಚಿಸಿದರು.

news18-kannada
Updated:August 1, 2020, 2:56 PM IST
ಗ್ರಾಮ ಪಂಚಾಯಿತಿ ಮತ್ತು ನರೇಗಾ ಸ್ಥಳಗಳಿಗೆ ಚಿಕ್ಕಾಬಳ್ಳಾಪುರ ಸಿಇಓ ದಿಢೀರ್ ಭೇಟಿ: ಅಧಿಕಾರಿಗಳಿಗೆ ತೀವ್ರ ತರಾಟೆ 
ಚಿಕ್ಕಬಳ್ಳಾಪುರ ಸಿಇಓ
  • Share this:
ಚಿಕ್ಕಬಳ್ಳಾಪುರ(ಆ.01): ತಾಲ್ಲೂಕಿನ ಅಜ್ಜವಾರ ಗ್ರಾಮ ಪಂಚಾಯಿತಿಗೆ ಜಿಲ್ಲಾ ಪಂಚಾಯಿತಿಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊರೋನ ಹಿನ್ನೆಲೆಯಲ್ಲಿ ಸರ್ಕಾರವು ನೀಡಿರುವ ಮಾರ್ಗಸೂಚಿಯಂತೆ ಗ್ರಾಮ ಪಂಚಾಯಿತಿ ವತಿಯಿಂದ ಕೈಗೊಂಡಿರುವ ಗ್ರಾಮ ನೈರ್ಮಲ್ಯ ಕಾಮಗಾರಿಗಳು, ನರೇಗ ಕಾಮಗಾರಿ ಸದುಪಯೋಗ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲಿಸಿದರು.

ಗ್ರಾಮ ಪಂಚಾಯಿತಿಯಲ್ಲಿ  ಸ್ಥಾಪಿಸಲಾಗಿರುವ ಸಹಾಯವಾಣಿ ಕೇಂದ್ರವು  ವ್ಯವಸ್ಥಿತವಾಗಿ ಕಾರ್ಯನಿರ್ವಹಿಸದ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದಿತ್ತು. ಹೀಗಾಗಿ ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಬಿ. ಫೌಜಿಯಾ ತರನ್ನುಮ್ ಸಾರ್ವಜನಿಕರ ಸಂಕಷ್ಟಗಳಿಗೆ ಸೂಕ್ತವಾಗಿ ಪ್ರತಿಕ್ರಿಯಿಸಲು ಸೂಚಿಸಿದರು.

ಗ್ರಾಮ ಪಂಚಾಯಿತಿಯಲ್ಲಿ ಸ್ಥಾಪಿಸಿರುವ ಸಹಾಯ ವಾಣಿ ಕೇಂದ್ರಕ್ಕೆ ವಿವಿಧ ವಯೋಮಾನದ ದುರ್ಬಲ ವರ್ಗದವರು ಆರೋಗ್ಯ ಸಂಬಂಧಿತ ವಿಷಯಗಳಿಗೆ ಕರೆ ಮಾಡಿರುವ ಬಗ್ಗೆ ಚರ್ಚಿಸಿದರು. ಇಲ್ಲಿನ ಸಹಾಯವಾಣಿ ಕೇಂದ್ರದ ಮುಖಾಂತರ ಆಯಾ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ದುರ್ಬಲ ವ್ಯಕ್ತಿಗಳಿಗೆ ಕರೆ ಮಾಡಿರುವ ಕುರಿತು ರಿಜಿಸ್ಟರ್​​ಗಳಲ್ಲಿ ಪ್ರತಿನಿತ್ಯ ದಾಖಲಿಸಿ ನಿರ್ವಹಿಸುತ್ತಿರುವ ಕುರಿತು ಕಡತಗಳನ್ನು ಪರಿಶೀಲನೆ ನಡೆಸಿದರು.

ನಂತರ ನರೇಗಾ ಯೋಜನೆಯಡಿ  ಕೈಗೊಂಡಿರುವ ವಿವಿಧ ಕಾಮಗಾರಿಗಳಲ್ಲಿ ಅವ್ಯವಹಾರ, ಜೆ.ಸಿ.ಬಿ ಮೂಲಕ ಕೆಲಸ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಆರೋಪಗಳು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ರೈತರು ತಮ್ಮ ಸ್ವಂತ ಜಮೀನಿನಲ್ಲಿ ನರೇಗಾ ಯೋಜನೆಯಡಿ ರೇಷ್ಮೆ ಇಲಾಖೆ ಒಗ್ಗೂಡಿಸುವಿಕೆಯಿಂದ ಕೈಗೊಂಡಿರುವ ಮರಗಡ್ಡಿ ನಾಟಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿಡ್ಲಘಟ್ಟ ತಾಲ್ಲೂಕಿನ ರೇಷ್ಮೆ ರೈತ ಉತ್ಪಾದಕರ ಕಂಪನಿ ನಿಯಮಿತ ಮಾರಾಟ ಮಳಿಗೆಗೆ ಭೇಟಿ ನೀಡಿ ರೈತರಿಗೆ ನೀಡಲಾಗುವ ವಿವಿಧ ಸೌಲಭ್ಯಗಳ ಬಗ್ಗೆ ಕಡತಗಳನ್ನ ಪರಿಶೀಲಿಸಿ ಪರಿಣಾಮಕಾರಿ ಯೋಜನೆಗಳನ್ನು ರೈತರಿಗೆ ತಲುಪಿಸಲು  ಅಧಿಕಾರಿಗಳಿಂದ ಮಾತ್ರ ಸಾಧ್ಯ, ಸಾರ್ವಜನಿಕರಿಗೆ, ರೈತರಿಗೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಸದುಪಯೋಗ ಪಡಿಸಿಕೊಳ್ಳಲು ಸಹಕಾರಿಯಾಗಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಿಬ್ಬೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ನರೇಗಾ ಯೋಜನೆಯಡಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಹಾಗೂ ದನದ ಕೊಟ್ಟಿಗೆ ಕಾಮಗಾರಿ ಪೂರ್ಣಗೊಂಡ ಸ್ಥಳಗಳಿಗೆ ಭೇಟಿ ನೀಡಿ ಗುಣಮಟ್ಟ, ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು. ಅಂಗರೇಖನಹಳ್ಳಿ ಗ್ರಾಮ ಪಂಚಾಯಿತಿಯ ಮರಳಕುಂಟೆ ಗ್ರಾಮಕ್ಕೆ ಭೇಟಿ ನೀಡಿ ನರೇಗಾ ಯೋಜನೆಯಡಿ ನಿರ್ಮಾಣ ಮಾಡಿರುವ ಕೃಷಿ ಹೊಂಡ ಕಾಮಗಾರಿಗಳು ಸೇರಿದಂತೆ ನರೇಗಾ ಯೋಜನೆಯಡಿ ಚಾಲ್ತಿಯಲ್ಲಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ಹಲವು ಕಡೆಗಳಲ್ಲಿ ಯೋಜನೆಗಳು ಸಮರ್ಪಕ ರೀತಿಯಲ್ಲಿ ಅನುಷ್ಠಾನಕ್ಕೆ ಮಾಡದೆ ಅಕ್ರಮದ ಆರೋಪಗಳು ಕೇಳಿ ಬಂದ ಹಿನ್ನೆಲೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಕಮಲ್ ಪಂತ್ ಬೆಂಗಳೂರು ಕಮಿಷನರ್ ಆಗಿ ಅಧಿಕಾರ; ಭಾವುಕರಾಗಿ ಬ್ಯಾಟನ್ ಕೊಟ್ಟು ನಿರ್ಗಮಿಸಿದ ಭಾಸ್ಕರ್ ರಾವ್

ಸಾರ್ವಜನಿಕರು ಸರ್ಕಾರದ ಯೋಜನೆಗಳು ಸದುಪಯೋಗ ಪಡಿಸಿಕೊಂಡು ಆರ್ಥಿಕ ಸಾಮಾಜಿಕ ಸಂಕಷ್ಟಗಳನ್ನು ಎದುರಿಸಲು ಸಮರ್ಥವಾಗಬೇಕು. ಜೆಸಿಬಿ ಬಳಸಿ ಕಾಮಗಾರಿ, ಕಳಪೆ ಮಟ್ಟದ ಸಾಮಾಗ್ರಿಗಳ ಖರೀದಿ ಮಾಡಿದ್ರೆ ನಿಮಗೆ ನಷ್ಟ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
Published by: Ganesh Nachikethu
First published: August 1, 2020, 2:51 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading